January 2022

ಬ್ರಿಟನ್ ಪ್ರಧಾನಿ ಸ್ಥಾನಕ್ಕೆ ಭಾರತೀಯ? ರಿಷಿ ಸುನಕ್ ಹೆಸರು ಮುಂಚೂಣಿಯಲ್ಲಿ..!

ಇಂಗ್ಲೆಂಡ್: ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರಿಗೆ ‘ಪಾರ್ಟಿಗೇಟ್’ ತೊಂದರೆ ಹೆಚ್ಚಾಗುತ್ತಿದ್ದಂತೆ ಅವರದೇ ಕನ್ಸರ್ವೇಟಿವ್ ಪಕ್ಷದ ಸದಸ್ಯರು ಬ್ರಿಟಿಷ್ ಪ್ರಧಾನಿ ಸ್ಥಾನದಿಂದ ಕೆಳಗಿಳಿಯುವಂತೆ ಒತ್ತಾಯಿಸುತ್ತಿದ್ದಾರೆ. ಅವರ ಸ್ಥಾನಕ್ಕೆ ಭಾರತೀಯ ಮೂಲದ ಚಾನ್ಸೆಲರ್ ರಿಷಿ ಸುನಕ್ ಅವರ ಹೆಸರು ಮುಂಚೂಣಿಯಲ್ಲಿದೆ. ತಾಯಿ ಮತ್ತು ರಾಷ್ಟ್ರೀಯ ಆರೋಗ್ಯ ಸೇವೆ(NHS) ಜನರಲ್ ಪ್ರಾಕ್ಟೀಷನರ್(GP) ತಂದೆಯ UK-ಸಂಜಾತ ಮಗ, ಆಕ್ಸ್‌ ಫರ್ಡ್ ವಿಶ್ವವಿದ್ಯಾಲಯ ಮತ್ತು ಸ್ಟ್ಯಾನ್‌ಫೋರ್ಡ್ ಪದವೀಧರರಾಗಿರುವ ಅವರು ಇನ್ಫೋಸಿಸ್ ಸಹ-ಸಂಸ್ಥಾಪಕ ನಾರಾಯಣಮೂರ್ತಿಯವರ ಪುತ್ರಿ ಅಕ್ಷತಾ ಮೂರ್ತಿ ಅವರನ್ನು ವಿವಾಹವಾಗಿದ್ದಾರೆ. ದಂಪತಿಗೆ ಇಬ್ಬರು […]

ಬ್ರಿಟನ್ ಪ್ರಧಾನಿ ಸ್ಥಾನಕ್ಕೆ ಭಾರತೀಯ? ರಿಷಿ ಸುನಕ್ ಹೆಸರು ಮುಂಚೂಣಿಯಲ್ಲಿ..! Read More »

ಮಂಗಳೂರು: ಕುಖ್ಯಾತ ರೌಡಿ ಶೀಟರ್ ಗಳ ಬಂಧಿಸಿದ ಪೊಲೀಸರು

ಮಂಗಳೂರು, ಜ.14. ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಕೊಲೆ, ಕೊಲೆಯತ್ನ, ಅತ್ಯಾಚಾರ ಹಾಗೂ ದರೋಡೆ ಪ್ರಕರಣಗಳಲ್ಲಿ ಭಾಗಿಯಾಗಿ 2 ತಿಂಗಳ ಹಿಂದೆ ಜೈಲಿನಿಂದ ಜಾಮೀನಿನ ಮೇರೆಗೆ ಬಿಡುಗಡೆಗೊಂಡಿದ್ದ ಆಕಾಶ ಭವನ ಶರಣ್ ಸಹಿತ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ರೋಹಿದಾಸ್ ಯಾನೆ ಶರಣ್ ಆಕಾಶಭವನ (38), ಅನಿಲ್ ಕುಮಾರ್ ಸಾಲ್ಯಾನ್ ಯಾನೆ ಅನಿಲ್ ಪಂಪ್ ವೆಲ್ (40), ಸೈನಾಲ್ ಡಿ ಸೋಜಾ (22), ಪ್ರಸಾದ್ (39) ಹಾಗೂ ಚೇತನ್

