ಕಡಬ: ಆ್ಯಸಿಡ್ ಸೇವಿಸಿ ವ್ಯಕ್ತಿ ಆತ್ಮಹತ್ಯೆ

ಕಡಬ: ರಬ್ಬರ್ ಗೆ ಬೆರೆಸುವ ಆಸಿಡ್ ಸೇವಿಸಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ತಾಲೂಕಿನ ಕುದ್ಮಾರು ಗ್ರಾಮದಲ್ಲಿ ನಡೆದಿದೆ. ಮೃತಪಟ್ಟವರನ್ನು ಮೂಲತಃ ಕೇರಳದ ಶ್ರೀಧರನ್ ಕಾಣಿ ಎಂದು ಗುರುತಿಸಲಾಗಿದೆ.

Ad Widget ... ..

ಶ್ರೀಧರನ್ ಕುದ್ಮಾರಿನ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದು, ರಬ್ಬರ್ ಟ್ಯಾಪಿಂಗ್ ವೃತ್ತಿ ಮಾಡುತ್ತಿದ್ದರು. ಇವರು ರಬ್ಬರ್ ಶೀಟ್ ಮಾಡಲು ಉಪಯೋಗಿಸುವ ಆಸಿಡ್ ನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಈ ವೇಳೆ ಜೊತೆಗಿದ್ದ ರೆಝಿ ಆರ್ ಸೋಮರಾಜ್ ಎಂಬವರು ಸ್ಥಳೀಯರ ಸಹಾಯದಿಂದ ಪುತ್ತೂರು ಆಸ್ಪತ್ರೆಗೆ ದಾಖಲಿಸಿ, ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದುಕೊಂಡುವ ಹೋಗುವ ಮಧ್ಯೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget

Leave a Comment

Your email address will not be published. Required fields are marked *