Ad Widget .

ಮಳೆ ಬರುವ ಹಾಗಿದೆ…| ಹವಾಮಾನ ಇಲಾಖೆಯಿಂದ ಎಚ್ಚರಿಕೆ ಸಂದೇಶ|

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಸಮಗ್ರ ನ್ಯೂಸ್ ಡೆಸ್ಕ್: ರಾಜ್ಯದಲ್ಲಿ ಚಳಿಯ ತೀವ್ರತೆ ಕೊಂಚ ಕಡಿಮೆಯಾಗಿದ್ದು ಮತ್ತೆ ಮಳೆಯಾಗುವ ಲಕ್ಷಣಗಳು ಕಂಡು ಬರುತ್ತಿದೆ. ಈ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕರ್ನಾಟಕದಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆ ಇದೆ ಎಂದಿದೆ. ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಲಘು ಮಳೆಯಾಗಲಿದೆ ಎಂದು ಇಲಾಖೆ ಎಚ್ಚರಿಕೆ ನೀಡಿದೆ.

Ad Widget . Ad Widget . Ad Widget .

ಚಳಿಗಾಲದಲ್ಲಿ ಮಳೆಯಾಗುವುದು ಸಹಜ ಮತ್ತು ಹವಾಮಾನದಲ್ಲಿ ಬದಲಾವಣೆಯಾಗುತ್ತಿರುವುದರಿಂದ ಮುಂದಿನ ತಿಂಗಳ ಮಧ್ಯ ಭಾಗದವರೆಗೂ ಮಳೆ, ಚಳಿಯ ಕಣ್ಣಾಮುಚ್ಚಾಲೆ ಆಟ ಮುಂದುವರೆಯಲಿದೆ. ಇಂದು ದಕ್ಷಿಣ ಕರ್ನಾಟಕ ಮತ್ತು ರಾಯಲಸೀಮಾದಲ್ಲಿ ಲಘು ಮಳೆಯ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.

ಹವಾಮಾನ ಬದಲಾವಣೆಯು ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಎಂದು ಅಧಿಕಾರಿ ಜನರನ್ನು ಎಚ್ಚರಿಸಿದ್ದಾರೆ. ಮಳೆಯು ಒಂದು ಅಥವಾ ಎರಡು ದಿನಗಳವರೆಗೆ ಇರುತ್ತದೆಯಾದರೂ, ದೀರ್ಘಕಾಲದ ಮಾನ್ಸೂನ್ ಮತ್ತು ಹವಾಮಾನ ಪರಿಸ್ಥಿತಿಗಳಲ್ಲಿನ ಬದಲಾವಣೆಯು ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಕೊರೊನಾ ಮೂರನೇ ಅಲೆಯ ಹಿನ್ನೆಲೆಯಲ್ಲಿ ನಾಗರಿಕರು ಎಚ್ಚರಿಕೆ ವಹಿಸಬೇಕು ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

Leave a Comment

Your email address will not be published. Required fields are marked *