ಮಂಗಳೂರು: ಮಂಗಳೂರಿನ ಕಂಕನಾಡಿಯಲ್ಲಿರುವ ಫಾದರ್ ಮುಲ್ಲರ್ ಆಸ್ಪತ್ರೆಗೆ ಹೆರಿಗೆಗೆ ತೆರಳಿದ್ದ ತಾಯಿ-ಮಗು ಮೃತಪಟ್ಟ ಘಟನೆ ನಡೆದಿದೆ.
ವಿಟ್ಲದ ಸವಿತಾ ಎಂಬವರು ಹೆರಿಗೆಗೆ ಮಂಗಳೂರಿನ ಕಂಕನಾಡಿಯಲ್ಲಿರುವ ಫಾದರ್ ಮುಲ್ಲರ್ ಆಸ್ಪತ್ರೆಗೆ ಬಂದಿದ್ದರು. ಆದರೆ, ಆ ಸಂದರ್ಭದಲ್ಲಿ ಗರ್ಭಿಣಿ ಹೊಟ್ಟೆಯಲ್ಲಿರುವ ಮಗು ಸಾವನ್ನಪ್ಪಿದೆ ಎಂದು ವೈದ್ಯರು ಮನೆಯವರ ಗಮನಕ್ಕೆ ತಂದಿದ್ದರು, ಸಂಜೆಯ ವೇಳೆಗೆ ಗರ್ಭಿಣಿ ತಾಯಿ ಮೃತಪಟ್ಟಿದ್ದಾರೆ.
ಸವಿತಾ ಕಡೆಯವರು ಮಂಗಳೂರಿನ ಕಂಕನಾಡಿಯಲ್ಲಿರುವ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯ ನಡೆದಿದೆ, ವೈದ್ಯರು ಹೊಟ್ಟೆಯಲ್ಲಿದ್ದ ಮಗುವನ್ನು ತೆಗೆಯದೆ ಗರ್ಭಿಣಿ ಮೃತಪಟ್ಟಿದ್ದಾರೆ ಎಂದು ಸಂಬಂಧಿಕರು ಆರೋಪಿಸಿದ್ದಾರೆ.
ಘಟನೆಯ ಹಿನ್ನೆಲೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಶಶಿಕುಮಾರ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.