Ad Widget .

ಸಹಕಾರ ಬ್ಯಾಂಕ್ ನಲ್ಲಿ ಅವ್ಯವಹಾರ| ಸಿನಿಮಾ ನಿರ್ಮಾಪಕ ಆನಂದ ಅಪ್ಪುಗೋಳ್ ಬಂಧನ

Ad Widget . Ad Widget .

ಬೆಂಗಳೂರು: ಸಂಗೊಳ್ಳಿ ರಾಯಣ್ಣ ಸಹಕಾರ ಬ್ಯಾಂಕ್‌ ಅವ್ಯವಹಾರ ಆರೋಪಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್‌ವುಡ್‌ ನಿರ್ಮಾಪಕ ಆನಂದ್‌ ಅಪ್ಪುಗೋಳ್‌ʼ ಇಡಿ ಅಧಿಕಾರಿಗಳ ಬಂಧನಕ್ಕೆ ಒಳಗಾಗಿದ್ದಾರೆ.

Ad Widget . Ad Widget .

ಸಂಗೊಳ್ಳಿ ರಾಯಣ್ಣ ಸಹಕಾರ ಬ್ಯಾಂಕ್‌ ಅವ್ಯವಹಾರ ಆರೋಪದಲ್ಲಿ ಅಪ್ಪುಗೋಳ್‌ ವಿರುದ್ಧ 250 ಕೋಟಿ ರೂ ವಂಚನೆ ಆರೋಪವಿದ್ದು, ಪಿಎಂಎಲ್‌ಎ ಕಾಯ್ದೆಯಡಿ ಇಡಿ ದೂರು ದಾಖಲಿಸಿತ್ತು. ಸಧ್ಯ ಈ ಸಂಬಂಧ ಸ್ಯಾಂಡಲ್‌ವುಡ್‌ ನಿರ್ಮಾಪಕನನ್ನ ಇಡಿ ಅಧಿಕಾರಿಗಳು ಬಂಧಿಸಿದ್ದಾರೆ.

ಆನಂದ ಅಪ್ಪುಗೋಳ ಮಾಲೀಕತ್ವದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೊಸೈಟಿಯ ಬಹುಕೋಟಿ ಠೇವಣಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಸಿಐಡಿ ಅಧಿಕಾರಿಗಳು ಬೆಳಗಾವಿ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಿದ್ದರು.

ಸಿಐಡಿ ಡಿವೈಎಸ್‌ಪಿ ಪುರುಷೋತ್ತಮ ನೇತೃತ್ವದ ತಂಡ ಪ್ರಕರಣದ ತನಿಖೆ ನಡೆಸಿ 2063 ಪುಟಗಳ ಚಾರ್ಜ್‌ಶೀಟ್‌ʼನ್ನ ಜಿಲ್ಲಾ ನ್ಯಾಯಾಲಯಕ್ಕೆ ಸಲ್ಲಿಸಿತ್ತು. ಇನ್ನು ಪ್ರಕರಣದಲ್ಲಿಒಟ್ಟು 13 ಜನರು 275 ಕೋಟಿ ರೂ. ಠೇವಣಿ ಹಣ ವಂಚನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

Leave a Comment

Your email address will not be published. Required fields are marked *