Ad Widget .

ಬೆಂಗಳೂರು: ಪ್ರತಿಭಟನೆಯಲ್ಲಿ ತೊಡಗಿದ್ದ ಎಬಿವಿಪಿ‌ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್

Ad Widget . Ad Widget .

ಸಮಗ್ರ ನ್ಯೂಸ್ ಡೆಸ್ಕ್ : ವಿದ್ಯಾರ್ಥಿ ವೇತನ, ಹಾಸ್ಟೆಲ್, ಮೌಲ್ಯಮಾಪನ ಸೇರಿದಂತೆ ಹಲವು ಸಮಸ್ಯೆಗಳನ್ನು ಬಗೆಹರಿಸಬೇಕೆಂದು ಎಬಿವಿಪಿ ನಡೆಸುತ್ತಿದ್ದ ಪ್ರತಿಭಟನೆ ಸಂದರ್ಭದಲ್ಲಿ ಲಾಠಿ ಚಾರ್ಜ್ ನಡೆದಿದ್ದು, ಹಲವು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ‌

Ad Widget . Ad Widget .

ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ವಿದ್ಯಾರ್ಥಿಗಳು ವಿವಿಗೆ ಮುತ್ತಿಗೆ ಹಾಕಲು ಮುಂದಾಗಿದ್ದಾರೆ. ಈ ಸಂದರ್ಭದಲ್ಲಿಯೇ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ.

ಅಲ್ಲದೇ, ಪ್ರತಿಭಟನೆ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮಧ್ಯೆಯೂ ಜಗಳ ನಡೆದಿದ್ದು, ಇಲ್ಲಿಯ ವಿಶ್ವವಿದ್ಯಾಲಯದಲ್ಲಿ ಎಬಿವಿಪಿ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ವಿವಿ ಸಂಶೋಧನಾ ವಿದ್ಯಾರ್ಥಿಗಳ ನಡುವೆ ಜಗಳ ಆರಂಭವಾಗಿದೆ.

ರಾಯಚೂರಿನಲ್ಲಿ ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ ವಿಷಯ, ಮೌಲ್ಯಮಾಪನ, ಹಾಸ್ಟೆಲ್ ಸಮಸ್ಯೆ, ಶಿಷ್ಯವೇತನ ಸೇರಿದಂತೆ ಹಲವು ವಿಷಯಗಳನ್ನು ಮುಂದಿಟ್ಟುಕೊಂಡು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು. ಈ ಸಂದರ್ಭದಲ್ಲಿ ಸಂಶೋಧನಾ ವಿದ್ಯಾರ್ಥಿಗಳಿಗೆ ಪ್ರತಿಭಟನೆಗೆ ಸಹಕರಿಸುವಂತೆ ಮನವಿ ಮಾಡಿದ್ದಾರೆ. ಈ ವಿಷಯವಾಗಿ ಎರಡು ಗುಂಪುಗಳ ನಡುವೆ ಜಗಳ ನಡೆದಿದೆ. ಸಂಶೋಧನಾ ವಿದ್ಯಾರ್ಥಿಗಳು, ಎಬಿವಿಪಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಮುತ್ತಿಗೆ ಹಾಕಲು ಪ್ರಯತ್ನಿಸಿದಾಗ ಪೊಲೀಸರು ಕೂಡ ಲಾಠಿಚಾರ್ಜ್ ನಡೆಸಿದ್ದಾರೆ. ಹೀಗಾಗಿ ಹಲವು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

Leave a Comment

Your email address will not be published. Required fields are marked *