Ad Widget .

ಮಹೀಂದ್ರಾ ಶೋ ರೂಂನಲ್ಲಿ ಅವಮಾನಕ್ಕೊಳಗಾದ ರೈತನ ಮನೆಗೆ ಬಂತು ಹೊಸ ಗೂಡ್ಸ್ ಜೀಪ್ |ಶುಭಕೋರಿದ ಆನಂದ್ ಮಹೀಂದ್ರ

Ad Widget . Ad Widget .

ತುಮಕೂರು: ಮಹೀಂದ್ರಾ ಶೋ ರೂಂನಲ್ಲಿ ರೈತನಿಗೆ ಅಪಮಾನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಹೊಸ ಬೆಳವಣಿಗೆಯೊಂದು ನಡೆದಿದೆ. ಇದೀಗ ರೈತನ ಮನೆಗೆ ಮಹೀಂದ್ರ ಗೂಡ್ಸ್ ವಾಹನ ಆಗಮಿಸಿದೆ. ಜ.28 ರೈತ ಕೆಂಪೇಗೌಡಗೆ ಕಂಪನಿ ವಾಹನ ಡೆಲಿವರಿ ಮಾಡಿದೆ. ಅಷ್ಟೇ ಅಲ್ಲದೆ, ಈ ಕುರಿತು ಸ್ವತಃ ಆನಂದ್ ಮಹೀಂದ್ರ ಟ್ವೀಟ್​ ಮಾಡಿದ್ದಾರೆ. ರೈತ ಕೆಂಪೇಗೌಡರಿಂದ ಮಹಿಂದ್ರ ಗೂಡ್ಸ್ ವಾಹನ ಖರೀದಿ ಮಾಡಲಾಗಿದೆ. ಈ ಬಗ್ಗೆ ರೈತ ಕೆಂಪೇಗೌಡರ ಸಂತಸ ಹಂಚಿಕೊಂಡಿದ್ದಾರೆ.

Ad Widget . Ad Widget .

9.40 ಲಕ್ಷ ರೂಪಾಯಿಗೆ ಕೆಂಪೇಗೌಡ ವಾಹನ ಖರೀದಿಸಿದ್ದಾರೆ. 2 ಲಕ್ಷ ಮುಂಗಡ ಹಣ ಪಾವತಿಸಿ ಕೆಂಪೇಗೌಡ ವಾಹನ ಖರೀದಿ ಮಾಡಿದ್ದಾರೆ. ಉಳಿದ ಹಣ ಲೋನ್ ಮೂಲಕ ಪಾವತಿಸಲಿದ್ದಾರೆ ಎಂದು ತಿಳಿಸಲಾಗಿದೆ.

ಕಾರು ಖರೀದಿಗೆ ಬಂದ ಯುವ ರೈತರಿಗೆ ಅವಮಾನ ಮಾಡಿದ ಘಟನೆ ತುಮಕೂರಿನ ರಾಮನಪಾಳ್ಯದಲ್ಲಿ ನಡೆದಿತ್ತು. ಬೊಲೆರೋ ಗೂಡ್ಸ್ ವಾಹನ ಖರೀದಿಸಲು ಶೋರೂಂಗೆ ಬಂದಿದ್ದ ತಾಲೂಕಿನ ಹೆಬ್ಬೂರು ಹೋಬಳಿಯ ರಾಮನಪಾಳ್ಯ ನಿವಾಸಿ ಯುವರೈತ ಕೆಂಪೇಗೌಡಗೆ ಅವಮಾನ ಮಾಡಲಾಗಿತ್ತು. ಯುವಕನ ವೇಷಭೂಷಣ ನೋಡಿ ಶೋರೂಂನಲ್ಲಿ ಅವಮಾನ ಮಾಡಿದ್ದಾರೆ ಎಂದು ತಿಳಿದುಬಂದಿತ್ತು.

