Ad Widget .

ಬೆಳ್ತಂಗಡಿ: ಮಹಿಳಾ ಅರಣ್ಯಾಧಿಕಾರಿ ಸಂಧ್ಯಾ ವರ್ಗಾವಣೆಗೆ ತಡೆ

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಸಮಗ್ರ ನ್ಯೂಸ್ ಡೆಸ್ಕ್: ಉಡುಪಿ ವಲಯದ ಅರಣ್ಯ ಸಂಚಾರಿ ದಳದ ಮಹಿಳಾ ಅಧಿಕಾರಿ ಸಂಧ್ಯಾ ಸಚಿನ್ ರನ್ನು ಬೀದರ್‌ಗೆ ವರ್ಗಾವಣೆ ಮಾಡುವಂತೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ ಎಂಬ ಆರೋಪ ಕೇಳಿ ಬಂದ ಬೆನ್ನಲ್ಲೇ ಇದೀಗ ಅವರನ್ನು ಪ್ರಸ್ತುತ ಇರುವ ಸ್ಥಳದಲ್ಲೇ ಕರ್ತವ್ಯದಲ್ಲಿ ಮುಂದುವರೆಯುವಂತೆ ಹಿರಿಯ ಅರಣ್ಯ ಅಧಿಕಾರಿಗಳು ಮೌಖಿಕವಾಗಿ ತಿಳಿಸಿದ್ದು, ಸರ್ಕಾರದಿಂದ ಅಧಿಕೃತವಾದ ಯಾವುದೇ ಆದೇಶ ಬಂದಿಲ್ಲ ಎಂದು ತಿಳಿದು ಬಂದಿದೆ.

Ad Widget . Ad Widget . Ad Widget .

ಮಹಿಳಾ ಅರಣ್ಯಾಧಿಕಾರಿ ಸಂಧ್ಯಾ ಸಚಿನ್ ಅವರನ್ನು ಬೀದರ್ ಜಿಲ್ಲೆಗೆ ವರ್ಗಾವಣೆ ಮಾಡುವಂತೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ ಎನ್ನಲಾಗಿದ್ದ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ಬಗ್ಗೆ ಕೆಲವು ಸಂಘಟನೆಗಳೂ ಕೂಡ ಆಕ್ರೋಶ ವ್ಯಕ್ತಪಡಿಸಿದ್ದವು.

ಬೆಳ್ತಂಗಡಿಯ ಅಕ್ರಮ ಮರ ಸಾಗಾಟಗಾರರ ಮರಮಟ್ಟು, ವಾಹನ ವಶಪಡಿಸಿಕೊಂಡ ಕಾರಣ ಶಾಸಕರು ಕೋಪಗೊಂಡು ನನ್ನಲ್ಲಿ ವೈಯಕ್ತಿಕ ದ್ವೇಷ ಹಗೆತನ ಸಾಧಿಸಿದ್ದಾರೆ ಎಂದು ಸಂಧ್ಯಾ ಸಚಿನ್ ಆರೋಪಿದ್ದರು.

Leave a Comment

Your email address will not be published. Required fields are marked *