Ad Widget .

ನೈಸ್ ರಸ್ತೆಯಲ್ಲಿ ಭೀಕರ ಅಪಘಾತ| ಕಾರಿನಲ್ಲಿದ್ದ ನಾಲ್ವರು ಟೆಕ್ಕಿಗಳು ಸ್ಥಳದಲ್ಲೇ ಸಾವು|

ಬೆಂಗಳೂರು: ಬನ್ನೇರುಘಟ್ಟ – ತುಮಕೂರು ನೈಸ್ ರಸ್ತೆಯಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶುಕ್ರವಾರ ರಾತ್ರಿ ಸಂಭವಿಸಿದೆ.

Ad Widget . Ad Widget .

ಬನ್ನೇರುಘಟ್ಟದಿಂದ ತುಮಕೂರಿನ ಕಡೆ ಹೊರಟ್ಟಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಬಂದು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಪುರುಷರು, ಇಬ್ಬರು ಮಹಿಳೆಯರ ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Ad Widget . Ad Widget .

ಘಟನೆಯ ವಿಷಯ ತಿಳಿದ ಕುಮಾರಸ್ವಾಮಿ ಲೇಔಟ್ ಪೊಲೀಸರು ಅಪಘಾತದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದಿಂದ ನೈಸ್ ರಸ್ತೆಯಲ್ಲಿ 8 ಕಿಮೀ ದೂರದವರೆಗೂ ವಾಹನಗಳು ಸಾಲಾಗಿ ನಿಂತಿದ್ದು, ಟ್ರಾಫಿಕ್ ಜಾಮ್ ಉಂಟಾಗಿತ್ತು ಎಂದು ಮಾಹಿತಿ ನೀಡಿದ್ದಾರೆ. ಅಪಘಾತದಿಂದ ಕಾರಿನಲ್ಲಿದ್ದ ಇಬ್ಬರು ಪುರುಷರು ಮತ್ತು ಇಬ್ಬರು ಮಹಿಳೆಯರು ಸ್ಥಳದಲ್ಲಿ ಮೃತಪಟ್ಟಿದ್ದು, ಪೋಸ್ಟ್ ಮಾರ್ಟಮ್ ನೆಡೆಸಲು ಶವಗಳನ್ನು ರವಾನಿಸಲಾಗಿದೆ.

ಘಟನೆ ಬಳಿಕ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಮೃತರು ಬೆಂಗಳೂರಿನ ಸಾಫ್ಟವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಬೊಮ್ಮನಹಳ್ಳಿ ಮೂಲದವರಾದ ಈ ಟೆಕ್ಕಿಗಳೆಲ್ಲರೂ 30ರ ವಯೋಮಾನದವರು ಎಂದು ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ.

Leave a Comment

Your email address will not be published. Required fields are marked *