Ad Widget .

ಭ್ರಷ್ಟಾಚಾರ ಆರೋಪ| ರವಿ ಡಿ.ಚೆನ್ನಣ್ಣನವರ್‌‌ ವಿರುದ್ಧ ಸುದ್ದಿ ಪ್ರಕಟಿಸದಂತೆ ತಡೆಯಾಜ್ಞೆ

Ad Widget . Ad Widget .

ಬೆಂಗಳೂರು: ರವಿ ಡಿ.ಚೆನ್ನಣ್ಣನವರ್‌‌ ವಿರುದ್ಧ ಯಾವುದೇ ಸುದ್ದಿ ಪ್ರಕಟಿಸದಂತೆ ಹಲವು ಮಾಧ್ಯಮಗಳ ವಿರುದ್ಧ ಸಿಐಡಿ ಎಸ್‌ಪಿ ರವಿ ಡಿ.ಚೆನ್ನಣ್ಣನವರ್‌‌ ನ್ಯಾಯಾಲಯದಿಂದ ಮಧ್ಯಂತರ ತಡೆಯಾಜ್ಞೆ ಪಡೆದುಕೊಂಡಿದ್ದಾರೆ ಎಂದು ‘ದಿ ಫೈಲ್‌’ ವರದಿ ಮಾಡಿದೆ.

Ad Widget . Ad Widget .

ರವಿ ಡಿ.ಚೆನ್ನಣ್ಣವರ್‌‌ ಸೇರಿದಂತೆ ಕೆಲವು ಪೊಲೀಸ್ ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ಆರೋಪ ಸಂಬಂಧ ದೂರು ದಾಖಲಾಗಿದೆ ಎಂದು ತನಿಖಾ ವರದಿಗಳ ಸುದ್ದಿ ಜಾಲತಾಣ ‘ದಿ ಫೈಲ್‌.ಇನ್‌’ ವರದಿ ಮಾಡಿತ್ತು. ಆ ನಂತರದಲ್ಲಿ ಹಲವು ಮಾಧ್ಯಮಗಳು ಈ ಸುದ್ದಿಯನ್ನು ಪ್ರಕಟಿಸಿದ್ದವು.

‘ದಿ ಫೈಲ್‌’ ರಾಜ್ಯ ಮತ್ತು ರಾಷ್ಟ್ರ ಮಟ್ಟದ ವಿವಿಧ ದಿನಪತ್ರಿಕೆಗಳು, ಸಂಜೆ ಪತ್ರಿಕೆಗಳು, ಸುದ್ದಿ ವಾಹಿನಿಗಳು ಸೇರಿದಂತೆ 37 ಮಾಧ್ಯಮ ಸಂಸ್ಥೆಗಳನ್ನು ಪ್ರತಿಪಾದಿಗಳನ್ನಾಗಿ ಹೆಸರಿಸಲಾಗಿದೆ. ಅರ್ಜಿಯ ವಿಚಾರಣೆ ನಡೆಸಿದ ಸಿಟಿ ಸಿವಿಲ್‌ ನ್ಯಾಯಾಲಯದ ನ್ಯಾಯಾಧೀಶರು ಮಧ್ಯಂತರ ಪ್ರತಿಬಂಧಕಾಜ್ಞೆ ನೀಡಿ 14ರಂದು ಆದೇಶ ಹೊರಡಿಸಿದ್ದಾರೆ. ಈ ಅರ್ಜಿಯ ವಿಚಾರಣೆಯನ್ನು 2022ರ ಫೆಬ್ರುವರಿ 1ಕ್ಕೆ ಮುಂದೂಡಲಾಗಿದೆ ಎಂದು ‘ದಿ ಫೈಲ್‌’ ವರದಿ ತಿಳಿಸಿದೆ.

Leave a Comment

Your email address will not be published. Required fields are marked *