Ad Widget .

ವಿದ್ಯಾರ್ಥಿನಿಯನ್ನು ಬೆತ್ತಲೆಗೊಳಿಸಿ ಹಲ್ಲೆಗೈದ ಶಿಕ್ಷಕಿಗೆ ಸಸ್ಪೆಂಡ್ ಶಿಕ್ಷೆ

ಮಂಡ್ಯ: ಇಲ್ಲಿನ ಶ್ರೀರಂಗಪಟ್ಟಣ ತಾಲೂಕಿನ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿನಿಯನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ ಮುಖ್ಯ ಶಿಕ್ಷಕಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಅಮಾನತು ಮಾಡಿದ್ದಾರೆ. ಶಾಲೆಗೆ ಮೊಬೈಲ್ ತಂದಿದ್ದ ವಿದ್ಯಾರ್ಥಿನಿಯನ್ನು ವಿವಸ್ತ್ರಗೊಳಿಸಿದ ಮುಖ್ಯಶಿಕ್ಷಕಿ ಹಲ್ಲೆ ಮಾಡಿ ಫ್ಯಾನ್ ಕೆಳಗೆ ಕೂರಿಸಿದ್ದರು.

Ad Widget . Ad Widget .

ಶಿಕ್ಷಕಿಯ ಈ ಕೃತ್ಯದ ವಿರುದ್ದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಗ್ರಾಮಸ್ಥರು ಕೂಡ ಮುಖ್ಯಶಿಕ್ಷಕಿ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದರು. ಶಿಕ್ಷಣ ಇಲಾಖೆ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಉನ್ನತ ಅಧಿಕಾರಿಗಳಿಗೆ ವರದಿ ನೀಡಿದ್ದರು. ವರದಿ ಆಧಾರದ ಮೇಲೆ ಶಿಕ್ಷಕಿಯನ್ನು ಅಮಾನತು ಮಾಡಲಾಗಿದೆ ಎಂದು ಹೇಳಲಾಗಿದೆ.

Ad Widget . Ad Widget .

ಡಿಸೆಂಬರ್ 22ರಂದು ಶ್ರೀರಂಗಪಟ್ಟಣ ತಾಲೂಕಿನ ಗಣಂಗೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಮೊಬೈಲ್ ತಂದಿದ್ದ ಕಾರಣಕ್ಕೆ ಎಂಟನೇ ತರಗತಿ ವಿದ್ಯಾರ್ಥಿನಿಯ ಬಟ್ಟೆ ಬಿಚ್ಚಿ ಮುಖ್ಯ ಶಿಕ್ಷಕಿ ಥಳಿಸಿದ್ದಾರೆ. ಮೊಬೈಲ್ ತಂದವರು ಕೊಡಬೇಕು. ಇಲ್ಲದಿದ್ದರೆ ವಿದ್ಯಾರ್ಥಿಗಳಿಂದ ನಿಮ್ಮನ್ನು ಚೆಕ್ ಮಾಡಿಸುತ್ತೇನೆ ಎಂದು ಬೆದರಿಕೆ ಹಾಕಿದ್ದು, ಕೆಲವು ವಿದ್ಯಾರ್ಥಿನಿಯರ ಸ್ವೆಟರ್ ಬಿಚ್ಚಿಸಿದ್ದಾರೆ. ವಿದ್ಯಾರ್ಥಿನಿಯ ಸ್ಕರ್ಟ್ ಹರಿದುಹಾಕಿದ್ದಾರೆ. ಓರ್ವ ವಿದ್ಯಾರ್ಥಿನಿಯ ಬಟ್ಟೆ ಬಿಚ್ಚಿ ಹಲ್ಲೆ ಮಾಡಿ ಚಳಿ ಆಗಲೆಂದು ಜೋರಾಗಿ ಫ್ಯಾನ್ ಹಾಕಿ ಕೆಳಗೆ ಸಂಜೆವರೆಗೂ ಊಟ ನೀರು ಕೊಡದೇ ಹಾಗೆಯೇ ಕೂರಿಸಿದ್ದಾರೆ.

ಸಂಜೆ ಮನೆಗೆ ಮರಳಿದ ವಿದ್ಯಾರ್ಥಿನಿ ಪೋಷಕರಿಗೆ ಮಾಹಿತಿ ನೀಡಿದ್ದು, ಬಳಿಕ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ದೂರು ನೀಡಲಾಗಿತ್ತು. ಗ್ರಾಮಸ್ಥರು ಕೂಡ ಆಕ್ರೋಶ ವ್ಯಕ್ತಪಡಿಸಿದ್ದರು.

Leave a Comment

Your email address will not be published. Required fields are marked *