Ad Widget .

ಶಾಲೆಗಳು ಬಂದ್ ಗೊಂದಲ| ಸ್ಪಷ್ಟನೆ ನೀಡಿದ ಶಿಕ್ಷಣ ಇಲಾಖೆ| ಹಾಗಿದ್ರೆ ಎಲ್ಲೆಲ್ಲಿ ಶಾಲೆ ಬಂದ್ ಗೊತ್ತಾ? ಇಲ್ಲಿದೆ ಮಾಹಿತಿ

ಬೆಂಗಳೂರು: ಕೊರೋನಾ ಹಾಗೂ ಓಮಿಕ್ರಾನ್ ನಿಯಂತ್ರಣಕ್ಕಾಗಿ ಬೆಂಗಳೂರು ನಗರದಲ್ಲಿ 10, 11 ಮತ್ತು 12ನೇ ತರಗತಿ ಹೊತುಪಡಿಸಿ, 1 ರಿಂದ 9ನೇ ತರಗತಿವರೆಗೆ ಎಲ್ಲಾ ಮಾದರಿಯ ಶಾಲೆಗಳನ್ನು ಬಂದ್ ಮಾಡಲಾಗಿದೆ. ಬೆಂಗಳೂರು ಹೊರತುಪಡಿಸಿ ಇತರೆ ಜಿಲ್ಲೆಗಳಲ್ಲಿ ಯಥಾಸ್ಥಿತಿಯಲ್ಲಿ ಶಾಲೆಗಳು ನಡೆಯಲಿವೆ ಎಂಬುದಾಗಿ ಶಿಕ್ಷಣ ಇಲಾಖೆ ತಿಳಿಸಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಈ ಕುರಿತಂತೆ ಆದೇಶ ಹೊರಡಿಸಿರುವ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು, ರಾಜ್ಯದಲ್ಲಿ ಕೋವಿಡ್-19 ರೂಪಾಂತರಿ ವೈರಸ್ ಓಮಿಕ್ರಾನ್ ವೈರಾಣು ಸೋಂಕು ನಿಯಂತ್ರಿಸುವ ಕಾರಣದಿಂದ ಬೆಂಗಳೂರು ನಗರ ಜಿಲ್ಲೆಯಲ್ಲಿ ಶಾಲೆಗಳಲ್ಲಿನ ಭೌತಿಕ ತರಗತಿಗಳನ್ನು ಸ್ಥಗಿತಗೊಳಿಸುವ ಕ್ರಮವನ್ನು ಸರ್ಕಾರ ಕೈಗೊಂಡಿದೆ.

Ad Widget . Ad Widget . Ad Widget .

ಈ ನಿಟ್ಟಿನಲ್ಲಿ ಬೆಂಗಳೂರು ನಗರ ಜಿಲ್ಲೆಯ ವ್ಯಾಪ್ತಿಯಲ್ಲಿನ ಬೆಂಗಳೂರು ಉತ್ತರ, ದಕ್ಷಿಣ ಶೈಕ್ಷಣಿಕ ಜಿಲ್ಲೆಯಲ್ಲಿನ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ, ಎಲ್ ಕೆಜಿ, ಯುಕೆಜಿ ಹಾಗೂ 1 ರಿಂದ 9ನೇ ತರಗತಿವರೆಗೆ ಭೌತಿಕ ತರಗತಿಗಳನ್ನು ದಿನಾಂಕ ಜ. 06 ರಿಂದ ದಿನಾಂಕ 19ರವರೆಗೆ ಅಥವಾ ಮುಂದಿನ ಆದೇಶದವರೆಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಈ ಅವಧಿಯಲ್ಲಿ ಶಾಲೆಗಳು ಪರ್ಯಾಯ ಮಾರ್ಗಗಳ ಮೂಲಕ ಅಂದರೆ ಆನ್ ಲೈನ್, ಇತರೆ ಮಾರ್ಗಗಳ ಮೂಲಕ ಕಲಿಕಾ, ಬೋಧನಾ ಚಟುವಟಿಕೆಗಳನ್ನು, ಮುಂದುವರೆಸುವುದು. ಕೊರೋನಾ ಮುಂಜಾಗ್ರತೆಯ ಕಟ್ಟು ನಿಟ್ಟಿನ ಕ್ರಮದೊಂದಿಗೆ 10, 11 ಮತ್ತು 12ನೇ ತರಗತಿಗಳನ್ನು ಎಂದಿನಂತೆ ಭೌತಿಕ ತರಗತಿಗಳನ್ನು ನಡೆಸಲು ತಿಳಿಸಲಾಗಿದೆ.

ಬೆಂಗಳೂರು ನಗರ ಜಿಲ್ಲೆಯನ್ನು ಹೊರತುಪಡಿಸಿ, ರಾಜ್ಯದ ಉಳಿದ ಎಲ್ಲಾ ಜಿಲ್ಲೆಗಳ ಶಾಲೆಗಳಲ್ಲಿ ಕೋವಿಡ್ ಮುಂಜಾಗ್ರತಾ ಕ್ರಮದೊಂದಿಗೆ ಯಥಾಸ್ಥಿತಿಯಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಭೌತಿಕ ತರಗತಿಗಳನ್ನು ನಡೆಸಿಕೊಂಡು ಹೋಗುವಂತೆ ಸೂಚಿಸಿದೆ.

Leave a Comment

Your email address will not be published. Required fields are marked *