Ad Widget .

ವೈವಾಹಿಕ ಜೀವನಕ್ಕೆ ಗುಡ್ ಬೈ ಹೇಳಿದ ನಟ ಧನುಷ್| 18 ವರ್ಷ ಜೊತೆಗಿದ್ದ ರಜನಿ ಪುತ್ರಿಗೆ ಡಿವೊರ್ಸ್|

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಚೆನ್ನೈ: ಕಾಲಿವುಡ್​ ಸೂಪರ್​ಸ್ಟಾರ್​ ಧನುಷ್​ ಅವರು 18 ವರ್ಷದ ವೈವಾಹಿಕ ಜೀವನಕ್ಕೆ ದಿಢೀರ್​ ಗುಡ್​ ಬೈ ಹೇಳಿದ್ದಾರೆ. ಸೂಪರ್​ಸ್ಟಾರ್​ ರಜಿನಿಕಾಂತ್ ಅವರ ಹಿರಿಯ​ ಪುತ್ರಿ ಐಶ್ವರ್ಯಾರನ್ನು ವರಿಸಿದ್ದ ಧನುಷ್​, ಇದೀಗ ಟ್ವಿಟರ್​ ಮೂಲಕ ವಿಚ್ಛೇದನಾ ಸುದ್ದಿಯನ್ನು ಖಚಿತಪಡಿಸಿದ್ದಾರೆ.

Ad Widget . Ad Widget . Ad Widget .

ಸ್ನೇಹಿತರಾಗಿ, ದಂಪತಿಯಾಗಿ, ಪೋಷಕರಂತೆ ಮತ್ತು ಪರಸ್ಪರ ಹಿತೈಷಿಗಳಾಗಿ ಈ 18 ವರ್ಷಗಳು ಒಟ್ಟಿಗೆ ಕಳೆದೆವು. ಈ ಸುದೀರ್ಘ ಪ್ರಯಾಣವು ಬೆಳವಣಿಗೆ, ತಿಳುವಳಿಕೆ ಮತ್ತು ಹೊಂದಿಕೊಳ್ಳುವಿಕೆಯಿಂದ ಕೂಡಿತ್ತು. ಆದರೆ, ಇಂದು ನಾವು ನಮ್ಮ ದಾರಿಯಲ್ಲಿ ಪ್ರತ್ಯೇಕಗೊಳ್ಳುವ ಸ್ಥಳದಲ್ಲಿ ನಿಂತಿದ್ದೇವೆ ಎಂದು ಧನುಷ್​ ಟ್ವೀಟ್​ ಮಾಡಿದ್ದಾರೆ.

ಈ ಸಂಬಂಧ ಅಭಿಮಾನಿಗಳಲ್ಲಿ ಧನುಷ್​ ಮನವಿ ಮಾಡಿದ್ದು ನಮ್ಮ ನಿರ್ಧಾರವನ್ನು ಗೌರವಿಸಿ, ನಮಗೆ ಬೇಕಾಗಿರುವ ಖಾಸಗಿತನವನ್ನು ನೀಡಿ ಎಂದಿದ್ದಾರೆ. ಐಶ್ವರ್ಯಾ ಕೂಡ ಹೇಳಿಕೆಯನ್ನು ನೀಡಿದ್ದು, ಹೆಚ್ಚಿಗೆ ಹೇಳುವ ಅಗತ್ಯವಿಲ್ಲ. ನಿಮ್ಮ ತಿಳುವಳಿಕೆ ಮತ್ತು ಪ್ರೀತಿ ಮಾತ್ರ ಅಗತ್ಯ ಎಂದು ಜನರಲ್ಲಿ ಕೋರಿದ್ದಾರೆ.

ಐಶ್ವರ್ಯಾ ಮತ್ತು ಧನುಷ್​ 2004ರ ನವೆಂಬರ್​ 18ರಂದು ಮದುವೆಯಾಗಿದ್ದು, ಇವರಿಗೆ ಯಾತ್ರ ಮತ್ತು ಲಿಂಗ ಹೆಸರಿನ ಇಬ್ಬರು ಗಂಡು ಮಕ್ಕಳಿದ್ದಾರೆ.

Leave a Comment

Your email address will not be published. Required fields are marked *