Ad Widget .

ಮಂಗಳೂರು: ಉದ್ಯಮಿಗೆ ಹಣ ಬೇಡಿಕೆ ಇಟ್ಟು ಜೀವ ಬೆದರಿಕೆ| ಇಬ್ಬರು ರೌಡಿಶೀಟರ್ ಗಳು ಅಂದರ್

Ad Widget . Ad Widget .

ಮಂಗಳೂರು: ಉದ್ಯಮಿಗೆ ಕರೆ ಮಾಡಿ ಹಣದ ಬೇಡಿಕೆ ಇಟ್ಟು, ಬೆದರಿಕೆ ಹಾಕಿ, ಹಣ ವಸೂಲಿ ಮಾಡಿದ ಇಬ್ಬರು ರೌಡಿ ಶೀಟರ್ ಗಳನ್ನು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕಲಂದರ್ ಶರೀಫ್ ಮತ್ತು ಹಸನಬ್ಬ ಎಂದು ಗುರುತಿಸಲಾಗಿದೆ.

Ad Widget . Ad Widget .

ಶರೀಫ್ ಮತ್ತು ಹಸನಬ್ಬ ಪುತ್ತೂರಿನ ಉದ್ಯಮಿಗೆ ಕರೆ ಮಾಡಿ ಯಾರೋ ಒಬ್ಬ ವ್ಯಕ್ತಿ ಜೈಲಿನಲ್ಲಿದ್ದಾನೆ ಅವನನ್ನು ಬಿಡಿಸಲು 13,00,000 ತಗಲುತ್ತದೆ. ಅವನನ್ನು ಬಿಡಿಸಲು ನೀನು ಹಣ ಕೊಡಬೇಕು. ಎರಡು ದಿನಗಳೊಳಗೆ 3,50,000 ಹಣ ರೆಡಿ ಮಾಡಬೇಕು.

ಇಲ್ಲದಿದ್ದರೆ ನಿನ್ನನ್ನು ಮತ್ತು ನಿನ್ನ ಮಕ್ಕಳನ್ನು ಜೀವ ಸಹಿತ ಬಿಡುವುದಿಲ್ಲ ಎಂದು ಬೆದರಿಸಿದ್ದು, ಅಷ್ಟೇ ಅಲ್ಲದೇ ಈ ವಿಷಯ ಬೇರೆ ಯಾರಿಗಾದರೂ ತಿಳಿಸಿದರೇ ನಿನ್ನ ಹೆಣ ಬೀಳುತ್ತದೆ. ನೀನು ಜೀವಂತ ಬದುಕಲು ಸಾಧ್ಯವಿಲ್ಲ ಎಂದು ಜೀವ ಬೆದರಿಕೆ ಹಾಕಿದ್ದರು. ಈ ಬಗ್ಗೆ ಪುತ್ತೂರು ಠಾಣೆಯಲ್ಲಿಪ್ರಕರಣ ದಾಖಲಾಗಿದ್ದು ಇದೀಗ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

Leave a Comment

Your email address will not be published. Required fields are marked *