Ad Widget .

ರಾಜ್ಯದಲ್ಲಿ ಕೊರೊನಾ ಹೊಸ ನಿಯಮ ಜಾರಿ| ಜ.31ರವರೆಗೂ‌ ನಿರ್ಬಂಧ ಮುಂದುವರಿಕೆ|

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್‌ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆ ಸರಕಾರವು ಕಠಿಣ ನಿರ್ಬಂಧಗಳನ್ನು ಜಾರಿ ಮಾಡಲಾಗಿತ್ತು. ಇಗ ಇದರಲ್ಲಿ ರಾಜ್ಯಾದ್ಯಂತ ಎಲ್ಲಾ ರೀತಿಯ ರ್‍ಯಾಲಿಗಳು, ಧರಣಿಗಳು ಮತ್ತು ಪ್ರತಿಭಟನೆಗಳನ್ನು ನಿಷೇಧಿಸಿದೆ.
ಸರಕಾರವು ನಿರ್ಬಂಧಗಳನ್ನು ಜನವರಿ 31ರ ವರೆಗೆ ಮುಂದುವರಿಕೆ ಮಾಡಿದೆ.

Ad Widget . Ad Widget .

ಈಗ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಈ ಮಾರ್ಗಸೂಚಿಯಲ್ಲಿ ರಾಜ್ಯ ಸರ್ಕಾರ, ಕೊರೊನ ಪಾಸಿಟಿವ್ ಬಂದ ಮಕ್ಕಳಿಗೆ ಚಿಕಿತ್ಸೆ ನೀಡಲು ತಾಲ್ಲೂಕು ಮತ್ತು ಜಿಲ್ಲಾಸ್ಪತ್ರೆಗಳಲ್ಲಿ ಮಕ್ಕಳ ವಾರ್ಡ್, ಐಸಿಯುಗಳನ್ನು ಮೀಸಲಿರಿಸಬೇಕು, ಮಕ್ಕಳಿಗೆ ಅಗತ್ಯವಿರುವ ಔಷಧಿಗಳನ್ನು ಸಾಕಷ್ಟು ಪ್ರಮಾಣದಲ್ಲಿ ದಸ್ತಾನು ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ. ಶಾಲೆಗಳಲ್ಲಿ 15 ದಿನಗಳಿಗೊಮ್ಮೆ ಶಿಕ್ಷಣ ಹಾಗೂ ಆರೋಗ್ಯ ಇಲಾಖೆಗಳು ಜಂಟಿಯಾಗಿ ಸಾಮಾನ್ಯ ಆರೋಗ್ಯ ತಪಾಸಣೆ ಮಾಡಬೇಕು.

Ad Widget . Ad Widget .

ಹಾಗೇ ಹೋಮ್ ಐಸೊಲೇಶನ್ ಮತ್ತು ಟ್ರಯಾಜಿಂಗ್ ಪ್ರಕ್ರಿಯೆಯಲ್ಲಿ ಹೌಸ್ ಸರ್ಜನ್ ವೈದ್ಯರು ಹಾಗೂ ಅಂತಿಮ ವರ್ಷದ ನರ್ಸಿಂಗ್ ವಿದ್ಯಾರ್ಥಿಗಳನ್ನು ಬಳಸಿಕೊಳ್ಳಲು ನಿರ್ಧಾರ ಮಾಡಲಾಗಿದೆ. ಬೆಂಗಳೂರು ನಗರದಲ್ಲಿ ಹೊಸದಾಗಿ 27 ಕೋವಿಡ್ ಕೇರ್ ಸೆಂಟರ್ ಗಳನ್ನು ಪ್ರಾರಂಭಿಸಲು ನಿರ್ಧರಿಸಲಾಗಿದೆ. ಕೋವಿಡ್ ಲಸಿಕೆ ಎರಡೂ ಡೋಸ್ ಗಳನ್ನು ಪಡೆದು 9 ತಿಂಗಳು ಪೂರೈಸಿದ ಮುಂಚೂಣಿ ಕಾರ್ಯಕರ್ತರಿಗೆ 3ನೇ ಡೋಸ್ ನ್ನು ಆದ್ಯತೆಯ ಮೇರೆಗೆ ನೀಡಲು ತಿಳಿಸಲಾಗಿದೆ.

ಹಾಗೇ ಮದುವೆ ಕಾರ್ಯಕ್ರಮಗಳನ್ನು ತೆರೆದ ಜಾಗದಲ್ಲಿ 200 ಕ್ಕಿಂತ ಹೆಚ್ಚು ಜನರು ಮತ್ತು 100 ಜನರೊಂದಿಗೆ ಮುಚ್ಚಿದ ಸ್ಥಳಗಳಲ್ಲಿ ನಡೆಸಲು ಅವಕಾಶ ನೀಡಿದೆ. ಮಹಾರಾಷ್ಟ್ರ, ಕೇರಳ ಮತ್ತು ಗೋವಾ ಗಡಿಗಳಲ್ಲಿ ಕಣ್ಗಾವಲು ತೀವ್ರಗೊಳಿಸಿದೆ. ಬಿಬಿಎಂಪಿ ಮುಖ್ಯ ಆಯುಕ್ತರು ಮತ್ತು ಜಿಲ್ಲೆಗಳ ಜಿಲ್ಲಾಧಿಕಾರಿಗಳು ಪರಿಸ್ಥಿತಿಯ ಮೌಲ್ಯಮಾಪನದ ಆಧಾರದ ಮೇಲೆ ಹೆಚ್ಚುವರಿ ಕ್ರಮಗಳನ್ನು ವಿಧಿಸಬಹುದು ಎಂದು ರಾಜ್ಯ ಸರ್ಕಾರ ತಿಳಿಸಿದೆ.

Leave a Comment

Your email address will not be published. Required fields are marked *