Ad Widget .

ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್| ‘ಪೂರ್ಣ ಕ್ಯಾರಿ ಓವರ್’ಗೆ ಅನುಮತಿ

Ad Widget . Ad Widget .

ಸಮಗ್ರ ನ್ಯೂಸ್ ಡೆಸ್ಕ್: ಕೊರೋನಾ ಸೋಂಕಿನಿಂದಾಗಿ 2021-22ನೇ ಸಾಲಿಗೆ ಅನ್ವಯವಾಗುವಂತೆ ಡಿಪ್ಲೊಮಾ ವಿದ್ಯಾರ್ಥಿಗಳಿಗೆ `ಪೂರ್ಣ ಕ್ಯಾರಿ ಓವರ್’ಗೆ ಅನುಮತಿ ನೀಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ.

Ad Widget . Ad Widget .

ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವ ಅವರು, ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಗರಿಷ್ಠ 4 ವಿಷಯಗಳಿಗೆ ಮಾತ್ರ ಕ್ಯಾರಿ ಓವರ್ ಕೊಡುವ ಪದ್ಧತಿ ಇದೆ. ಆದರೆ, ಕೊರೋನಾ ಸೋಂಕು ವ್ಯಾಪಕವಾಗಿ ಹಬ್ಬಿದ್ದರಿಂದ ವಿದ್ಯಾರ್ಥಿಗಳಿಗೆ ಅನಾನುಕೂಲವಾಗಿದೆ. ಹೀಗಾಗಿ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪ್ರಸ್ತಕ ಶೈಕ್ಷಣಿಕ ವರ್ಷಕ್ಕೆಪೂರ್ಣ ಕ್ಯಾರಿ ಓವರ್’ಗೆ ಅವಕಾಶ ಕೊಡಲಾಗಿದೆ. ಈ ಸಂಬಂಧ ಉನ್ನತ ಶಿಕ್ಷಣ ಇಲಾಖೆಯಿಂದ ಆದೇಶ ಹೊರಡಿಸಲಾಗಿದೆ’ ಎಂದು ಹೇಳಿದ್ದಾರೆ.

Leave a Comment

Your email address will not be published. Required fields are marked *