ಮಂಗಳೂರು: ಕುಖ್ಯಾತ ರೌಡಿ ಶೀಟರ್ ಗಳ ಬಂಧಿಸಿದ ಪೊಲೀಸರು Read More »

ಫೆ.1ರಂದು ಕೇಂದ್ರ ಬಜೆಟ್ ಮಂಡನೆ| ಜ.31ರಿಂದ ಸಂಸತ್ ಬಜೆಟ್ ಅಧಿವೇಶನ ಪ್ರಾರಂಭ|

ನವದೆಹಲಿ: ಈ ಬಾರಿಯ ಕೇಂದ್ರ ಹಣಕಾಸು ಬಜೆಟ್ ಮಂಡನೆಗೆ ದಿನಾಂಕ ನಿಗದಿ ಪಡಿಸಲಾಗಿದೆ. ಜನವರಿ 31ರಿಂದ ಸಂಸತ್ ಬಜೆಟ್ ಅಧಿವೇಶನ ಆರಂಭಗೊಳ್ಳಲಿದೆ. ಫೆಬ್ರವರಿ 1ರಂದು ಕೇಂದ್ರ ಬಜೆಟ್ ಸಂಸತ್ ನಲ್ಲಿ ಮಂಡನೆಯಾಗಲಿದೆ. ಈ ಕುರಿತಂತೆ ಕೇಂದ್ರ ಸರ್ಕಾರ ಮಾಹಿತಿ ನೀಡಿದ್ದು, ಈ ವರ್ಷದ ಸಂಸತ್ ಬಜೆಟ್ ಅಧಿವೇಶನವು ಜನವರಿ 31ರಂದು ಆರಂಭಗೊಳ್ಳಲಿದೆ. ಬಜೆಟ್ ಅಧಿವೇಶನದ ಮೊದಲ ದಿನ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಸದನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ತಿಳಿಸಿದೆ. ಫೆಬ್ರವರಿ 1ರಂದು ಕೇಂದ್ರ ಬಜೆಟ್ ಸಂಸತ್

ಫೆ.1ರಂದು ಕೇಂದ್ರ ಬಜೆಟ್ ಮಂಡನೆ| ಜ.31ರಿಂದ ಸಂಸತ್ ಬಜೆಟ್ ಅಧಿವೇಶನ ಪ್ರಾರಂಭ| Read More »

ಮಾರ್ಗಸೂಚಿ ಅನುಸರಿಸಿದರೆ ಲಾಕ್ ಡೌನ್ ಪ್ರಶ್ನೆ ಉದ್ಭವಿಸಲ್ಲ – ಡಾ.ಸುಧಾಕರ್

ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಏರಿಕೆಯಾಗುತ್ತಿರುವ ಕೊರೋನಾ ಕೇಸ್ ಗಳಿಂದಾಗಿ ಮತ್ತೆ ಲಾಕ್ ಡೌನ್ ಆಗಲಿದೆ ಎನ್ನಲಾಗುತ್ತಿದ್ದು, ಆದರೆ ಲಾಕ್ ಡೌನ್ ಪ್ರಶ್ನೆ ಉದ್ಭವಿಸಲ್ಲ ಎಂದು ಸಚಿವ ಡಾ.ಸುಧಾಕರ್ ಹೇಳಿದ್ದಾರೆ. ಜನರು ಕೊರೋನಾ ಮಾರ್ಗಸೂಚಿ ಕ್ರಮಗಳನ್ನು ಅನುಸರಿಸಿ. ಮಾಸ್ಕ್, ಸಾಮಾಜಿಕ ಅಂತರದಂತ ನಿಯಮ ಪಾಲಿಸಿ. ಸದ್ಯದ ಈಗಿನ ಆಸ್ಪತ್ರೆಗಳಿಗೆ ದಾಖಲಾಗುತ್ತಿರುವಂತ ಕೋವಿಡ್ ಸೋಂಕಿತರ ಪ್ರಮಾಣ ಗಮನಿಸಿದರೆ ಲಾಕ್ ಡೌನ್ ಮಾಡಿ ಕೊರೋನಾ ನಿಯಂತ್ರಣ ಮಾಡೋ ಪ್ರಮೇಯವಿಲ್ಲ ಎಂದು ಹೇಳುವ ಮೂಲಕ ರಾಜ್ಯದಲ್ಲಿ ಲಾಕ್ ಡೌನ್ ಇಲ್ಲವೇ ಇಲ್ಲ

