ಮಂಗಳೂರು: ಬಸ್ ಚಾಲಕನಿಂದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ

Ad Widget ... ..

ಸಮಗ್ರ ನ್ಯೂಸ್ ಡೆಸ್ಕ್: ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.

Ad Widget

ಘಟನೆಗೆ ಸಂಬಂಧಿಸಿ ಬಸ್ ಚಾಲಕನೊಬ್ಬನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

ಬಾಗಲಕೋಟೆ ಮೂಲದ ದಯಾನಂದ(32) ಎಲ ಬಂಧಿತ ಆರೋಪಿ. ನಗರದಲ್ಲಿ ಬಸ್ ಚಾಲಕನಾಗಿ ಕೆಲಸ ಮಾಡುತ್ತಿದ್ದ ದಯಾನಂದ 13 ವರ್ಷದ ಬಾಲಕಿಯನ್ನು ಪುಸಲಾಯಿಸಿ ನಿರ್ಜನ‌ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.

ಈ ಬಗ್ಗೆ ಬಾಲಕಿಯ ಪೋಷಕರು ಪಾಂಡೇಶ್ವರ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು. ಪೋಕ್ಸೊ ಪ್ರಕರಣದಡಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

Leave a Comment

Your email address will not be published. Required fields are marked *