ಸುಬ್ರಹ್ಮಣ್ಯ: ದೇವಸ್ಥಾನದ ಹುಂಡಿ ಎಣಿಕೆಯ ವೇಳೆ ಮಹಿಳೆಯಿಂದ ಹಣ ಕಳ್ಳತನ

Ad Widget ... ..

ಸುಬ್ರಹ್ಮಣ್ಯ: ಕುಕ್ಕೇ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಹುಂಡಿ ಎಣಿಕೆಯ ವೇಳೆ ಸಿಬ್ಬಂದಿ ಮಹಿಳೆಯೋರ್ವರು ಹಣ ಕಳ್ಳತನ ಮಾಡಿ ಸಿಕ್ಕಿಬಿದ್ದ ಘಟನೆ ಗುರುವಾರದಂದು ನಡೆದಿದೆ.

Ad Widget

ದೇವಸ್ಥಾನದ ಹುಂಡಿ ಎಣಿಕೆ ಮಾಡುತ್ತಿದ್ದ ವೇಳೆ ಬಾಲಕಿ ಎಂಬ ಮಹಿಳೆಯೋರ್ವರು ಹಣವನ್ನು ಕದ್ದು ಬಚ್ಚಿಟ್ಟಿದ್ದಾರೆ ಎನ್ನಲಾಗಿದೆ. ಇದನ್ನು ಗಮನಿಸಿದ ಸೆಕ್ಯುರಿಟಿ ಗಾರ್ಡ್ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಈ ಕುರಿತು ಕುಕ್ಕೇ ಶ್ರೀ ಕ್ಷೇತ್ರದ ಕಾರ್ಯ ನಿರ್ವಹಣಾಧಿಕಾರಿ ನೀಡಿದ ದೂರಿನಂತೆ ಸುಬ್ರಹ್ಮಣ್ಯ ಪೊಲೀಸರು ಮಹಿಳೆಯನ್ನು ವಶಕ್ಕೆ ಪಡೆದು, ಮಂಗಳೂರಿನ ರಿಮಾಂಡ್ ಹೋಂನಲ್ಲಿ ಇರಿಸಿದ್ದು, ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ ಎಂದು ತಿಳಿದುಬಂದಿದೆ.

Leave a Comment

Your email address will not be published. Required fields are marked *