ಮಾರ್ಗಸೂಚಿ ಅನುಸರಿಸಿದರೆ ಲಾಕ್ ಡೌನ್ ಪ್ರಶ್ನೆ ಉದ್ಭವಿಸಲ್ಲ – ಡಾ.ಸುಧಾಕರ್ Read More »

ಪುತ್ತೂರು: ಹೆತ್ತ ತಾಯಿಯನ್ನೇ ಅತ್ಯಾಚಾರಗೈದ ಪಾಪಿ ಮಗ

ಪುತ್ತೂರು: ಹೆತ್ತು ಸಾಕಿ ಸಲಹಿದ ತಾಯಿಯನ್ನೇ ಕಿರಾತಕ ಮಗನೊಬ್ಬ ಅತ್ಯಾಚಾರಗೈದ ಘಟನೆ ತಾಲೂಕಿನ ಕೆದಂಬಾಡಿ ಗ್ರಾಮದ ಕುರಿಕ್ಕಾರದಲ್ಲಿ ನಡೆದಿದೆ. ಸಂತ್ರಸ್ತ ಮಹಿಳೆ ನೀಡಿದ ದೂರಿನಂತೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಆರೋಪಿ ಮಗನ ವಿರುದ್ಧ ಪ್ರಕರಣ ದಾಖಲಾಗಿದೆ. ಕೆದಂಬಾಡಿ ಕುರಿಕ್ಕಾರದ ಜಯರಾಮ ರೈ ಅತ್ಯಾಚಾರ ಎಸಗಿರುವ ಆರೋಪಿ. 58 ವರ್ಷದ ತನ್ನ ತಾಯಿಯೊಂದಿಗೆ ವಾಸವಾಗಿರುವ ಜಯರಾಮ ಜ.12ರಂದು ಎಂದಿನಂತೆ ರಾತ್ರಿ ಊಟ ಮಾಡಿ ಅವರ ರೂಮ್ ನಲ್ಲಿ ಮಲಗಿದ್ದ. ಮುಂಜಾನೆ 3 ಗಂಟೆಯ ವೇಳೆಗೆ ತಾಯಿ ಮಲಗಿದ್ದ

ಪುತ್ತೂರು: ಹೆತ್ತ ತಾಯಿಯನ್ನೇ ಅತ್ಯಾಚಾರಗೈದ ಪಾಪಿ ಮಗ Read More »

ಕರಾಳ ಶುಕ್ರವಾರ:ಭೀಕರ ಅಪಘಾತಕ್ಕೆ ಏಳು ಬಲಿ

ದಾವಣಗೆರೆ: ಭೀಕರ ರಸ್ತೆ ಅಪಘಾತದಲ್ಲಿ ಎಳು ಮಂದಿ ಮೃತಪಟ್ಟಿರುವ ಘಟನೆ ಜಗಳೂರು ತಾಲೂಕಿನ ಕಾನನಕಟ್ಟೆ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಮುಂಜಾನೆ ನಡೆದಿದೆ. ಕಾರು ಡಿವೈಡರ್​​ಗೆ ಢಿಕ್ಕಿ ಹೊಡೆದ ಪರಿಣಾಮ ಏಳು ಮಂದಿ ಪ್ರಯಾಣಿಕರು ಮೃತಪಟ್ಟಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ದಾವಣಗೆರೆ ಎಸ್ಪಿ ಸಿಬಿ ರಿಷ್ಯಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕರಾಳ ಶುಕ್ರವಾರ:ಭೀಕರ ಅಪಘಾತಕ್ಕೆ ಏಳು ಬಲಿ Read More »

