Ad Widget .

ಉಪ್ಪಿನಂಗಡಿ: ಪಿಗ್ಮಿ ಸಂಗ್ರಾಹಕ ನಾಪತ್ತೆ| ದೂರು ದಾಖಲು|

ಉಪ್ಪಿನಂಗಡಿ: ಇಲ್ಲಿನ ಸಮೀಪದ ನೆಲ್ಯಾಡಿಯ ಸಹಕಾರ ಸಂಘವೊಂದರ ಶಾಖೆಯಲ್ಲಿ ಪಿಗ್ಮಿ ಸಂಗ್ರಾಹಕರಾಗಿದ್ದ ಕೌಕ್ರಾಡಿ ಗ್ರಾಮದ ದೋಂತಿಲ ನಿವಾಸಿ ಪ್ರವೀಣ್ ಕುಮಾರ್ ಎಂಬವರು ಕಳೆದ 15 ದಿನಗಳಿಂದ ನಾಪತ್ತೆಯಾಗಿದ್ದು‌ ಈ ಕುರಿತು ‌ಉಪ್ಪಿನಂಗಡಿ‌ ಠಾಣೆಯಲ್ಲಿ ದೂರು ದಾಖಲಾಗಿದೆ.

Ad Widget . Ad Widget .

ನೆಲ್ಯಾಡಿ ಅಸುಪಾಸಿನಲ್ಲಿ ಹಲವು ಮಂದಿಯಿಂದ ಲಕ್ಷಾಂತರ ರೂ. ಸಾಲ ಪಡೆದುಕೊಂಡಿದ್ದು ಸಾಲ ಹಿಂತಿರುಗಿಸಲು ಸಾಧ್ಯವಾಗದೆ ನಾಪತ್ತೆಯಾಗಿರುವುದಾಗಿ ಹೇಳಲಾಗಿದ್ದು, ಜ.18ರಂದು ಮಧ್ಯಾಹ್ನದ ಮಾಧ್ಯಮ ಪ್ರತಿನಿಧಿಯೊಬ್ಬರಿಗೆ ವಾಟ್ಸಪ್ ಕರೆ ಮಾಡಿ , ನಾನು ಬಿಹಾರದಲ್ಲಿದ್ದು ಛೋಟಾ ರಾಜನ್ ಗ್ಯಾಂಗ್‌ನವರ ಜಾಲದೊಳಗೆ ಸಿಲುಕಿಕೊಂಡಿರುವುದಾಗಿ ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.

Ad Widget . Ad Widget .

ಕಳೆದ 10ಕ್ಕೂ ಹೆಚ್ಚು ವರ್ಷಗಳಿಂದ ನೆಲ್ಯಾಡಿಯಲ್ಲಿ ಪಿಗ್ಮಿ ಸಂಗ್ರಾಹಕರಾಗಿ ಕೆಲಸ ಮಾಡಿಕೊಂಡಿದ್ದ ಪ್ರವೀಣ್ ಎಲ್ಲರಿಗೂ ಚಿರಪರಿಚಿತರಾಗಿದ್ದು, ಇಲ್ಲಿನ ವ್ಯಾಪಾರಿಗಳು, ಪ್ರತಿಷ್ಠಿತ ಉದ್ಯಮಿಗಳು ಸೇರಿದಂತೆ ಹಲವು ಮಂದಿಯ ವಿಶ್ವಾಸಗಳಿಸಿಕೊಂಡಿದ್ದ. ಕೆಲವರಿಂದ ಲಕ್ಷಕ್ಕೂ ಮಿಕ್ಕಿ ಕೈ ಸಾಲ ಪಡೆದುಕೊಂಡು ಹಿಂತಿರುಗಿಸಲಾಗದೆ ಈಗ ನಾಪತ್ತೆಯಾಗಿದ್ದಾರೆ ಎಂದು ಹೇಳಲಾಗಿದೆ.

ಚಿಟ್‌ಫಂಡ್‌ನಲ್ಲೂ ಇವರಿಂದ ಕೆಲವರಿಗೆ ಮೋಸ ಆಗಿದೆ ಎಂಬ ದೂರುಗಳು ಕೇಳಿಬಂದಿದ್ದು, ಹಲವು ಮಂದಿಯಿಂದ ರೂ.55ಲಕ್ಷಕ್ಕೂ ಹೆಚ್ಚು ಸಾಲ ಮಾಡಿದ್ದರು ಎಂದು ಹೇಳಲಾಗಿದೆ. ಜ.3ರಿಂದ ನಾಪತ್ತೆಯಾಗಿದ್ದು ಮೊಬೈಲ್ ಈಗ ಸ್ವಿಚ್ಡ್ ಆಫ್ ಆಗಿದೆ . ಪ್ರವೀಣ್ ಮನೆಯವರು ಉಪ್ಪಿನಂಗಡಿ ಪೊಲೀಸರಿಗೆ ನಾಪತ್ತೆಯಾಗಿರುವುದಾಗಿ ದೂರು ನೀಡಿದ್ದಾರೆ

Leave a Comment

Your email address will not be published. Required fields are marked *