Ad Widget .

ಮುಂಬೈ: ಬಹುಮಹಡಿ ಕಟ್ಟಡದಲ್ಲಿ ಬೆಂಕಿ| ಏಳು ಮಂದಿ ಸಜೀವ ದಹನ

Ad Widget . Ad Widget .

ಮುಂಬೈ: ಇಲ್ಲಿನ ತದ್ದೇವ್ ಪ್ರದೇಶದ ಭಾಟಿಯಾ ಆಸ್ಪತ್ರೆ ಬಳಿಯ ಕಟ್ಟಡದಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ 7 ಜನರು ಸಾವನ್ನಪ್ಪಿದ್ದಾರೆ. ಹಲವರಿಗೆ ಸುಟ್ಟ ಗಾಯಗಳಾಗಿವೆ. ಮೃತಪಟ್ಟ ಏಳು ಮಂದಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ವೇಳೆ ಅವರು ಸಾವನ್ನಪ್ಪಿದ್ದಾರೆ.

Ad Widget . Ad Widget .

ಸಾವನ್ನಪ್ಪಿದವರಲ್ಲಿ 5 ಜನರು ನಾಯರ್ ಆಸ್ಪತ್ರೆಯಲ್ಲಿ, ಒಬ್ಬರು ಕಸ್ತೂರ್ಬಾ ಆಸ್ಪತ್ರೆಯಲ್ಲಿ ಮತ್ತು ಇನ್ನೊಬ್ಬರು ಭಾಟಿಯಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಮಾಹಿತಿ ಪ್ರಕಾರ ಬೆಳಗ್ಗೆ 7.30ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಕಟ್ಟಡದ 15ನೇ ಮಹಡಿಯಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡು ನಂತರ ಮೇಲಕ್ಕೆ ತಲುಪಿದೆ ಎಂದು ಹೇಳಲಾಗಿದೆ. ಬೆಂಕಿಯಿಂದಾಗಿ 19 ನೇ ಮಹಡಿಗೆ ಹೆಚ್ಚು ಹಾನಿಯಾಗಿದೆ. ಹಲವಾರು ಅಗ್ನಿಶಾಮಕ ದಳದವರು ಸಾಕಷ್ಟು ಪ್ರಯತ್ನದ ನಂತರ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಬೆಂಕಿಯ ಹೊಗೆಯಿಂದಾಗಿ ರಕ್ಷಣಾ ಕಾರ್ಯಕರ್ತರು ಒಳ ಹೋಗಲು ಕಷ್ಟಪಡುತ್ತಿದ್ದಾರೆ. ಬೆಂಕಿ ಅನಾಹುತಕ್ಕೆ ಕಾರಣ ಏನೆಂದು ಇನ್ನೂ ಪತ್ತೆಯಾಗಿಲ್ಲ.

Leave a Comment

Your email address will not be published. Required fields are marked *