ಮಂಗಳೂರು: ಇಲ್ಲಿನ ಪಾಂಡೇಶ್ವರ ಮಹಿಳಾ ಠಾಣೆಯ ಐವರು ಸಿಬ್ಬಂದಿಯು ಕರ್ತವ್ಯದ ಅವಧಿಯಲ್ಲಿ ಠಾಣೆಯಲ್ಲಿ ಮದ್ಯಪಾನ ಮಾಡಿ ಇಲಾಖೆಯ ನಿಯಮಾವಳಿಗೆ ವಿರುದ್ಧವಾಗಿ ವರ್ತಿಸಿದ್ದು ಸಿಸಿಟಿವಿ ದೃಶ್ಯಾವಳಿ ಹಾಗೂ ಡಿಸಿಪಿ ಮತ್ತು ಎಸಿಪಿ ನೀಡಿದ ವರದಿಯನ್ನು ಆಧರಿಸಿ ಇಬ್ಬರು ಎಎಸ್ಸೈ, ಇಬ್ಬರು ಹೆಡ್ ಕಾನ್ಸ್ಟೇಬಲ್, ಒಬ್ಬ ಪೊಲೀಸ್ ಕಾನ್ಸ್ಟೇಬಲ್ ಸಹಿತ ಐವರನ್ನು ಪೊಲೀಸ್ ಆಯುಕ್ತರು ಅಮಾನತು ಮಾಡಿದ್ದಾರೆ.
ಇನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದ ಮಂಗಳೂರು ಮಹಿಳಾ ಠಾಣೆಯ ಇನ್ಸ್ಪೆಕ್ಟರ್ ಸಹಿತ ಪೊಲೀಸರು ಕರ್ತವ್ಯದ ಅವಧಿಯಲ್ಲಿ ಠಾಣೆಯಲ್ಲಿ ಮಾಡಿದ್ದಾರೆನ್ನಲಾದ ಬ್ರೇಕ್ ಡ್ಯಾನ್ಸ್ ವೀಡಿಯೋ ಬಗ್ಗೆ ಪ್ರತಿಕ್ರಿಯಿಸಿದ ಅವರು ಇದು ಠಾಣೆಯಲ್ಲಿ ಬ್ರೇಕ್ ಡ್ಯಾನ್ಸ್ ಮಾಡಿರುವ ವೀಡಿಯೋ ಅಲ್ಲ. ಕರ್ತವ್ಯದ ಅವಧಿಯಲ್ಲಿ ಯಾರೂ ಬ್ರೇಕ್ ಡ್ಯಾನ್ಸ್ ಮಾಡಿಲ್ಲ.
ದಸರಾ ಹಬ್ಬದ ಸಂದರ್ಭ ಹುಲಿವೇಷ ಸಹಿತ ಇತರ ಕಲಾತಂಡದೊಂದಿಗೆ ಸಂಭ್ರಮಾಚರಣೆಯ ವೀಡಿಯೋ ಆಗಿದೆ. ಈ ಸಂಭ್ರಮಾಚರಣೆಯಲ್ಲಿ ಠಾಣೆಗಳ ಎಲ್ಲಾ ಅಧಿಕಾರಿಗಳು, ಸಿಬ್ಬಂದಿಗಳು ಪಾಲ್ಗೊಂಡಿದ್ದರು. ಇದನ್ನು ಇಲಾಖೆಯ ಸೂಚನೆಯ ಮೇರೆಗೆ ಮಾಡಲಾಗಿತ್ತು ಎಂದರು.