Ad Widget .

ಮಂಗಳೂರು: ಹಣಕ್ಕಾಗಿ ಜ್ಯೋತಿಷಿಯನ್ನೇ ಹನಿಟ್ರ್ಯಾಪ್ ಖೆಡ್ಡಾಗೆ ಕೆಡವಿದ ದಂಪತಿ| ಸಿಸಿಬಿ ಪೊಲೀಸರಿಂದ ಆರೋಪಿಗಳ ಬಂಧನ

Ad Widget . Ad Widget .

ಮಂಗಳೂರು : ನಗರದ ಪದವಿನಂಗಡಿನ ದಂಪತಿಗಳ ನಡುವಿನ ಸಮಸ್ಯೆಯನ್ನು ಪರಿಹಾರ ಮಾಡಲು ಮನೆಯಲ್ಲಿ ಪೂಜೆ ಮಾಡಬೇಕೆಂದು ಪುರೋಹಿತ ರನ್ನು ಕರೆಯಿಸಿ ಹನಿಟ್ರ್ಯಾಪ್ ಮಾಡಿ ವ್ಯಕ್ತಿಯೊಬ್ಬರನ್ನು ಸುಲಿಗೆ ಮಾಡಿದ ಪ್ರಕರಣದಲ್ಲಿ ಭಾಗಿಯಾದ ಆರೋಪಿ ದಂಪತಿಗಳನ್ನು ಸಿಸಿಬಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Ad Widget . Ad Widget .

ತನಿಖೆಯನ್ನು ಕೈಗೊಂಡ ಮಂಗಳೂರು ಸಿಸಿಬಿ ಪೊಲೀಸ್ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ನೇತೃತ್ವದ ತಂಡ ಪ್ರಮುಖ ಅರೋಪಿಗಳಾದ ಆರೋಪಿಗಳಾದ ಮೇರಿಹಿಲ್ ನಲ್ಲಿರುವ ಕೊಡಗು ಜಿಲ್ಲೆಯ ಶನಿವಾರ ಸಂಜೆ ಮೂಲದ ಭವ್ಯ ( 30 ) ಆಕೆಯ ಪತಿ ಹಾಸನ ಜಿಲ್ಲೆಯ ಅರಕಲಗೂಡು ಮೂಲದ ಕಾರು ಚಾಲಕನಾಗಿರುವ ಕುಮಾರ್ ಪುರಾಜು( 35 ) ಎಂಬವರನ್ನು ಬಂಧಿಸಲಾಗಿದೆ.

ಪ್ರಕರಣದ ವಿವರ

ಚಿಕ್ಕಮಗಳೂರು ಜಿಲ್ಲೆಯ ಪುರೋಹಿತ ಮತ್ತು ಜ್ಯೋತಿಷಿಯೊಬ್ಬರನ್ನು ಭೇಟಿಯಾಗಿದ್ದ ದಂಪತಿಗಳು ತಮ್ಮ ಮನೆಯಲ್ಲಿನ ಸಮಸ್ಯೆಯನ್ನು ಬಗೆಹರಿಸಲು ಪೂಜೆಯನ್ನು ಮಾಡಿಕೊಡಬೇಕೆಂದು ಮನೆಗೆ ಕರೆಯಿಸಿಕೊಂಡು ಮನೆಯಲ್ಲಿರುವ ಸಮಯ ಪುರೋಹಿತರ ಜೊತೆಗಿರುವ ಫೋಟೋ ಮತ್ತು ವಿಡಿಯೋವನ್ನು ತೆಗೆದು ನಂತರ ಬ್ಲಾಕ್ ಮೇಲ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುವುದಾಗಿ ಹೆದರಿಸಿ, ಕೊಲ್ಲುವುದಾಗಿ ಜೀವ ಬೆದರಿಕೆ ಹಾಕಿ 15 ಲಕ್ಷ ರೂ ನಗದು ಹಣ ಹಾಗೂ ಸುಮಾರು 14 ಲಕ್ಷ ರೂಪಾಯಿಗಳನ್ನು ಬೇರೆ ಬೇರೆ ಖಾತಗಳಿಂದ ಆರೋಪಿಗಳು ನೀಡಿದ ಬ್ಯಾಂಕ್ ಬೇರೆ ಬೇರೆ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಿಸಿಕೊಂಡಿರುತ್ತಾರೆ. ಈ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆಯಲ್ಲಿದೆ.

