Ad Widget .

ಮುಂದುವರೆದ ಕೊರೊನಾ ಹಾವಳಿ| ಇಂದು ಸಿಎಂ ನೇತೃತ್ವದಲ್ಲಿ ಸಭೆ| ಸೆಮಿ ಲಾಕ್ ಡೌನ್ ಸಾಧ್ಯತೆ|

Ad Widget . Ad Widget .

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ಶರವೇಗದಲ್ಲಿ ಹರಡುತ್ತಿರುವ ಹಿನ್ನೆಲೆ ಇಂದು(ಜ.17) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆಯಲಿದೆ.

Ad Widget . Ad Widget .

ಇಂದು ಸಂಜೆ 4 ಗಂಟೆಗೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ಸಿಎಂ ಬೊಮ್ಮಾಯಿ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಸಚಿವರಾದ ಡಾ.ಕೆ ಸುಧಾಕರ್‌ ಹಾಗೂ ಆರ್‌. ಅಶೋಕ್‌, ಕೋವಿಡ್‌ 19 ತಾಂತ್ರಿಕ ಸಲಹಾ ಸಮಿತಿಯ ಸದಸ್ಯರು ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಲಿದ್ದಾರೆ .

ರಾಜ್ಯದಲ್ಲಿ ಸದ್ಯ ವಿಧಿಸಿರುವ ಕಠಿಣ ರೂಲ್ಸ್‌ ಜನವರಿ 19ಕ್ಕೆ ಅಂತ್ಯವಾಗಲಿದ್ದು, ಈ ಕಠಿಣ ರೂಲ್ಸ್‌ ಮುಂದುವರಿಸುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಗುತ್ತದೆ. ಹಾಗೂ ಮಹಾಮಾರಿ ಕೊರೊನಾ ತಡೆಗೆ ರಾಜ್ಯದಲ್ಲಿ ಮತ್ತಷ್ಟು ಟೈಟ್ ರೂಲ್ಸ್ ಜಾರಿಗೊಳಿಸಲಾಗುತ್ತಿದೆ ಎಂದು ಹೇಳಲಾಗುತ್ತಿದೆ. ಅಲ್ಲದೇ ರಾಜ್ಯದಲ್ಲಿ ಸೆಮಿಲಾಕ್ ಡೌನ್ ಜಾರಿಗೆ ಕೂಡ ಸರ್ಕಾರ ಚಿಂತನೆ ನಡೆಸಿದೆ ಎಂದು ಹೇಳಲಾಗುತ್ತಿದೆ.

Leave a Comment

Your email address will not be published. Required fields are marked *