ಕರ್ನಾಟಕ ಮತ್ತೆ ಕಂಪ್ಲೀಟ್ ಲಾಕ್!? ಮುನ್ಸೂಚನೆ ನೀಡಿದ ಗೃಹ‌ ಸಚಿವ ಅರಗ ಜ್ಞಾನೇಂದ್ರ

ಬೆಂಗಳೂರು: ರಾಜ್ಯ ಸರ್ಕಾರ ಜಾರಿಗೊಳಿಸಿರುವಂತ ವೀಕೆಂಡ್ ಕರ್ಪ್ಯೂ, ನೈಟ್ ಕರ್ಪ್ಯೂವನ್ನು ಲೆಕ್ಕಿಸದೇ ಕಾಂಗ್ರೆಸ್ ನಿಂದ ಮೇಕೆದಾಟು ಪಾದಯಾತ್ರೆಯನ್ನು ನಡೆಸಲಾಗುತ್ತಿದೆ. ಹೀಗಾಗಿ ರಾಜ್ಯದಲ್ಲಿ ಕೊರೋನಾ ಹೆಚ್ಚಾದರೆ ಮತ್ತೆ ಕಂಪ್ಲೀಟ್ ಲಾಕ್ ಡೌನ್ ಮಾಡಲಾಗುತ್ತದೆ. ಇದಕ್ಕೆ ಕಾಂಗ್ರೆಸ್ ಪಕ್ಷವೇ ಹೊಣೆಯಾಗಲಿದೆ ಎಂಬುದಾಗಿ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಮುನ್ಸೂಚನೆ ನೀಡಿದ್ದಾರೆ.

Ad Widget ... ..

ಈ ಬಗ್ಗೆ ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿರುವ ಅವರು, ಸೋಂಕು ಹೆಚ್ಚಳವಾದರೆ ಮತ್ತೆ ಲಾಕ್ ಡೌನ್ ಮಾಡಬೇಕಾಗುತ್ತೆ. ತಿಂಗಳುಗಟ್ಟಲೇ ಲಾಕ್ ಡೌನ್ ಮಾಡಬೇಕಾದರೆ ಅದಕ್ಕೆ ಕಾಂಗ್ರೆಸ್ ಹೊಣೆಯಾಗಲಿದೆ. ಕೊರೋನಾ ನಿಯಮ ಉಲ್ಲಂಘಿಸಿ ಪಾದಯಾತ್ರೆ ನಡೆಸುತ್ತಿರುವಂತ ಕಾಂಗ್ರೆಸ್ ಮುಖಂಡರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಪೊಲೀಸರಿಗೆ ಅಧಿಕಾರ ಕೊಟ್ಟಿದ್ದೇವೆ, ಅವರೇನು ಅಸಹಾಯಕರಲ್ಲ ಎಂದು ತಿಳಿಸಿದರು.

Ad Widget

Leave a Comment

Your email address will not be published. Required fields are marked *