ಆರೋಪಿಗಳು ಇತರ ಕೆಲವು ವ್ಯಕ್ತಿಗಳಿಗೆ ಇದೇ ರೀತಿ ಹಟ್ಯಾಪ್ ಮಾಡಿ ಹಣ ಸುಲಿಗೆ ಮಾಡಿದ ಪ್ರಕರಣದಲ್ಲಿ ಭಾಗಿಯಾಗಿರುವ ಸಾಧ್ಯತೆಯಿದ್ದು , ಈ ಬಗ್ಗೆ ತನಿಖೆ ಮುಂದುವರಿದಿದೆ. ಆರೋಪಿಗಳ ಬಳಿಯಿಂದ 37,000 ಮೌಲ್ಯದ ಎರಡು 2 ಚಿನ್ನದ ರಿಂಗ್ , ನಗದು 31,000 ರೂ ಮತ್ತು 4 ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಪ್ರಕರಣದಲ್ಲಿ ಆರೋಪಿಗಳ ಜೊತೆ ಇತರರು ಕೂಡಾ ಭಾಗಿಯಾಗಿ ಹಣವನ್ನು ಪಡೆದುಕೊಂಡಿರುವ ಬಗ್ಗೆ ಮಾಹಿತಿಯಿದ್ದು , ಈ ಬಗ್ಗೆ ತನಿಖೆ ಮುಂದುವರಿಸಲಾಗಿದೆ.

ಆರೋಪಿಗಳು ಇನ್ನಷ್ಟು ಹಣಕ್ಕಾಗಿ ಪೊಲೀಸರ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ರವರ , ಮಹಿಳಾ ಸಂಘಟನೆಗಳ ಹೆಸರಿನಲ್ಲಿ ಬೆದರಿಕೆ ಹಾಕಿರುವುದಲ್ಲದೇ ಇನ್ನಷ್ಟು ಹಣವನ್ನು ನೀಡದೇ ಇದ್ದರೆ ಸುದ್ದಿ ಮಾಧ್ಯಮಗಳಲ್ಲಿ ಫೋಟೋ ಮತ್ತು ವಿಡಿಯೋವನ್ನು ವೈರಲ್ ಮಾಡುವುದಾಗಿ ಬೆದರಿಕೆಯೊಡ್ಡಿದ್ದರು.

ಮೊದಲು ಸಣ್ಣ ಬಾಡಿಗೆ ಮನೆಯಲ್ಲಿದ್ದ ಆರೋಪಿಗಳು ಈ ಕೃತ್ಯವೆಸಗಿದ ನಂತರ ಫಿರ್ಯಾದಿದಾರರಿಂದ ಸುಲಿಗೆ ಮಾಡಿದ ಹಣದಲ್ಲಿ ರೂ . 10 ಲಕ್ಷ ಹಣವನ್ನು ನೀಡಿ ಫ್ಲಾಟ್ ವೊಂದನ್ನು ಲೀಸ್ ಗೆ ಪಡೆದು ಕೊಂಡಿರುವುದಲ್ಲದೇ , ಈ ಫ್ಲಾಟ್ ಗೆ ಸುಮಾರು 7 ಲಕ್ಷ ಮೌಲ್ಯದ ಮನೆ ಸಾಮಾಗ್ರಿಗಳನ್ನು ಖರೀದಿಸಿದ್ದರು. ಅಲ್ಲದೇ ಹೊಸ ದ್ವಿಚಕ್ರ ವಾಹನವೊಂದನ್ನು ಖರೀದಿಸಿರುವ ಬಗ್ಗೆ ತನಿಖೆಯಿಂದ ತಿಳಿದುಬಂದಿದೆ.

ಅರೋಪಿಗಳ ಪೈಕಿ ಭವ್ಯಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು , ಹೆಚ್ಚಿನ ತನಿಖೆಗಾಗಿ 5 ದಿನಗಳ ಪೊಲೀಸ್ ಕಸ್ಟಡಿಗೆ ಪಡೆದುಕೊಳ್ಳಲಾಗಿದೆ.

Leave a Comment

Your email address will not be published. Required fields are marked *