Ad Widget .

ಬಸ್ಸ್ ನಲ್ಲಿ ವಿದ್ಯಾರ್ಥಿನಿಯ ಅತ್ಯಾಚಾರ ನಡಸಿದ ಡ್ರೈವರ್ ಮತ್ತು ಕಂಡಕ್ಟರ್

Ad Widget . Ad Widget .

ಪಾಲ(ತ್ರಿಶೂರ್): ಖಾಸಗಿ ಬಸ್​​ವೊಂದರಲ್ಲಿ 8ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿರುವ ಘಟನೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಂಡಕ್ಟರ್ ಹಾಗೂ ಡ್ರೈವರ್​​​ನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಬಂಧಿತರನ್ನು ಆರೋಪಿಗಳನ್ನು ಅಫ್ಜಲ್​(31) ಹಾಗೂ ಅಬಿನ್​ ಎಂದು ಗುರುತಿಸಲಾಗಿದೆ.

Ad Widget . Ad Widget .

ಇವರಿಬ್ಬರು ಕೇರಳದ ಇಡುಕ್ಕಿಯವರಾಗಿದ್ದು 8ನೇ ತರಗತಿ ವಿದ್ಯಾರ್ಥಿನಿಯನ್ನು ಅತ್ಯಾಚಾರ ನಡೆಸಿದ್ದಾರೆ. ಈಕೆ ಪ್ರತಿದಿನ ಶಾಲೆಗೆ ಇದೇ ಬಸ್​​ನಲ್ಲಿ ಹೋಗುತ್ತಿದ್ದಳು ಎಂದು ತಿಳಿದು ಬಂದಿದೆ.

ಈಗಾಗಲೇ ಮದುವೆ ಮಾಡಿಕೊಂಡಿರುವ ಅಫ್ಜಲ್​​ ವಿದ್ಯಾರ್ಥಿನಿ ಜೊತೆ ಪ್ರೀತಿಯ ನಾಟಕವಾಡಿದ್ದಾನೆ. ಶನಿವಾರದಂದು ಶಾಲೆ ಬಿಟ್ಟು ಮನೆಗೆ ತೆರಳಲು ಬಾಲಕಿ ಬಸ್​ ಸ್ಯಾಂಡ್​ಗೆ ಬಂದಿದ್ದಾಳೆ. ಈ ವೇಳೆ ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾನೆ. ಈತನ ಕೃತ್ಯಕ್ಕೆ ಕಂಡಕ್ಟರ್​​ ಅಬಿನ್ ಸಾಥ್​ ನೀಡಿದ್ದಾನೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ಪಡೆದುಕೊಂಡಿರುವ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಸ್ ವಶಪಡಿಸಿಕೊಂಡಿದ್ದಾರೆ.

Leave a Comment

Your email address will not be published. Required fields are marked *