ಸುಳ್ಯ: ತೆಂಗಿನ ಮರದಿಂದ ಬಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೇ ಸಾವು

Ad Widget ... ..

ಸುಳ್ಯ: ಇಲ್ಲಿನ ಸಮೀಪದ ಪೆರಾಜೆಯ ವ್ಯಕ್ತಿಯೋರ್ವರು 25ರಂದು ತನ್ನ ಮನೆಯ ದುರಸ್ತಿ ಕಾರ್ಯದ ಸಂದರ್ಭ ತೆಂಗಿನ ಮರದಿಂದ ಬಿದ್ದು ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.

Ad Widget

ಪೆರಾಜೆ ಬಂಗಾರಕೋಡಿಯ ಹರೀಶ್ ಎಂಬ ವ್ಯಕ್ತಿ ತಮ್ಮ ಹಳೆ ಮನೆಯನ್ನು ಕೆಡವಿ ಹೊಸ ಮನೆ ಕಟ್ಟಲು ಜಾಗ ಸಮತಟ್ಟು ಮಾಡಲು ಬಂದ ಜೆಸಿಬಿಯ ಚಾಲಕರಿಗೆ ಕುಡಿಯಲೆಂದು ಬೊಂಡ ತೆಗೆಯಲು ತೆಂಗಿನ ಮರ ಏರಿದ್ದರು. ಈ ಸಂದರ್ಭದಲ್ಲಿ ತೆಂಗಿನ ಮರದಿಂದ ಆಯತಪ್ಪಿ ಅವರು ಬಿದ್ದು ಗಂಭೀರ ಗಾಯಗೊಂಡರು. ಕೂಡಲೇ ಅಲ್ಲಿದ್ದವರು ಸುಳ್ಯ ಖಾಸಗಿ ಆಸ್ಪತ್ರೆಗೆ ಕರೆತಂದು, ಬಳಿಕ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಿಸಿದರು. ಕುತ್ತಿಗೆ ಹಿಂಬಾಗ, ಬೆನ್ನು , ಸೊಂಟದ ಮೂಳೆ ಮುರಿತಕ್ಕೊಳಗಾದ ಹರೀಶ್ ಅವರು ಚಿಕಿತ್ಸೆ ಫಲಕಾರಿಯಾಗದೇ ಜ. 5 ರಂದು ಮೃತಪಟ್ಟರು.

ಮೃತರು ಪತ್ನಿ ಅಂತರಾಷ್ಟ್ರೀಯ ಹಿರಿಯ ಕ್ರೀಡಾಪಟು ವಿದ್ಯಾ ಬಂಗಾರಕೋಡಿ, ಹಾಗೂ ಇಬ್ಬರು ಪುತ್ರಿಯರು, ಓರ್ವ ಪುತ್ರನನ್ನು ಅಗಲಿದ್ದಾರೆ.

Leave a Comment

Your email address will not be published. Required fields are marked *