ಮಂಗಳೂರು: ಮರುವಾಯಿ(ಚಿಪ್ಪು ಮೀನು) ತಿಂದು ಹಲವರು ಅಸ್ವಸ್ಥಗೊಂಡು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ನಗರದ ಹೊರವಲಯದ ಗುರುಪುರ ಕುಪ್ಪೆಪದವುವಿನಲ್ಲಿ ನಡೆದಿದೆ.
ತುಳುವಿನಲ್ಲಿ ಮರುವಾಯಿ ಎಂದು ಕರೆಯಲ್ಪಡುವ ಚಿಪ್ಪು ಮೀನು ಖರೀದಿಸಿ ಪದಾರ್ಥ ಮಾಡಿ ತಿಂದ ಮೇಲೆ ಕೆಲವರು ಅಸ್ವಸ್ಥಗೊಂಡಿದ್ದು, ಕೋವಿಡ್ ಭೀತಿಯಿಂದ ಸರ್ಕಾರಿ ಆಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತೆರಳದೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.
ಇನ್ನು ಆರೊಗ್ಯ ಕೇಂದ್ರಕ್ಕೆ ಯಾರೊಬ್ಬರೂ ಚಿಕಿತ್ಸೆಗೆ ಬಂದಿಲ್ಲ. ಫುಡ್ ಪಾಯಿಸನ್ ಆಗಿರುವ ಬಗ್ಗೆ ಕೆಲವರು ಮಾಹಿತಿ ನೀಡಿದ್ದಾರೆ. ಅನಾರೋಗ್ಯ ಪೀಡಿತರು ಕೇಂದ್ರಕ್ಕೆ ಬಂದಲ್ಲಿ ಚಿಕಿತ್ಸೆ ನೀಡಲಾಗುವುದು. ಕೋವಿಡ್ ಬಗ್ಗೆ ಭೀತಿಗೊಳ್ಳುವ ಅಗತ್ಯವಿಲ್ಲ ಎಂದು ಕುಪ್ಪೆಪದವು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.