ಹತ್ತು ರೂಪಾಯಿ ದುಡ್ಡು ಕೊಡುವ ಯೋಗ್ಯತೆ ಇಲ್ಲ ಎಂದು ಸೇಲ್ಸ್ ಏಜೆಂಟ್​ರಿಂದ ಕೆಂಪೇಗೌಡಗೆ ಅವಮಾನ ಆಗಿತ್ತು. ಅವಮಾನಿಸಿದ್ದನ್ನೇ ಚಾಲೆಂಜ್ ಆಗಿ ಸ್ವೀಕರಿಸಿದ ಕೆಂಪೇಗೌಡ ಒಂದು ಗಂಟೆಯಲ್ಲಿ ಹತ್ತು ಲಕ್ಷ ರೂಪಾಯಿ ದುಡ್ಡು ತಂದು ವಾಹನ ನೀಡುವಂತೆ ಪಟ್ಟು ಹಿಡಿದಿದ್ದರು. ಆದರೆ ಶೋರೂಂ ಸೇಲ್ಸ್ ಏಜೆಂಟ್ ಮಾತ್ರ ವಾಹನ ನೀಡದೇ, ಎರಡು ಮೂರು ದಿನದಲ್ಲಿ ವಾಹನ ನೀಡುತ್ತೇವೆ ಎಂದು ಹೇಳಿದ್ದರು.

ಕಾರ್ ಶೋರೂಂನಲ್ಲಿ ಹೇಳಿದ್ದೇನು?

ನಮ್ಮನ್ನು ನೋಡಿ ಕೇವಲವಾಗಿ ಮಾತನಾಡಿದರು. 10 ರೂಪಾಯಿ ತರಲು ಯೋಗ್ಯತೆ ಇಲ್ಲ ಎಂದು ಅವಮಾನಿಸಿದರು. ಆಗ ನಾವು ಅರ್ಧಗಂಟೆಯಲ್ಲಿ 10 ಲಕ್ಷ ಹೊಂದಿಸಿ ತಂದು ಕೊಟ್ಟಿದ್ದೀವಿ. ಕಳೆದ ಜನವರಿ 4 ರಂದು ಶೋರೂಮ್​​ಗೆ ಹೋಗಿ ಗೂಡ್ಸ್ ವಾಹನ ತರಲು ಹೇಳಿಬರಲಾಗಿತ್ತು. ಅದರಂತೆ‌ ಮೊನ್ನೆ ಎರಡು ಲಕ್ಷ ಹಣ ಕಟ್ಟಿ ವಾಹನ ತರಲು ಶೋರೂಮ್​ಗೆ ಹೋಗಿದ್ವಿ. ಎರಡು ಲಕ್ಷ ಹಣ ಕಟ್ತೀವಿ. ವಾಹನ ಕೊಡಿ ಎಂದು ಕೇಳಿದ್ದೀವಿ. ಆಗ ಶೋರೂಮ್ ಸಿಬ್ಬಂದಿ ಏಳು ಜನರು ಕೂಡ ‘ನೀವು ತಮಾಷೆ ಮಾಡಲು ಬಂದಿದ್ದೀರಾ. ವಾಹನ ತಗೊಂಡು ಹೋಗೊದಕ್ಕೆ ಬಂದಿಲ್ಲ. ನಿಮ್ಮ ಯೋಗ್ಯತೆಗೆ 10 ರೂಪಾಯಿ ಇಲ್ಲ, ಸುಮ್ಮನೇ ಬಂದಿದ್ದೀರಾ’ ಎಂದು ಅವಮಾನ ಮಾಡಿದ್ದರು ಎಂದು ಹೇಳಲಾಗಿತ್ತು.

ನಾವು 25 ನಿಮಿಷ ಸಮಯ ಕೇಳಿದ್ದೀವಿ. ಆಗಲೂ ಅವರು ಕಿಚಾಯಿಸಿದ್ದಾರೆ. ನಾವು ಹೇಳಿದ ಸಮಯಕ್ಕೆ ಹಣ ತಂದು ಕೊಟ್ಟಿದ್ದೀವಿ. ಆದರೆ ಅವರು ವಾಹನ ನೀಡಲಿಲ್ಲ. ನಾವು ರೈತರು ಅಂತಾ ಅವಮಾನ ಮಾಡಿದ್ದಾರೆ ಎಂದು ಬೇಸರ ಹೊರಹಾಕಿದ್ದಾರೆ. ಬೊಲೆರೋ ವಾಹನ ತರಲು ಹೋಗಿದ್ದ ಕೆಂಪೇಗೌಡ ಹಾಗೂ ಮಾವ ರಾಮಾಂಜನೇಯ ಈ ಬಗ್ಗೆ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದರು.

Leave a Comment

Your email address will not be published. Required fields are marked *