ಸಮಗ್ರ ನ್ಯೂಸ್ ಡೆಸ್ಕ್: ಇಲ್ಲಿನ ಸರ್ಕಾರಿ ಮಹಿಳಾ ಕಾಲೇಜು ಹಿಜಾಬ್ ವಿವಾದಕ್ಕೆ ಸಂಬಂಧಿಸಿ ಉಡುಪಿ ಶಾಸಕ ರಘುಪತಿ ಭಟ್ ನೇತೃತ್ವದಲ್ಲಿ ಕಾಲೇಜಿನಲ್ಲಿ ಸಭೆ ನಡೆಸಲಾಗಿದೆ.
ಬ್ಯಾರಿ ಸಾಹಿತ್ಯ ಅಕಾಡೆಮಿ ಸದಸ್ಯರು ಕಾಲೇಜಿನ ಆಡಳಿತ ಮಂಡಳಿ, ಡಿಡಿಪಿಯು ಸಭೆಯಲ್ಲಿ ಭಾಗಿ ಆಗಿದ್ದಾರೆ. ಒಂದೂವರೆ ತಿಂಗಳುಗಳ ಕಾಲ ಈ ವಿವಾದ ನಡೆಯಿತು. ಹಿಜಾಬ್ ಧರಿಸದೆ ಕಾಲೇಜಿಗೆ ಬರಲು ನಾಳೆ ಒಂದು ದಿನ ಅವಕಾಶ ಇದೆ. ಕಾಲೇಜಿಗೆ ಬರದಿದ್ದರೆ ಆನ್ಲೈನ್ ಕ್ಲಾಸ್ ಅವಕಾಶ ಮಾಡಲಾಗಿದೆ. ಇನ್ನು ವಿದ್ಯಾರ್ಥಿಗಳು ಹೆಸರಿಗಾಗಿ ಹಠ ಮಾಡುವುದು ಸರಿಯಲ್ಲ. ಹಿಜಾಬ್ಗೆ ನಮ್ಮ ವಿರೋಧ ಇಲ್ಲ ಅದು ಇಸ್ಲಾಂನ ಪದ್ಧತಿ. ಶರಿಯತ್ ಆಧಾರಿತ ರಾಷ್ಟ್ರ ಬೇರೆ, ಪ್ರಜಾಪ್ರಭುತ್ವ ರಾಷ್ಟ್ರ ಬೇರೆ. ಭಾರತದಲ್ಲಿ ಸರ್ಕಾರದ ಆದೇಶ ಪಾಲಿಸಬೇಕು ಎಂದು ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ ಹೇಳಿಕೆ ನೀಡಿದ್ದಾರೆ.
ನಾಳೆಯ ಒಳಗೆ ತೀರ್ಮಾನಕ್ಕೆ ಬರುವುದಾಗಿ ಮೂವರು ವಿದ್ಯಾರ್ಥಿನಿಯರು ಒಪ್ಪಿಕೊಂಡಿದ್ದಾರೆ. ಓರ್ವ ವಿದ್ಯಾರ್ಥಿನಿ ಹಿಜಾಬ್ಗೆ ಪಟ್ಟು ಹಿಡಿದು ಅಭಿಪ್ರಾಯ ಹೇಳಿದ್ದಾಳೆ ಎಂದು ಉಡುಪಿಯಲ್ಲಿ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ ತಿಳಿಸಿದ್ದಾರೆ.
ಐವರು ಹಿಜಾಬ್ ಹೋರಾಟಗಾರ್ತಿಯರ ಪೈಕಿ ನಾಲ್ವರು ಸಭೆಯಲ್ಲಿ ಭಾಗಿಯಾಗಿದ್ದಾರೆ. ಈ ಹಂತದಲ್ಲಿ ಹಿಜಾಬ್ಗೆ ಅನುಮತಿ ಕೊಡಲು ಸಾಧ್ಯವಿಲ್ಲ. ಸರಕಾರ, ಸಮಿತಿ ತೀರ್ಮಾನ ಮಾಡಿದಂತೆ ಸಮವಸ್ತ್ರದಲ್ಲಿ ಕಾಲೇಜಿಗೆ ಬರಬೇಕು. ಎಲ್ಲಾ ವಿಚಾರಗಳನ್ನು ಪೋಷಕರಿಗೆ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಲಾಗಿದೆ. ತರಗತಿಯಲ್ಲಿ ಹಿಜಾಬ್ ಧರಿಸಿ ಪಾಠ ಕೇಳುವ ಅವಕಾಶ ಇಲ್ಲ. ಮನೆಯ ಪುರುಷರ ಜೊತೆ ಮಾತನಾಡಿ ತೀರ್ಮಾನ ಎಂದು ಪೋಷಕರು ಹೇಳಿದ್ದಾರೆ. ಹಿಜಾಬ್ ತೆಗೆದು ಕ್ಲಾಸಿಗೆ ಬರುವುದಾದರೆ ನಾಳೆಯಿಂದ ಬನ್ನಿ. ನಾಳೆಯಿಂದ ಯಾವುದೇ ಕಾಲೇಜು ಆವರಣದಲ್ಲಿ ಗೊಂದಲ ನಿರ್ಮಾಣಕ್ಕೆ ಅವಕಾಶವಿಲ್ಲ. ಮಾಧ್ಯಮ, ಸಂಘಸಂಸ್ಥೆ, ಸಂಘಟನೆಗೆ ಪ್ರವೇಶ ಇಲ್ಲ ಎಂದು ತಿಳಿಸಲಾಗಿದೆ.
ಎರಡು ತಿಂಗಳಲ್ಲಿ ಪರೀಕ್ಷೆಗಳು ಆರಂಭವಾಗಲಿದೆ. ಕಾಲೇಜಿನ ಬೇರೆ ಮಕ್ಕಳಿಂದ ಪೋಷಕರಿಂದ ದೂರುಗಳು ಬಂದಿವೆ. ಮನವಿ ಕೊಡುವುದಿದ್ದರೆ ಡಿಸಿಗೆ ಕೊಡಿ ಕಾಲೇಜಿಗೆ ಯಾರೂ ಬರುವಂತಿಲ್ಲ. ಶಿಸ್ತು ಪಾಲಿಸುವವರು ಕಾಲೇಜಿಗೆ ಬರಬಹುದು, ಗೊಂದಲಕ್ಕೆ ಅವಕಾಶ ಇಲ್ಲ ಎಂದು ಉಡುಪಿ ಶಾಸಕ ರಘುಪತಿ ಭಟ್ ಭಟ್ ಹೇಳಿಕೆ ನೀಡಿದ್ದಾರೆ.