Ad Widget .

ಕೊರಗಜ್ಜನಿಗೆ ಅವಮಾನ ಪ್ರಕರಣ| ಇಬ್ಬರು ಆರೋಪಿಗಳು ಅಂದರ್| ತಲೆಮರೆಸಿಕೊಂಡಿರುವ ಪ್ರಮುಖ ಆರೋಪಿ ಮದುಮಗ|

ವಿಟ್ಲ: ಇಲ್ಲಿನ ಸಾಲೆತ್ತೂರಿನಲ್ಲಿ ಕೊರಗಜ್ಜ ದೈವಕ್ಕೆ ಅಪಮಾನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ವಿಟ್ಲ‌ ಪೊಲೀಸರು ಮಂಗಳವಾರದಂದು ಬಂಧಿಸಿದ್ದಾರೆ.

Ad Widget . Ad Widget .

ಬಂಧಿತ ಆರೋಪಿಗಳನ್ನು ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ಮಂಗಲ್ಪಾಡಿ ನಿವಾಸಿ, ಪುತ್ತೂರಿನ ಫಾತಿಮಾ ಮ್ಯಾಚಿಂಗ್ ಸೆಂಟರ್ ನ ಮಾಲಕ ಅಹಮ್ಮದ್ ಮುಜ್ತಾಬ್(28) ಹಾಗೂ ಮಂಜೇಶ್ವರ ತಾಲೂಕಿನ ಬಾಯಾರು ಪದವು ನಿವಾಸಿ ಮೊಯ್ದೀನ್ ಮನೀಶ್(19) ಎಂದು ಗುರುತಿಸಲಾಗಿದೆ.

Ad Widget . Ad Widget .

ಕೊಳ್ನಾಡು ಗ್ರಾಮದ ಅಝೀಝ್ ಎಂಬವರ ಮಗಳ ಮದುವೆ ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ಉಪ್ಪಳ ಸೋಂಕಲ್ ಅಗರ್ತಿಮೂಲೆ ಸಮೀಪದ ಉಮರುಲ್ ಭಾಷಿತ್ ಎಂ ಎಂಬವರ ಜತೆ ಜ. 6 ರಂದು ನಡೆದಿತ್ತು. ಅದೇ ದಿನ ರಾತ್ರಿ ಸಾಲೆತ್ತೂರಿನ ಮದುಮಗಳ ಮನೆಯಲ್ಲಿ ನಡೆದ ಔತಣ ಕೂಟದಲ್ಲಿ ಮದುಮಗ ಭಾಷಿತ್ ಕೊರಗಜ್ಜನ ಮಾದರಿಯ ವೇಷ ದರಿಸಿ ಕುಣಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಬಗ್ಗೆ ಹಿಂದೂ ಜಾಗರಣ ವೇದಿಕೆಯ ವತಿಯಿಂದ ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು. ಅದರಂತೆ ಇದೀಗ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಸಫಲರಾಗಿದ್ದಾರೆ. ಕೊರಗಜ್ಜನ ವೇಷ ಧರಿಸಿದ ಆರೋಪಿ ಮದುಮಗ ಭಾಷಿತ್ ತಲೆಮರೆಸಿಕೊಂಡಿದ್ದಾನೆ.

Leave a Comment

Your email address will not be published. Required fields are marked *