ರಾಂಚಿ: ಮನೆಯವರ ಒತ್ತಾಯಕ್ಕೆ ಯುವಕನನ್ನು ಮದುವೆ ಮಾಡಿಕೊಂಡಿರುವ ಯುವತಿ ಮರುದಿನವೇ ಸಲಿಂಗಿ ಸಂಗಾತಿ ಜೊತೆ ಓಡಿ ಹೋಗಿರುವ ಘಟನೆ ಜಾರ್ಖಂಡ್ನ ಧನ್ಬಾದ್‍ನಲ್ಲಿ ನಡೆದಿದೆ.
ಯುವತಿ ವಿವಾಹ ಮಾಡಿಕೊಳ್ಳುವುದಕ್ಕೂ ಮುಂಚಿತವಾಗಿ ಸಲಿಂಗ ಸಂಗಾತಿ ಜೊತೆ ವಾಸವಾಗಿದ್ದಳು. ಇದನ್ನರಿತ ಕುಟುಂಬಸ್ಥರು ಯುವಕನೊಂದಿಗೆ ಬಲವಂತವಾಗಿ ಮದುವೆ ಮಾಡಿಸಿದ್ದಾರೆ. ಈ ಬೆನ್ನಲ್ಲೇ ಆಕೆ ಮದುವೆಯಾದ ಮರುದಿನವೇ ಸಲಿಂಗ ಸಂಗಾತಿ ಜೊತೆಗೆ ಎಸ್ಕೇಪ್ ಆಗಿದ್ದಾಳೆ. ಇಬ್ಬರೂ ಕಳೆದ ಅನೇಕ ವರ್ಷಗಳಿಂದ ಪರಿಚಯವಾಗಿದ್ದು, ಒಬ್ಬರನ್ನೊಬ್ಬರು ಪ್ರೀತಿಸಲು ಶುರು ಮಾಡಿದ್ದರಂತೆ.
ಕಳೆದ ಡಿಸೆಂಬರ್ ತಿಂಗಳಲ್ಲಿ ನಡೆದ ಪ್ರಕರಣ ಇದಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಪೊಲೀಸ್ ಠಾಣೆಯಲ್ಲಿ ಯುವತಿ ಗಂಡನೊಂದಿಗೆ ಜೀವನ ನಡೆಸಲು ಸಾಧ್ಯವಿಲ್ಲ, ಸಲಿಂಗ ಸಂಗಾತಿ ಜೊತೆ ಇರುವುದಾಗಿ ಹೇಳಿ, ನಮಗೆ ರಕ್ಷಣೆ ಕೊಡಿ ಎಂದು ಕೇಳಿಕೊಂಡಿದ್ದಾಳೆ.