Ad Widget .

ಸುಳ್ಯ : ಬಾಲಕಿಯನ್ನು ಕಾರಿನಲ್ಲಿ ಕರೆದುಕೊಂಡು ಹೋದ ಆರೋಪ|ಬಜರಂಗಿಗಳ ನಡುವೆ ಮಾರಾಮಾರಿ

ಸುಳ್ಯ: ಬಾಲಕಿಯೊಬ್ಬಳನ್ನು ಕಾರಿನಲ್ಲಿ ಕರೆದುಕೊಂಡು ಹೋದ ವಿಚಾರಕ್ಕೆ ಸಂಬಂಧಿಸಿದಂತೆ ಬಜರಂಗದಳದ ಕಾರ್ಯಕರ್ತರ ನಡುವೆ ಹೊಡೆದಾಟ ನಡೆದಿರುವ ಘಟನೆ ನಗರದ ಪೈಚಾರು ಬಳಿ ನಡೆದಿದೆ.

Ad Widget . Ad Widget .

ಘಟನೆಗೆ ಸಂಬಂಧಿಸಿ ರಕ್ಷಿತ್ ಎಂಬ ಯುವಕನ ಮೇಲೆ ಪೋಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ ಎಂದು ವರದಿಯಾಗಿದೆ.

Ad Widget . Ad Widget .

ಯುವಕನೊಬ್ಬ ಶಾಲಾ ಬಾಲಕಿಯೊಬ್ಬಳನ್ನು ಪುತ್ತೂರಿನಿಂದ ಆಕೆಯ ಮನೆಗೆ ಬಿಡಲೆಂದು ಕಾರಲ್ಲಿ ಕರೆದುಕೊಂಡು ಹೋಗಿದ್ದನು. ಇದನ್ನು ಆರೋಪಿಸಿ ಯುವಕನಿಗೆ ಹಲ್ಲೆ ನಡೆಸಿದರೆಂದೂ ಹೇಳಲಾಗಿದೆ.

ಇದಾದ ಬಳಿಕ ಎರಡೂ ಕಡೆಯವರು ಸುಳ್ಯ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ತೆರಳಿದ್ದಾರೆ. ಎರಡೂ ಕಡೆಯವರೂ ಭಜರಂಗದಳದಲ್ಲಿ ಗುರುತಿಸಿಕೊಂಡಿರುವುದರಿಂದ ಭಜರಂಗದಳದ ಮುಖ್ಯ ಪದಾಧಿಕಾರಿಗಳು ಮಧ್ಯೆ ಪ್ರವೇಶಿಸಿ ಪ್ರಕರಣವನ್ನು ತಿಳಿಗೊಳಿಸಲು ಪ್ರಯತ್ನಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Leave a Comment

Your email address will not be published. Required fields are marked *