Ad Widget .

ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರಿಗೆ ಕೋವಿಡ್ ಪಾಸಿಟಿವ್

Ad Widget . Ad Widget .

ಬೆಂಗಳೂರು : ಮಾಜಿ ಪ್ರಧಾನಿ, ರಾಜ್ಯಸಭಾ ಸದಸ್ಯ ಹೆಚ್.ಡಿ.ದೇವೇಗೌಡ ಅವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಅವರು ನಗರದ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ.

Ad Widget . Ad Widget .

ಗೌಡರು ನಿನ್ನೆ ಪರೀಕ್ಷೆಗೆ ಒಳಪಟ್ಟಿದ್ದು, ಕೊರೊನಾ ಸೋಂಕು ದೃಢಪಟ್ಟಿದೆ. ಪಾಸಿಟಿವ್ ಬಂದಿದ್ದರೂ ದೇವೇಗೌಡರು ಆರೋಗ್ಯವಾಗಿದ್ದು, ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.

ಕೋವಿಡ್ ಎರಡನೇ ಅಲೆಯಲ್ಲೂ ದೇವೇಗೌಡರಿಗೆ ಕೋವಿಡ್‌ ಪಾಸಿಟಿವ್‌ ಬಂದಿತ್ತು. ಆಗಲೂ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಎರಡು ಡೋಸ್ ಕೋವಿಡ್ ಲಸಿಕೆ ಕೂಡ ದೇವೇಗೌಡರು ಪಡೆದಿದ್ದಾರೆ.

Leave a Comment

Your email address will not be published. Required fields are marked *