Ad Widget .

ಕೊರೊನಾ 3ನೇ ಅಲೆ ಅಬ್ಬರ| ರಾಜ್ಯಾದ್ಯಂತ ನಾಳೆಯಿಂದ ಕಠಿಣ ಕ್ರಮ| ನಿಯಮ ಉಲ್ಲಂಘನೆ ಕಂಡಲ್ಲಿ ದಂಡ|

ಬೆಂಗಳೂರು: ರಾಜ್ಯಾದ್ಯಂತ ಕೊರೊನಾ ಸೋಂಕು ಉಲ್ಬಣಗೊಳ್ಳುತ್ತಿದ್ದು, ಕೋವಿಡ್ ಮೂರನೇ ಅಲೆ ನಿಯಂತ್ರಣಕ್ಕೆ ಸರ್ಕಾರ ಇನ್ನಷ್ಟು ಕಠಿಣ ಕ್ರಮಗಳನ್ನು ಕೈಗೊಂಡಿದೆ. ನಾಳೆಯಿಂದಲೇ ರಾಜ್ಯದಲ್ಲಿ ಹೊಸ ಬಿಗಿ ನಿಯಮಗಳು ಜಾರಿಗೆ ಬರಲಿವೆ.

Ad Widget . Ad Widget .

ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಕೋವಿಡ್ ಕುರಿತ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗೃಹ ಸಚಿವ ಅರಗ ಜ್ಞಾನೇಂದ್ರ, ರಾಜ್ಯಾದ್ಯಂತ ಕೋವಿಡ್ ಟೆಸ್ಟ್ ಹೆಚ್ಚಿಸಲಾಗುವುದು ಪ್ರತಿದಿನ ಈಗಿರುವ 1 ಲಕ್ಷದ 10 ಸಾವಿರ ಟೆಸ್ಟಿಂಗ್ ಸಂಖ್ಯೆಯನ್ನು 1 ಲಕ್ಷದ 50 ಸಾವಿರಕ್ಕೆ ಹೆಚ್ಚಿಸಲಾಗುವುದು. ಮಾಸ್ಕ್, ದೈಹಿಕ, ಸಾಮಾಜಿಕ ಅಂತರ ಕಡ್ಡಾಯ ಪಾಲನೆಗೆ ಸೂಚಿಸಲಾಗಿದೆ ಎಂದರು.

Ad Widget . Ad Widget .

ಶಾಲೆಗಳಲ್ಲಿ, ಹಾಸ್ಟೆಲ್ ಗಳಲ್ಲಿ ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಹರಡುತ್ತಿದ್ದು, ಈ ನಿಟ್ಟಿನಲ್ಲಿ ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚಿನ ನಿಗಾ ವಹಿಸಲಾಗುವುದು. ಶಾಲೆಗಳನ್ನು ಬಂದ್ ಮಾಡುವುದು ಅಥವಾ ರಜೆ ನೀಡುವ ಬಗ್ಗೆ ತಾಲೂಕು ಮಟ್ಟದಲ್ಲಿ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳು ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಸಭೆಯಲ್ಲಿನ ಪ್ರಮುಖ ನಿರ್ಧಾರ:

  • ಕೋವಿಡ್ ಟೆಸ್ಟಿಂಗ್ ಹೆಚ್ಚಳ
  • ಮಾಸ್ಕ್, ದೈಹಿಕ ಅಂತರ, ಸಾಮಾಜಿಕ ಅಂತರ ಪಾಲನೆ ಕಡ್ಡಾಯ
  • ವಿಶೇಷವಾಗಿ ಮಕ್ಕಳ ಬಗ್ಗೆ ಹೆಚ್ಚಿನ ನಿಗಾ
  • ಬೂಸ್ಟರ್ ಡೋಸ್ ವೇಗ ಹೆಚ್ಚಳಕ್ಕೆ ಸೂಚನೆ
  • ಹೋಂ ಐಸೋಲೇಷನ್ ನಲ್ಲಿರುವವರ ಬಗ್ಗೆ ನಿಗಾ
  • ಜನಸಂದಣಿಯಾಗದಂತೆ ಕ್ರಮ
  • ಜನ ಗುಂಪು ಸೇರದಂತೆ ಹಬ್ಬ ಆಚರಣೆಗೆ ಸೂಚನೆ
  • ದೇವಸ್ಥಾನಗಳಲ್ಲಿ ಈಗಿರುವ ನಿಯಮ ಕಡ್ಡಾಯ ಪಾಲನೆ, ನಿಯಮ ಉಲ್ಲಂಘಿಸಿದರೆ ಕೇಸ್ ದಾಖಲು
  • ಐಟಿ-ಬಿಟಿ ಕಚೇರಿ ಓಪನ್ ಬಗ್ಗೆ ಯಥಾಸ್ಥಿತಿ ಮುಂದುವರಿಕೆ
  • ಹೋಟೆಲ್, ಬಾರ್, ರೆಸ್ಟೋರೆಂಟ್ ಗಳಲ್ಲಿ ಈಗಿರುವ ಯಥಾಸ್ಥಿತಿ ಮುಂದುವರಿಕೆ
  • ಸರ್ಕಾರಿ ಹಾಗೂ ಖಾಸಗಿ ಶಾಲೆ-ಕಾಲೇಜು, ಹಾಸ್ಟೇಲ್ ಬಂದ್ ಬಗ್ಗೆ ಶಿಕ್ಷಣ ಸಂಸ್ಥೆ ಹಾಗೂ ಜಿಲ್ಲಾಡಳಿತದ ನಿರ್ಧಾರಕ್ಕೆ ಬಿಟ್ಟದ್ದು
  • ಮಕ್ಕಳಿಗಾಗಿ ಆಸ್ಪತ್ರೆಗಳಲ್ಲಿ ವಿಶೇಷ ವಾರ್ಡ್, ಬೆಡ್ ಮೀಸಲು
  • ಮಾರ್ಕೆಟ್ ಗಳಲ್ಲಿ ಜನಸಂದಣಿಯಾಗದಂತೆ ಕ್ರಮ, ಮಾರ್ಕೆಟ್ ಸ್ಥಳಾಂತರಕ್ಕೆ ವ್ಯವಸ್ಥೆ

ನಾಳೆಯಿಂದಲೇ ರಾಜ್ಯಾದ್ಯಂತ ಈ ನಿಯಮ ಜಾರಿಗೆ ಬರಲಿದ್ದು, ಇನ್ನಷ್ಟು ಕಠಿಣ ನಿಯಮಗಳ ಬಗ್ಗೆ ತಜ್ಞರು ಸಲಹೆ ನೀಡಿದ್ದಾರೆ. ಕೋವಿಡ್ ಸ್ಥಿತಿಗತಿ ನೋಡಿಕೊಂಡು ಮುಂದಿನ ಸಭೆಯಲ್ಲಿ ಮತ್ತಷ್ಟು ಕ್ರಮಗಳ ಬಗ್ಗೆ ನಿರ್ಧರಿಸಲಾಗುವುದು ಎಂದು ತಿಳಿಸಿದರು.

Leave a Comment

Your email address will not be published. Required fields are marked *