ಭೀಕರ ಅಪಘಾತ| ರಿಯಾಲಿಟಿ ಶೋ ಪುಟಾಣಿ ತಾರೆ ಸಮನ್ವಿ ವಿಧಿವಶ|

ಬೆಂಗಳೂರು:‌ ಟಿಪ್ಪರ್​ ಲಾರಿ ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಅಪಘಾತದಲ್ಲಿ ಕನ್ನಡ ವಾಹಿನಿವೊಂದರಲ್ಲಿ ಪ್ರಸಾರವಾಗುವ ರಿಯಾಲಿಟಿ ಶೋ ‘ನನ್ನಮ್ಮ ಸೂಪರ್​ ಸ್ಟಾರ್​ ಸ್ಪರ್ಧಿ’ ಸಮನ್ವಿ (6) ಸಾವನ್ನಪ್ಪಿದ್ದಾರೆ. ಗುರುವಾರ ತಾಯಿಯೊಂದಿಗೆ ದ್ವಿಚಕ್ರ ವಾಹನದಲ್ಲಿ ಕೋಣನಕುಂಟೆ ರಸ್ತೆಯಿಂದ ವಾಜರಹಳ್ಳಿಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದ್ದು, ಸಮನ್ವಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಘಟನೆಯಲ್ಲಿ ಬಾಲಕಿ ತಾಯಿ ಅಮೃತಾ ನಾಯ್ಡು ಗಂಭೀರ ಗಾಯಗೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಮರಣೋತ್ತರ ಪರೀಕ್ಷೆಗೆ ಬಾಲಕಿ ಮೃತದೇಹವನ್ನು ಕಿಮ್ಸ್​ಗೆ ರವಾನಿಸಲಾಗಿದ್ದು, ಆರೋಪಿ ಟಿಪ್ಪರ್ ಲಾರಿ ಚಾಲಕನನ್ನು ಕೆ.ಎಸ್.ಲೇಔಟ್

ಭೀಕರ ಅಪಘಾತ| ರಿಯಾಲಿಟಿ ಶೋ ಪುಟಾಣಿ ತಾರೆ ಸಮನ್ವಿ ವಿಧಿವಶ| Read More »

ಶಬರಿಮಲೆ: ಇಂದು ಜ್ಯೋತಿ ದರ್ಶನ

ಶಬರಿಮಲೆ: ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿ ಸನ್ನಿಧಾನದಲ್ಲಿ ಮಕರ ಸಂಕ್ರಮಣ ಪೂಜೆ ಜ.14ರಂದು ಜರುಗಲಿದೆ. ಮಕರಜ್ಯೋತಿಯ ಪೂರ್ವಭಾವಿಯಾಗಿ ಗುರುವಾರ ಪ್ರಾಸಾದ ಶುದ್ಧಿ ಕ್ರಿಯೆ, ಬಿಂಬಶುದ್ಧಿ ನಡೆಯಿತು. ತಮಿಳುನಾಡಿನಲ್ಲಿ ಒಮಿಕ್ರಾನ್ ನಿಯಂತ್ರಣ ನಿಯಮ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಮಲೆಗೆ ತಮಿಳುನಾಡು ಭಕ್ತರ ಸಂಖ್ಯೆ ಕಡಿಮೆಯಾಗಿದೆ. ಕರ್ನಾಟಕ, ಆಂಧ್ರ, ತೆಲಂಗಾಣದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ. ಮಧ್ಯಾಹ್ನ ನಂತರ ಪಂಪೆಯಿಂದ ಸನ್ನಿಧಾನಕ್ಕೆ ಹಾಗೂ ಹದಿನೆಂಟು ಮೆಟ್ಟಿಲೇರಲು ಭಕ್ತರಿಗೆ ನಿಯಂತ್ರಣ ಹೇರಲಾಗಿದೆ. ಮಧ್ಯಾಹ್ನ ಪೂಜೆಯ ನಂತರ ಗರ್ಭಗುಡಿ ಬಾಗಿಲು ಮುಚ್ಚಿದರೆ, ಪಂದಳ ಅರಮನೆಯಿಂದ

ಶಬರಿಮಲೆ: ಇಂದು ಜ್ಯೋತಿ ದರ್ಶನ Read More »

