ಬೆಂಗಳೂರು : 2 ಕಾರು ಹಾಗೂ ಬೈಕ್ ಮೇಲೆ ಟಿಪ್ಪರ್ ಒಂದು ಉರುಳಿ ಬಿದ್ದ ಪರಿಣಾಮ 6 ಜನರು ಮೃತಪಟ್ಟ ಘಟನೆ ಬೆಂಗಳೂರಿನ ಕುಂಬಳಗೋಡು ಬಳಿಯಲ್ಲಿ ನಡೆದಿದೆ.
ಬೆಂಗಳೂರಿನ ಕುಂಬಳಗೋಡು ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, 2 ಕಾರು ಹಾಗೂ ಬೈಕ್ ಮೇಲೆ ಟಿಪ್ಪರ್ ಒಂದು ಉರುಳಿ ಬಿದ್ದ ಪರಿಣಾಮ ಈ ಭೀಕರ ಘಟನೆ ನಡೆದಿದೆ.
ಸಾವಿಗೀಡಾದವರ ಪೈಕಿ ನಾಲ್ವರು ಪುರುಷರು, ಇಬ್ಬರು ಮಹಿಳೆಯರು ಸೇರಿದ್ದಾರೆ. ಈ ಶವಗಳನ್ನ ರಾಜರಾಜೇಶ್ವರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ.
ಕಾರಿನಲ್ಲಿದ್ದ ನಾಲ್ವರೂ ಮೃತಪಟ್ಟಿದ್ದು, ಮೃತರನ್ನ ನಿಖಿತಾ ರಾಣಿ (29), ವೀಣಮ್ಮ(42), ಇಂದ್ರಕುಮಾರ್ (14), ಕೀರ್ತಿಕುಮಾರ್ (40) ಎಂದು ಗುರುತಿಸಲಾಗಿದೆ. ಇನ್ನು ಟೊಯೋಟಾ ಕಂಪೆನಿಯ ಸಿಬ್ಬಂದಿ ಟಿ.ಜೆ ಶಿವಪ್ರಕಾಶ್ ಹಾಗೂ ಬೈಕ್ ನಲ್ಲಿದ್ದ ಜಿತಿನ್ ಬಿ. ಜಾರ್ಜ್ ಎಂಬುವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಪಘಾತದ ಪರಿಣಾಮ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ಸುಮಾರು 3 ಕಿಲೋ ಮೀಟರ್‌ವರೆಗೆ ಟ್ರಾಫಿಕ್ ಜಾಮ್ ಉಂಟಾಗಿದೆ. ಕುಂಬಳಗೂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರಿಂದ ಸ್ಥಳ ತನಿಖೆ ನಡೆದಿದೆ.