ನವದೆಹಲಿ : ದೇಶದಲ್ಲಿ ಶೇ. 45ರಷ್ಟು ಮ್ಯಾನೇಜ್‌ಮೆಂಟ್ ಮತ್ತು ಶೇ.48ರಷ್ಟು ಇಂಜಿನಿಯರಿಂಗ್ ವಿದ್ಯಾರ್ಥಿಗಳು ನಿರುದ್ಯೋಗಿಗಳಾಗಿದ್ದಾರೆ ಎಂದು NITI ಆಯೋಗದ ಉಪಾಧ್ಯಕ್ಷ ರಾಜೀವ್ ಕುಮಾರ್ ಹೇಳಿದ್ದಾರೆ.
ಗುರುವಾರ, ಇಂಡಿಯನ್ ಸ್ಕೂಲ್ ಆಫ್ ಬ್ಯುಸಿನೆಸ್ ಆಯೋಜಿಸಿದ್ದ ‘ಉನ್ನತ ಶಿಕ್ಷಣ ಸಂವಾದ’ವನ್ನು ಉದ್ದೇಶಿಸಿ ಮಾತನಾಡಿದ ಡಾ.ಕುಮಾರ್, ಉನ್ನತ ಶಿಕ್ಷಣದಲ್ಲಿ ನಿರ್ದಿಷ್ಟವಾಗಿ ಮ್ಯಾನೇಜ್‌ಮೆಂಟ್ ಕಾಲೇಜುಗಳಲ್ಲಿ ಗುಣಮಟ್ಟದ ಶಿಕ್ಷಣ ಸಾಧಿಸಲು ಒತ್ತು ನೀಡಬೇಕು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ದೇಶದಲ್ಲಿ ಉನ್ನತ ಶಿಕ್ಷಣದಲ್ಲಿ ಶಕ್ತಿ ಕಡಿಮೆಯಾಗುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಅವರು, ದೇಶದಲ್ಲಿ ಉನ್ನತ ಶಿಕ್ಷಣ ಕುಂಠಿತವಾಗಿದೆ. ಶಿಕ್ಷಣದ ಗುಣಮಟ್ಟವನ್ನು ಉತ್ತಮಗೊಳಿಸಲು ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದ್ದಾರೆ.
ಮ್ಯಾನೇಜ್‌ಮೆಂಟ್ ಕಾಲೇಜುಗಳು ಉದ್ಯಮದ ಅಗತ್ಯತೆಗಳನ್ನು ಪೂರೈಸಲು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್, ಮೆಷಿನ್ ಲರ್ನಿಂಗ್, ಡೀಪ್ ಲರ್ನಿಂಗ್, ರೋಬೋಟಿಕ್ಸ್ ಮುಂತಾದ ಉದ್ಯೋಗ ಆಧಾರಿತ ಕೋರ್ಸ್ ಗಳನ್ನು ಪ್ರಾರಂಭಿಸಬೇಕು ಸಲಹೆ ನೀಡಿದ್ದಾರೆ.
US UK, ಜಪಾನ್ ಮತ್ತು ಕೆಲವು ಯುರೋಪಿಯನ್ ರಾಷ್ಟ್ರಗಳ ಸಾಲಿನಲ್ಲಿ ಇರುವ ಕೋರ್ಸ್ ಗಳನ್ನು ಸಹ ಅಳವಡಿಸಿಕೊಳ್ಳಿ ಎಂದಿರುವ ಅವರು, ನಮ್ಮ ದೇಶದ ಶೈಕ್ಷಣಿಕ ನೀತಿಯನ್ನು ಸುಧಾರಿಸಬೇಕು. ಅಂದು ಮಾತ್ರ ನಾವು ಉತ್ತಮ ಪಲಿತಾಂಶ ನೀರಿಕ್ಷಿಸಲು ಸಾಧ್ಯ ಎಂದು ಹೇಳಿದ್ದಾರೆ.
ಸಂಶೋಧನೆ ಮತ್ತು ಅಭಿವೃದ್ಧಿಯ ಮೇಲೆ ಒತ್ತು ನೀಡಿದ ಡಾ.ಕುಮಾರ್, ಭಾರತವು ವಾರ್ಷಿಕವಾಗಿ ತನ್ನ ಬಜೆಟ್‌ನ 0.8 ಪ್ರತಿಶತವನ್ನು ಆರ್ & ಡಿಗೆ ಖರ್ಚು ಮಾಡುತ್ತದೆ. ಇದರ ಪರಿಣಾಮವಾಗಿ ದೇಶವು ಶಿಕ್ಷಣದಲ್ಲಿ ತುಂಬಾ ಹಿಂದುಳಿದಿದೆ. ದಕ್ಷಿಣ ಕೊರಿಯಾದಂತಹ ದೇಶಗಳು ತಮ್ಮ ಬಜೆಟ್ ನಲ್ಲಿ 4.5 ಪ್ರತಿಶತವನ್ನು ಖರ್ಚು ಮಾಡುತ್ತವೆ. ಈ ಕಾರಣಕ್ಕೆ ಉತ್ತಮ ಫಲಿತಾಂಶಗಳನ್ನು ನೀಡುತ್ತವೆ. ವಿದ್ಯಾರ್ಥಿಗಳ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ ಎಂದು ತಿಳಿಸಿದ್ದಾರೆ