ಒಮಿಕ್ರಾನ್ ಗೆ ಆತಂಕ ಪಡುವ ಅಗತ್ಯವಿಲ್ಲ| ಸಿಎಂ ಗಳ ಸಭೆಯಲ್ಲಿ ಪ್ರಧಾನಿ ಮೋದಿ ಹೇಳಿಕೆ|

ದೇಶದಲ್ಲಿ ದಿನೇ ದಿನೇ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗ್ತಿರುವ ಹಿನ್ನೆಲೆಯಲ್ಲಿ ಎಲ್ಲ ರಾಜ್ಯಗಳು ಸೇರಿದಂತೆ ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಸಭೆ ನಡೆಸಿದ್ದಾರೆ. ವಿಡಿಯೋ ಕಾನ್ಫೆರೆನ್ಸ್‌ ನಂತರ ಮಾತನಾಡಿದ ಪ್ರಧಾನಿ ಮೋದಿ, ‘ಒಮಿಕ್ರಾನ್‌ ಸೋಂಕು ದಿನೇ ದಿನೇ ಹೆಚ್ಚಾಗಿ ಹರಡುತ್ತಿದೆ. ಅಮೆರಿಕಾದಲ್ಲಿ ಪ್ರತಿನಿತ್ಯ ಲಕ್ಷಾಂತರ ಸೋಂಕಿತರು ಪತ್ತೆಯಾಗ್ತಿದ್ದಾರೆ. ಒಮಿಕ್ರಾನ್‌ ಸೋಂಕಿನಿಂದ ಆತಂಕ ಪಡುವ ಆಗತ್ಯವಿಲ್ಲ. ಯಾಕೆಂದರೆ, ಒಮಿಕ್ರಾನ್‌ ನಿಯಂತ್ರಿಸಲು ಕೇಂದ್ರ, ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ. ಕೊರೊನಾ ರೂಪಾಂತರಿ ಬಗ್ಗೆ ಸ್ಪಷ್ಟ ಚಿತ್ರಣ

ಒಮಿಕ್ರಾನ್ ಗೆ ಆತಂಕ ಪಡುವ ಅಗತ್ಯವಿಲ್ಲ| ಸಿಎಂ ಗಳ ಸಭೆಯಲ್ಲಿ ಪ್ರಧಾನಿ ಮೋದಿ ಹೇಳಿಕೆ| Read More »

ರಾಜ್ಯದಲ್ಲಿ ಮತ್ತೆ ಏರಿಕೆಯಾದ ಕೊರೊನಾ ಪ್ರಕರಣಗಳು| 25 ಸಾವಿರಕ್ಕೂ ಅಧಿಕ ಜನರಿಗೆ ಸೋಂಕು ದೃಢ|

ಬೆಂಗಳೂರು: ರಾಜ್ಯದಲ್ಲಿ ಇಂದು 25 ಸಾವಿರಕ್ಕೂ ಅಧಿಕ ಮಂದಿಗೆ ಕೊರೋನಾ ಸೋಂಕು ತಗುಲಿದೆ. ರಾಜಧಾನಿ ಬೆಂಗಳೂರಿನಲ್ಲಿ 18 ಸಾವಿರಕ್ಕೂ ಅಧಿಕ ಮಂದಿಗೆ ಪಾಸಿಟಿವ್ ವರದಿ ಬಂದಿದೆ. ರಾಜ್ಯದಲ್ಲಿ ಇವತ್ತು ಕೊರೋನಾ ಮಹಾಸ್ಪೋಟವಾಗಿದ್ದು 25,005 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರಿಂದ ಪಾಸಿಟಿವಿಟಿ ದರ ಶೇಕಡ 12.39 ರಷ್ಟು ಏರಿಕೆಯಾಗಿದೆ. ಇವತ್ತು 2363 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 1,15,733 ಕ್ಕೆ ಏರಿಕೆಯಾಗಿದೆ. ಇವತ್ತು 8 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. 2,01,704 ಪರೀಕ್ಷೆ ನಡೆಸಲಾಗಿದೆ. ಬೆಂಗಳೂರಿನಲ್ಲಿ

ರಾಜ್ಯದಲ್ಲಿ ಮತ್ತೆ ಏರಿಕೆಯಾದ ಕೊರೊನಾ ಪ್ರಕರಣಗಳು| 25 ಸಾವಿರಕ್ಕೂ ಅಧಿಕ ಜನರಿಗೆ ಸೋಂಕು ದೃಢ| Read More »