Ad Widget .

ಮಂಗಳೂರು: ಸೀ ಫುಡ್ ಪ್ಯಾಕ್ಟರಿಯಲ್ಲಿ ಅನಿಲ ಸೋರಿಕೆ| 26 ಮಂದಿ ಅಸ್ವಸ್ಥ|

Ad Widget . Ad Widget .

ಮಂಗಳೂರು: ಇಲ್ಲಿನ ಬೈಕಂಪಾಡಿಯಲ್ಲಿರುವ ಎವರೆಸ್ಟ್ ಸೀ ಫುಡ್ಸ್ ಪ್ರೈ.ಲಿ ಘಟಕದಲ್ಲಿ ಕೆಮಿಕಲ್ ಸೋರಿಕೆಯಾಗಿದೆ. ಘಟನೆ ನಡೆದಾಗ ಒಟ್ಟು 80 ಜನ ಕಾರ್ಮಿಕರು ಫ್ಯಾಕ್ಟರಿಯಲ್ಲಿದ್ದು, ಅದರಲ್ಲಿ 26 ಕಾರ್ಮಿಕರು ಅಸ್ವಸ್ಥಗೊಂಡಿದ್ದಾರೆ.

Ad Widget . Ad Widget .

ಕೆಮಿಕಲ್ ನಿಂದ ಸ್ಥಳದಲ್ಲೇ ಕುಸಿದು ಬಿದ್ದ ಕಾರ್ಮಿಕರನ್ನು ಮುಕ್ಕ ಶ್ರೀನಿವಾಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಪ ಪ್ರಮಾಣದಲ್ಲಿ ಕೆಮಿಕಲ್ ಸೋರಿಕೆಯಾಗಿದ್ದರಿಂದ ಎಲ್ಲಾ ಕಾರ್ಮಿಕರು ಪ್ರಾಣಪಾಯದಿಂದ ಪಾರಾಗಿದ್ದಾರೆ.

ಘಟನೆ ಬಗ್ಗೆ ಮಾಹಿತಿ ಸಿಗುತ್ತಲೇ ಸ್ಥಳಕ್ಕೆ ಅಗ್ನಿಶಾಮಕ, ಪಣಂಬೂರು ಪೊಲೀಸರು ದೌಡಾಯಿಸಿದ್ದಾರೆ. ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್ ಕಮೀಷನರ್ ಎನ್.ಶಶಿಕುಮಾರ್ ಕೂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಘಟನೆಯಲ್ಲಿ 26 ಜನ ಸಿಬ್ಬಂದಿಗಳು ಅಸ್ವಸ್ಥರಾಗಿದ್ದರು, ಘಟನೆ ನಡೆದ ತಕ್ಷಣ ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ. 10 ಜನ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿದ್ದಾರೆ. 16 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಪ್ರಾಣಪಾಯದಿಂದ ಪಾರಾಗಿದ್ದಾರೆ

ಸದ್ಯಕ್ಕೆ ಫ್ಯಾಕ್ಟರಿಯಲ್ಲಿದ್ದ ಎಲ್ಲ ನೌಕರರನ್ನು ಹೊರಗೆ ಕಳುಹಿಸಲಾಗಿದೆ. ಸೂಕ್ತ ತನಿಖೆ ನಡೆಸಿದ ಬಳಿಕ ಕ್ರಮ ಕೈಗೊಳ್ಳುತ್ತೇವೆ ಎಂದು ಮಂಗಳೂರು ನಗರ ಪೊಲೀಸ್ ಕಮೀಷನರ್ ಎನ್.ಶಶಿಕುಮಾರ್ ತಿಳಿಸಿದರು.

Leave a Comment

Your email address will not be published. Required fields are marked *