Ad Widget .

ವೀಕೆಂಡ್ ಕರ್ಪ್ಯೂ ಕುರಿತು ಇಂದು ಸಿಎಂ ಸಭೆ| ‌ ಮಧ್ಯಾಹ್ನ ಹೊಸ ಮಾರ್ಗಸೂಚಿ ಪ್ರಕಟ

Ad Widget . Ad Widget .

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಮಧ್ಯಾಹ್ನ 1 ಗಂಟೆಗೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮಹತ್ವದ ಸಭೆ ನಡೆಯಲಿದೆ. ಸಚಿವರು, ಅಧಿಕಾರಿಗಳು, ತಜ್ಞರೊಂದಿಗೆ ಮುಖ್ಯಮಂತ್ರಿಗಳು ಸಮಾಲೋಚನೆ ನಡೆಸಲಿದ್ದಾರೆ.

Ad Widget . Ad Widget .

ಕೊರೋನಾ ನಿಯಂತ್ರಣಕ್ಕೆ ಕೈಗೊಳ್ಳಬೇಕಿರುವ ಕ್ರಮಗಳ ಕುರಿತಾಗಿ ಸಭೆಯಲ್ಲಿ ಚರ್ಚೆ ನಡೆಯಲಿದ್ದು, ನೈಟ್ ಕರ್ಫ್ಯೂ ಮತ್ತು ವೀಕೆಂಡ್ ಕರ್ಫ್ಯೂ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ. ಮಧ್ಯಾಹ್ನದ ವೇಳೆಗೆ ಹೊಸ ಮಾರ್ಗಸೂಚಿ ಜಾರಿಯಾಗುವ ಸಾಧ್ಯತೆಯಿದೆ.

ವೀಕೆಂಡ್ ಕರ್ಫ್ಯೂ ಕೈಬಿಡಬೇಕೆಂಬ ಒತ್ತಾಯ ತೀವ್ರವಾಗಿರುವ ಹಿನ್ನೆಲೆಯಲ್ಲಿ ಇಂದಿನ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗುತ್ತದೆ. ಜನಸಾಮಾನ್ಯರು ಭಯಪಡುವ ಅವಶ್ಯಕತೆ ಇಲ್ಲವೆಂದು ಗೃಹಸಚಿವರು ಹೇಳಿದ್ದಾರೆ. ಇಂದಿನಿಂದ ವೀಕೆಂಡ್ ಕರ್ಫ್ಯೂ ಇರುವುದಿಲ್ಲವೆಂದು ಹೇಳಲಾಗಿದ್ದು, ಸಿಎಂ ನಡೆಸುವ ಸಭೆಯತ್ತ ಎಲ್ಲರ ಚಿತ್ತ ನೆಟ್ಟಿದೆ.

Leave a Comment

Your email address will not be published. Required fields are marked *