ಸಿಎಂ ಮನೆಮುಂದೆ ಏಕಾಂಗಿ ಧರಣಿ ಕುಳಿತ ಎಚ್.ಡಿ ರೇವಣ್ಣ

Ad Widget ... ..

ಬೆಂಗಳೂರು: ಹೊಳೆನರಸೀಪುರ ಸರ್ಕಾರಿ ಮಹಿಳಾ ಗೃಹ ವಿಜ್ಞಾನ ಕಾಲೇಜಿನಲ್ಲಿ ಎಂಎಸ್‍ಸಿ ಸೈಕಾಲಜಿ ಮತ್ತು ಫುಡ್ ಮತ್ತು ನ್ಯೂಟ್ರೀಷಿಯನ್ ಕೋರ್ಸ್‍ಗಳ ಆರಂಭಕ್ಕೆ ಆಗ್ರಹಿಸಿ ಮಾಜಿ ಸಚಿವ ಎಚ್.ಡಿ.ರೇವಣ್ಣ ಇಂದು ಏಕಾಂಗಿ ಧರಣಿ ನಡೆಸಿದರು.

Ad Widget

ಮುಖ್ಯಮಂತ್ರಿಗಳ ಗೃಹಕಚೇರಿ ಕೃಷ್ಣಾ ಆವರಣದಲ್ಲಿ ಧರಣಿ ನಡೆಸಿ 2022-23ನೆ ಶೈಕ್ಷಣಿಕ ಸಾಲಿನಲ್ಲಿ ಎರಡು ಹೊಸ ಕೋರ್ಸ್‍ಗಳ ಪ್ರಾರಂಭಕ್ಕೆ ಸರ್ಕಾರ ಅನುಮತಿ ನೀಡಬೇಕೆಂದು ಒತ್ತಾಯಿಸಿದರು.

ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ಎರಡೂ ಕೋರ್ಸ್‍ಗಳ ಉಪನ್ಯಾಸಕರಿಗೆ ತಗುಲುವ ವೇತನ ವೆಚ್ಚವನ್ನು ತಾತ್ಕಾಲಿಕವಾಗಿ ಸಿಡಿಸಿ ಸಮಿತಿ ಅಥವಾ ಸ್ವಂತ ಖರ್ಚಿನಲ್ಲಿ ಭರಿಸುವುದಾಗಿ ಮುಖ್ಯಮಂತ್ರಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.

ಹೊಸ ಕೋರ್ಸ್‍ಗಳನ್ನು ಪ್ರಾರಂಭಿಸಲು ಮೈಸೂರು ವಿವಿ ಶಿಫಾರಸು ಮಾಡಿದ್ದು, ಆ ಶಿಫಾರಸನ್ನು ಉನ್ನತ ಶಿಕ್ಷಣ ಸಚಿವರು ತಿರಸ್ಕರಿಸಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Leave a Comment

Your email address will not be published. Required fields are marked *