Ad Widget .

ಸುಳ್ಯ: ತಂದೆಯಿಂದ ಮಗನಿಗೆ ಕತ್ತಿಯೇಟು| ಆಸ್ಪತ್ರೆಗೆ ದಾಖಲು

ಸುಳ್ಯ: ತಂದೆ ಮತ್ತು ಮಗನ ಮಧ್ಯೆ ಹೊಡೆದಾಟ ನಡೆದು ಮಗನಿಗೆ ಕತ್ತಿಯಿಂದ ಕಡಿದ ಘಟನೆ ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಗುಂಡ್ಯ ಎಂಬಲ್ಲಿ ನಡೆದಿದೆ.

Ad Widget . Ad Widget .

ಕತ್ತಿಯೇಟಿನಿಂದ ಯುವಕನ ಎದೆಗೆ ಗಂಭೀರವಾಗಿದ್ದು ಹಲ್ಲೆಗೊಳಗಾದ ಆತನನ್ನು ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಗುಂಡ್ಯ ನಿವಾಸಿ ಐತಪ್ಪ ನಾಯ್ಕ ಮತ್ತು ಅವರ ಮಗ ಜಯಪ್ರಕಾಶ್ ರವರ ಮಧ್ಯೆ ಮಾತಿನ ಚಕಮಕಿಯಾಗಿ ಹೊಡೆದಾಟ ನಡೆದಿದೆ ಎನ್ನಲಾಗಿದೆ.

Ad Widget . Ad Widget .

ತಂದೆಯೇ ಮಗನ ಎದೆಗೆ ಕತ್ತಿಯಿಂದ ಕಡಿದಿದ್ದು ಗಂಭೀರ ಗಾಯಗೊಂಡು ವಿಪರೀತ ರಕ್ತಸ್ರಾವಕ್ಕೊಳಗಾದ ಯುವಕನನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು.

ಆದರೆ ವಿಪರೀತ ರಕ್ತಸ್ರಾವವಾದ ಕಾರಣ ಹೆಚ್ಚಿನ ಚಿಕಿತ್ಸೆ ಗಾಗಿ ‌ವೈದ್ಯರ ಸಲಹೆ ‌ಮೇರೆಗೆ ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಗೆ ‌ದಾಖಲಿಸಿರುವುದಾಗಿ ತಿಳಿದು ಬಂದಿದೆ. ಘಟನೆಗೆ ಕಾರಣವೇನೆಂಬುದು ತಿಳಿದುಬಂದಿಲ್ಲ.

Leave a Comment

Your email address will not be published. Required fields are marked *