ಬೆಂಗಳೂರು : ವೀಕೆಂಡ್ ಕರ್ಫ್ಯೂ ಉಲ್ಲಂಘಿಸಿ ಮೇಕೆದಾಟು ಪಾದಯಾತ್ರೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಈಗಾಗಲೇ ಕಾಂಗ್ರೆಸ್ ನಾಯಕರಿಗೆ ನೋಟಿಸ್ ನೀಡಲಾಗಿದ್ದು ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದವರು ಮೇಕೆದಾಟು ಪಾದಯಾತ್ರೆ ಯಾಕೆ ಮಾಡುತ್ತಿದ್ದಾರೆ? 5 ವರ್ಷದ ಅಧಿಕಾರದಲ್ಲಿ ಡಿಪಿಆರ್ ಸಲ್ಲಿಸಿಲ್ಲ. ಸಮ್ಮಿಶ್ರ ಸರ್ಕಾರದಲ್ಲಿ ನೀರಾವರಿ ಸಚಿವರಾಗಿದ್ದ ಡಿ.ಕೆ.ಶಿವಕುಮಾರ್ ಅವರು ಡಿಪಿಆರ್ ಮಂಡಿಸಿಲ್ಲ. ಇದು ಚುನಾವಣೆ ಹಿನ್ನೆಯಲ್ಲಿ ರಾಜಕೀಯ ಪಾದಯಾತ್ರೆ. ಕಾಂಗ್ರೆಸ್ ನವರು ಅಧಿಕಾರದಲ್ಲಿದ್ದಾಗ ಕೆಲಸ ಮಾಡಿಲ್ಲವೆಂಬ ಅಪರಾಧ ಭಾವನೆ ಕಾಡುತ್ತಿದೆ. ಹೀಗಾಗಿ ಮೇಕೆದಾಟು ಪಾದಯಾತ್ರ ರಾಜಕೀಯ ಪ್ರೇರಿತ ಕಾಂಗ್ರೆಸ್ ಯಾತ್ರೆ ಎಂದು ಆರೋಪಿಸಿದ್ದಾರೆ.