Ad Widget .

ಬೆಂಗಳೂರು: ಶಾಪಿಂಗ್ ಮಾಲ್ ನಲ್ಲಿ ಅಗ್ನಿ ಅವಘಡ

Ad Widget . Ad Widget .

ಬೆಂಗಳೂರು: ತಡರಾತ್ರಿ ಬೆಂಗಳೂರಿನ ಅರಕೆರೆ ಗೇಟ್ ಬಳಿಯಿರುವ ಬೃಹತ್ ಶಾಪಿಂಗ್ ಸಂಕೀರ್ಣವಾದ ಸೌಥ್ ಇಂಡಿಯನ್ ಮಾಲ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.

Ad Widget . Ad Widget .

ತಕ್ಷಣಕ್ಕೆ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಮಾಲ್ ನ ಸೂಪರ್ ಮಾರ್ಕೆಟ್ ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ವೀಕೆಂಡ್ ಕರ್ಫ್ಯೂ ಹಿನ್ನೆಲೆ ಮಾಲ್ ನಲ್ಲಿ ಯಾರೂ ಇರದಿರುವ ಕಾರಣ ದೊಡ್ಡ ಅನಾಹುತವೊಂದು ತಪ್ಪಿದೆ. ಇನ್ನು ಘಟನೆಯಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

ಘಟನೆಯಲ್ಲಿ ಅಪಾರ ಪ್ರಮಾಣದ ವಸ್ತುಗಳು ನಾಶವಾಗಿವೆ. ಸದ್ಯ ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಪುಟ್ಟೇನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.

Leave a Comment

Your email address will not be published. Required fields are marked *