Ad Widget .

ತುಂಡಾಗಿ ಬಿದ್ದಿದ್ದ ವಿದ್ಯುತ್ ವೈರ್ ಕುತ್ತಿಗೆಗೆ ಸಿಲುಕಿ ಯುವಕ ಸಾವು

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಬೆಳ್ತಂಗಡಿ: ಯುವಕನೋರ್ವ ತನ್ನ ಕೆಲಸದ ವ್ಯಕ್ತಿಯನ್ನು ಮನೆಗೆ ಬಿಟ್ಟು ವಾಪಸ್ ಬರುತ್ತಿದ್ದ ವೇಳೆ ಆಕಸ್ಮಿಕವಾಗಿ ತುಂಡಾಗಿ ಬಿದ್ದಿದ್ದ ವಿದ್ಯುತ್ ವೈಯರ್ ಕುತ್ತಿಗೆಗೆ ಸಿಲುಕಿ ರಸ್ತೆಗೆ ಎಸೆಯಲ್ಪಟ್ಟು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಹೆಡ್ಯಾದಲ್ಲಿ ನಡೆದಿದೆ.

Ad Widget . Ad Widget . Ad Widget .

ಮೃತ ವ್ಯಕ್ತಿಯನ್ನು ಉಜಿರೆಯಲ್ಲಿ ಶ್ರೀ ಗಣೇಶ್ ಹೊಟೇಲ್ ನಡೆಸುತ್ತಿದ್ದ ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ಮಲೆಬೆಟ್ಟು ನಿವಾಸಿ ರಘು ಎಂದು ಗುರುತಿಸಲಾಗಿದೆ.

ಹೇಡ್ಯ ಬಳಿ ಕಳೆದ ರಾತ್ರಿ ಬೈಹುಲ್ಲು ಸಾಗಾಟದ ಪಿಕಪ್ ವಾಹನವೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ನಾಲ್ಕೈದು ವಿದ್ಯುತ್ ಕಂಬಗಳು ತುಂಡಾಗಿವೆ. ಇದರಿಂದ ವಿದ್ಯುತ್ ತಂತಿಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ನೇತಾಡುತ್ತಿದ್ದವು. ಈ ಅವಘಡದ ಅರಿವಿಲ್ಲದ ರಘು ಅವರು ತನ್ನ ದ್ವಿಚಕ್ರ ವಾಹನದಲ್ಲಿ ದಿಡುಪೆ ಕಡೆಯಿಂದ ಬಂದಿದ್ದಾರೆ. ಅವರು ಹೇಡ್ಯ ಸೊಸೈಟಿ ಬಳಿ ತಲುಪಿದಾಗ ರಸ್ತೆಯಲ್ಲಿ ನೇತಾಡುತ್ತಿದ್ದ ವಿದ್ಯುತ್ ತಂತಿ ರಘು ಕುತ್ತಿಗೆಗೆ ಸಿಲುಕಿದೆ. ಇದರಿಂದ ರಸ್ತೆಗೆಸೆಯಲ್ಪಟ್ಟ ರಘು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ.

ಇನ್ನು ಘಟನಾ ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಪೊಲೀಸರು ಹಾಗೂ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಕಾನೂನು‌ ಕ್ರಮ ಕೈಗೊಂಡಿದ್ದು ಈ ಬಗ್ಗೆ ಪ್ರಕರಣ ದಾಖಲಾಗಿದೆ‌.

Leave a Comment

Your email address will not be published. Required fields are marked *