Ad Widget .

ಮಂಗಳೂರು: ಕುಖ್ಯಾತ ರೌಡಿ ಶೀಟರ್ ಗಳ ಬಂಧಿಸಿದ ಪೊಲೀಸರು

Ad Widget . Ad Widget .

Ad Widget . Ad Widget .

ಮಂಗಳೂರು, ಜ.14. ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಕೊಲೆ, ಕೊಲೆಯತ್ನ, ಅತ್ಯಾಚಾರ ಹಾಗೂ ದರೋಡೆ ಪ್ರಕರಣಗಳಲ್ಲಿ ಭಾಗಿಯಾಗಿ 2 ತಿಂಗಳ ಹಿಂದೆ ಜೈಲಿನಿಂದ ಜಾಮೀನಿನ ಮೇರೆಗೆ ಬಿಡುಗಡೆಗೊಂಡಿದ್ದ ಆಕಾಶ ಭವನ ಶರಣ್ ಸಹಿತ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ರೋಹಿದಾಸ್ ಯಾನೆ ಶರಣ್ ಆಕಾಶಭವನ (38), ಅನಿಲ್ ಕುಮಾರ್ ಸಾಲ್ಯಾನ್ ಯಾನೆ ಅನಿಲ್ ಪಂಪ್ ವೆಲ್ (40), ಸೈನಾಲ್ ಡಿ ಸೋಜಾ (22), ಪ್ರಸಾದ್ (39) ಹಾಗೂ ಚೇತನ್ ಕೊಟ್ಟಾರಿ (35) ಎಂದು ಗುರುತಿಸಲಾಗಿದೆ. ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಚೇಳಾರು ನಂದಿನಿ ಬ್ರಿಡ್ಜ್ ಬಳಿ ಡಿಸೆಂಬರ್ 8ರಂದು ರಾತ್ರಿ ಹಳೆಯಂಗಡಿ ನಿವಾಸಿಯೊಬ್ಬರು ತನ್ನ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಸಮಯ ಅಪರಿಚಿತ ವ್ಯಕ್ತಿಗಳಿದ್ದ ಕಾರು ಅವರನ್ನು ಹಿಂಬಾಲಿಸಿ ತಡೆದು ಚಾಕು ತೋರಿಸಿ ಬೆದರಿಸಿ ಅವರಲ್ಲಿದ್ದ ಮೊಬೈಲ್ ಫೋನ್, ನಗದು ಹಾಗೂ ದ್ವಿಚಕ್ರ ವಾಹನವನ್ನು ಸುಲಿಗೆ ಮಾಡಿದ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಭಾಗಿಯಾದ ಇತರ ಆರೋಪಿಗಳು ತಲೆಮರೆಸಿಕೊಂಡಿದ್ದು, ಪತ್ತೆ ಕಾರ್ಯ ಮುಂದುವರಿದಿದೆ.

Leave a Comment

Your email address will not be published. Required fields are marked *