Ad Widget .

ವಿವಾದಾತ್ಮಕ ಹೇಳಿಕೆ| ಕಾಳಿಮಠ ಸ್ವಾಮೀಜಿ ವಿರುದ್ದ ಎಫ್ಐಆರ್|

Ad Widget . Ad Widget .

ಶ್ರೀರಂಗಪಟ್ಟಣ: ಇಲ್ಲಿನ ಜಾಮಿಯಾ ಮಸೀದಿ ಕುರಿತು ಸಾಮಾಜಿಕ ಜಾಲತಾಣದಲ್ಲಿ ವಿವಾದಿತ ಹೇಳಿಕೆ ನೀಡಿ ವಿಡಿಯೋ ಹರಿಬಿಟ್ಟಿದ್ದ ಕಾಳಿ ಮಠದ ಋಷಿಕುಮಾರಸ್ವಾಮಿ ವಿರುದ್ಧ ಪಟ್ಟಣ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget . Ad Widget .

ಭಾನುವಾರ ಖಾಸಗಿ ಕಾರ್ಯಕ್ರಮ ನಿಮಿತ್ತ ಶ್ರೀರಂಗಪಟ್ಟಣಕ್ಕೆ ಆಗಮಿಸಿದ್ದ ಅರಸೀಕೆರೆಯ ಕಾಳಿ ಮಠದ ಋಷಿಕುಮಾರ ಸ್ವಾಮೀಜಿ, ಮಸೀದಿ ಮುಂಭಾಗದಲ್ಲೇ ನಿಂತು ವಿವಾದಿತ ಹೇಳಿಕೆ ಉಲ್ಲೇಖಿಸಿ ವಿಡಿಯೋ ಚಿತ್ರೀಕರಣ ನಡೆಸಿ, ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದ ತಮ್ಮ ಖಾತೆಯಲ್ಲಿ ಪ್ರಕಟಿಸಿದ್ದಾರೆ.

ಇದೀಗ ಈ ವಿಡಿಯೋ ವೈರಲ್​ ಆಗಿದೆ. ಈ ಹಿನ್ನೆಲೆ ಮಸೀದಿಗೆ ಭದ್ರತೆ ಹೆಚ್ಚಿಸುವ ಕುರಿತು ವಕ್ಫ್​ ಬೋರ್ಡ್​ ಸಮಿತಿ ಹಾಗೂ ಕೇಂದ್ರ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ಶ್ರೀರಂಗಪಟ್ಟಣ ಪಟ್ಟಣ ಪೊಲೀಸ್​ ಠಾಣೆಗೆ ಮನವಿ ಮಾಡಿವೆ. ಮಸೀದಿ ಭದ್ರತೆಗೆ ನಿಯೋಜನೆಗೊಂಡ ಸಿಬ್ಬಂದಿ ನೀಡಿರುವ ಲಿಖಿತ ಮಾಹಿತಿ ಪ್ರಕಾರ ವಿಡಿಯೋದಲ್ಲಿ ಮಾತನಾಡಿರುವ ಋಷಿಕುಮಾರಸ್ವಾಮಿ ಹಾಗೂ ವಿಡಿಯೋ ಚಿತ್ರೀಕರಿಸಿದ ಇಬ್ಬರ ಮೇಲೂ ದೂರು ದಾಖಲಾಗಿದೆ.

Leave a Comment

Your email address will not be published. Required fields are marked *