Ad Widget .

ವೈವಾಹಿಕ ಜೀವನಕ್ಕೆ ಕಾಲಿಟ್ಟ ಬಿಗ್ ಬಾಸ್ ಖ್ಯಾತಿ ಶುಭಾ ಪೂಂಜಾ

Ad Widget . Ad Widget .

ಬೆಂಗಳೂರು: ಸ್ಯಾಂಡಲ್‌ವುಡ್‌ ನಟಿ, ಬಿಗ್‍ಬಾಸ್ ಖ್ಯಾತಿಯ ಶುಭಾ ಪೂಂಜಾ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

Ad Widget . Ad Widget .

“ಇಂದು ನಾನು ಮತ್ತು ಸುಮಂತ್ ಮಹಾಬಲ ಗುರು-ಹಿರಿಯರು ಮತ್ತು ಆತ್ಮೀಯ ಸ್ನೇಹಿತರ ಸಮ್ಮುಖದಲ್ಲಿ ನಮ್ಮ ಊರು ಮಜಲಬೆಟ್ಟುಬೀಡುವಿನಲ್ಲಿ ಸರಳ ವಿವಾಹವಾದೆವು. ನಿಮ್ಮೆಲ್ಲರ ಪ್ರೀತಿ ಮತ್ತು ಹಾರೈಕೆಗಳು ನಮ್ಮ ಮೇಲಿರಲಿ. ಪ್ರೀತಿಯ ಎಲ್ಲರಿಗೂ ನಮಸ್ಕಾರಗಳು” ಎಂದು ಇನ್‍ಸ್ಟಾಗ್ರಾಮ್‍ನಲ್ಲಿ ಬರೆದುಕೊಂಡು ಮದುವೆಯ ಫೋಟೋವನ್ನು ಶೇರ್ ಮಾಡಿಕೊಂಡಿದ್ದಾರೆ.

ಮಂಗಳೂರಿನಲ್ಲಿ ಕುಟುಂಬಸ್ಥರ ಸಮ್ಮುಖದಲ್ಲಿ ಮದುವೆ ನಡೆದಿದೆ. ಆಪ್ತರು, ಸ್ನೇಹಿತರು ಮದುವೆಯಲ್ಲಿ ಭಾಗಿಯಾಗಿದ್ದಾರೆ. ಬಿಗ್‌ಬಾಸ್‌ ವಿನ್ನರ್‌ ಮಂಜು ಪಾವಗಡ, ಮಜಾಭಾರತ ಖ್ಯಾತಿಯ ರಾಘು ಮದುವೆಯಲ್ಲಿ ಪಾಲ್ಗೊಂಡಿದ್ದಾರೆ. ಶುಭಾ ಅವರ ಮದುವೆಯ ಫೋಟೋಗಳು ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿವೆ.

ಹಲವು ವರ್ಷಗಳಿಂದ ಸಮಾಜ ಸೇವಕ ಸುಮಂತ್ ಅವರನ್ನು ಪ್ರೀತಿಸುತ್ತಿದ್ದ ಶುಭಾ, 2021 ಡಿಸೆಂಬರ್ ಅಥವಾ 2022ರ ಜನವರಿ ಮೊದಲ ವಾರದಲ್ಲಿ ಮದುವೆ ಆಗುವುದಾಗಿ ಹೇಳಿಕೊಂಡಿದ್ದರು. ಸುಮಂತ್ ಅವರು ಉಡುಪಿಯಲ್ಲಿರುವುದು ಹಾಗೂ ನನ್ನ ಕುಟುಂಬಸ್ಥರು ಮಂಗಳೂರಿನಲ್ಲಿರುವ ಕಾರಣ ನಾವು ಅಲ್ಲಿಯೇ ಮದುವೆ ಆಗುತ್ತೇವೆ ಈ ಹಿಂದೆ ಶುಭಾ ಹೇಳಿದ್ದರು. ಅದರಂತೆ ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

Leave a Comment

Your email address will not be published. Required fields are marked *