ರಾಜ್ಯದಲ್ಲಿ 750 ”ಗ್ರಾಮವನ್” ಕೇಂದ್ರಗಳಿಗೆ ಚಾಲನೆ| ನಾಗರಿಕ ಸೇವೆಗಳು ಇನ್ನು ಸರಳ

ಬೆಂಗಳೂರು: 73 ನೇ ಗಣರಾಜ್ಯೋತ್ಸವ ಅಂಗವಾಗಿ ಗ್ರಾಮ ಮಟ್ಟದಲ್ಲಿ ಎಲ್ಲ ನಾಗರಿಕ ಕೇಂದ್ರಿತ ಚಟುವಟಿಕೆಗಳ ಏಕಗವಾಕ್ಷಿ ನೆರವಿನ ಕೇಂದ್ರಗಳನ್ನು ಆರಂಭಿಸಲಾಗುವುದು.

Ad Widget ... ..

ರಾಜ್ಯದಲ್ಲಿ ಸರ್ಕಾರಿ ಸೇವೆಗಳಲ್ಲಿ ಮಹತ್ತರ ಕ್ರಾಂತಿ ಕೈಗೊಳ್ಳಲಾಗಿದ್ದು, ಮೊದಲ ಹಂತದಲ್ಲಿ 12 ಜಿಲ್ಲೆಗಳಲ್ಲಿ ಗ್ರಾಮ ಒನ್ ಸೇವೆಗೆ ಚಾಲನೆ ನೀಡಲಾಗುತ್ತದೆ.

Ad Widget

ಬೀದರ್, ಕೊಪ್ಪಳ, ಬಳ್ಳಾರಿ, ಬೆಳಗಾವಿ, ಹಾವೇರಿ, ವಿಜಯಪುರ, ದಾವಣಗೆರೆ, ಶಿವಮೊಗ್ಗ, ತುಮಕೂರು, ಚಿಕ್ಕಮಗಳೂರು, ಉಡುಪಿ, ಕೊಡಗು ಜಿಲ್ಲೆಗಳಲ್ಲಿ ಗ್ರಾಮ ಒನ್ ಸೇವಾ ಕೇಂದ್ರಗಳನ್ನು ತೆರೆಯಲಾಗುವುದು. ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಕೇಂದ್ರಗಳ ಮಾದರಿಯಲ್ಲಿ ಗ್ರಾಮ ಒನ್ ಕೇಂದ್ರಗಳು ಕಾರ್ಯನಿರ್ವಹಿಸಲಿವೆ.

ಬೆಳಗ್ಗೆ 8 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಕೇಂದ್ರಗಳು ಕಾರ್ಯನಿರ್ವಹಿಸಲಿದ್ದು, ಗ್ರಾಮಸ್ಥರು ತಮ್ಮ ಕೆಲಸ ಕಾರ್ಯಗಳಿಗಾಗಿ ಜಿಲ್ಲಾ ಮತ್ತು ತಾಲೂಕು ಕಚೇರಿಗಳಿಗೆ ಮಾಡುವ ಅವಶ್ಯಕತೆ ಇರುವುದಿಲ್ಲ. ಸೇವಾ ಸಿಂಧು ಕಾರ್ಯಕ್ರಮದ ಎಲ್ಲಾ 750 ಕ್ಕೂ ಅಧಿಕ ಸೇವೆಗಳನ್ನು ಗ್ರಾಮ ಒನ್ ಕೇಂದ್ರಗಳ ಮೂಲಕ ಒದಗಿಸಲಾಗುತ್ತದೆ.

Leave a Comment

Your email address will not be published. Required fields are marked *