Ad Widget .

ತಿಮಿಂಗಿಲ ವಾಂತಿ ಮಾರಾಟಕ್ಕೆ ಯತ್ನ| ಇಬ್ಬರನ್ನು ಬಂಧಿಸಿದ ಪೊಲೀಸರು

Ad Widget . Ad Widget .

ಸಮಗ್ರ ಕ್ರೈಂ ಬ್ಯೂರೋ: ಲಕ್ಷಾಂತರ ಮೌಲ್ಯದ ತಿಮಿಂಗಿಲ ವಾಂತಿಯನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ಚನ್ನಮ್ಮನ ಕೆರೆ ಅಚ್ಚುಕಟ್ಟು ಠಾಣೆ ಪೊಲೀಸರು ಬಂಧಿಸಿದ್ದಾರೆ. ಬನಶಂಕರಿ 2ನೇ ಹಂತದ ನಿವಾಸಿಗಳಾದ ಮೊಹಮ್ಮದ್‌ ರಿಯಾಜ್‌ ಅಹಮ್ಮದ್‌(58) ಮತ್ತು ಮೊಹಮ್ಮದ್‌ ಗೌಸ್‌ (51) ಬಂಧಿತ ಆರೋಪಿಗಳು. ಬಂಧಿತರಿಂದ ಸುಮಾರು 3.6 ಕೆಜಿ ತೂಕದ ಅಂಬರ್‌ಗ್ರೀಸ್‌ ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Ad Widget . Ad Widget .

ಆರೋಪಿಗಳು ಜ.26ರಂದು ಬನಶಂಕರಿ 3ನೇ ಹಂತದ ಬನಗಿರಿ ನಗರದ ವರಸಿದ್ಧಿ ವಿನಾಯಕ ದೇವಾಲಯ ಸಮೀಪದ ವಾಟರ್‌ ಟ್ಯಾಂಕ್‌ ಬಳಿ ಅಂಬರ್‌ ಗ್ರೀಸ್‌ ಮಾರಾಟಕ್ಕೆ ಯತ್ನಿಸುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಬಂಧಿಸಲಾಗಿದೆ. ಆರೋಪಿಗಳು ಹೊರ ರಾಜ್ಯಗಳಿಂದ ಅಂಬರ್‌ ಗ್ರೀಸ್‌ ಖರೀದಿಸಿದ್ದು, ನಗರದಲ್ಲಿ ಮಾರಾಟಕ್ಕೆ ಬಂದಿದ್ದಾಗಿ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾರೆ. ಇದರ ಹಿಂದೆ ವ್ಯವಸ್ಥಿತ ಜಾಲ ಕಾರ್ಯ ನಿರ್ವಹಿಸುತ್ತಿರುವ ಸಾಧ್ಯತೆಯಿದೆ. ಈ ಕುರಿತು ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.

Leave a Comment

Your email address will not be published. Required fields are marked *