Ad Widget .

ಅಪಘಾತ: ಶಬರಿಮಲೆಯಿಂದ ಮರಳುತ್ತಿದ್ದ ಇಬ್ಬರು ಸಾವು

ಚಿಕ್ಕಬಳ್ಳಾಪುರ: ನಿಂತಿದ್ದ ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ರೆಡ್ಡಿಗೊಲ್ಲವಾರಹಳ್ಳಿ ಬಳಿ ನಡೆದಿದೆ.

Ad Widget . Ad Widget .

ಶಬರಿಮಲೆಗೆ ಹೋಗಿ ಅಯ್ಯಪ್ಪ ದರ್ಶನ ಪಡೆದು ವಾಪಸ್ ಬರುವ ವೇಳೆ ದುರ್ಘಟನೆ ನಡೆದಿದೆ. ಧರಣೀಶ್ (22) ನಿರಂಜನ್ ಸಿಂಗ್ (52) ಮೃತ ದುರ್ಧೈವಿಗಳು. ಮೃತಪಟ್ಟರೆಲ್ಲಾ ಆಂಧ್ರ ಪ್ರದೇಶದ ಅನಂತಪುರ ಜಿಲ್ಲೆಯವರು ಎಂದು ಗುರುತಿಸಲಾಗಿದೆ.

Ad Widget . Ad Widget .

ಪಂಚರ್ ಆಗಿದ್ದ ಕಾರನ್ನು ರಸ್ತೆ ಬದಿ ನಿಲ್ಲಿಸಿ ಸ್ಟೆಪ್ನಿ ಬದಲಾಯಿಸುತ್ತಿದ್ದ ವೇಳೆ ಕ್ಯಾಂಟರ್ ಲಾರಿ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಮೂರು ಜನ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತ ಮಾಡಿ ಕ್ಯಾಂಟರ್ ಲಾರಿ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಸದ್ಯ ಈ ಸಂಬಂಧ ಪೆರೇಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *