January 2022

ಮಂಗಳೂರು: ವಾರಾಂತ್ಯ ಕರ್ಪ್ಯೂ ಹಿನ್ನೆಲೆ| ಸಾರ್ವಜನಿಕ ಓಡಾಟಕ್ಕೆ ಬ್ರೇಕ್| ಪೊಲೀಸರಿಂದ ಬಿಗಿ ಕ್ರಮ|

ಮಂಗಳೂರು: ರಾಜ್ಯ ಸರಕಾರ ಜಾರಿಗೊಳಿಸಿರುವ ವಾರಾಂತ್ಯ ಕರ್ಫ್ಯೂ ಹಿನ್ನೆಲೆಯಲ್ಲಿ ಬಂದೋಬಸ್ತು ಹಾಗೂ ಜನತೆಯ ಅನಗತ್ಯ ಓಡಾಟಕ್ಕೆ ಕಡಿವಾಣ ಮಂಗಳೂರು ಪೊಲೀಸ್ ಕಮಿಷನರ್ ಮತ್ತು ಇಬ್ಬರು ಡಿಸಿಪಿ ಜಂಟಿಯಾಗಿ ಕಾರ್ಯಾಚರಣೆಗೆ ಇಳಿದಿದ್ದಾರೆ. ಶುಕ್ರವಾರ ರಾತ್ರಿ 10ರ ಬಳಿಕ ಓಡಾಟ ನಡೆಸುವವರನ್ನು ವಿಚಾರಣೆ ನಡೆಸಿ ಕಳುಹಿಸುತ್ತಿರುವ ದೃಶ್ಯ ಕಂಡು ಬಂದಿತು. ಆಯಕಟ್ಟಿನ ಸ್ಥಳಗಳಲ್ಲಿ ಬ್ಯಾರಿಕೇಡ್​ಗಳನ್ನು ಹಾಕಿ ವಾಹನಗಳಲ್ಲಿ ಓಡಾಟ ನಡೆಸುವವರನ್ನು ಪರಿಶೀಲನೆ ನಡೆಸುತ್ತಿದ್ದ ಪೊಲೀಸರು ವಾಹನಗಳಲ್ಲಿ ಅನಗತ್ಯ ಓಡಾಟ ನಡೆಸುತ್ತಿದ್ದವರನ್ನು ಎಚ್ಚರಿಕೆ ‌ನೀಡಿ ಹಿಂದಕ್ಕೆ ಕಳುಹಿಸಿದ್ದಾರೆ. ನಗರದಲ್ಲಿ ರಾತ್ರಿ 10ಗಂಟೆಯ […]

ಮಂಗಳೂರು: ವಾರಾಂತ್ಯ ಕರ್ಪ್ಯೂ ಹಿನ್ನೆಲೆ| ಸಾರ್ವಜನಿಕ ಓಡಾಟಕ್ಕೆ ಬ್ರೇಕ್| ಪೊಲೀಸರಿಂದ ಬಿಗಿ ಕ್ರಮ| Read More »

ನೈಸ್ ರಸ್ತೆಯಲ್ಲಿ ಭೀಕರ ಅಪಘಾತ| ಕಾರಿನಲ್ಲಿದ್ದ ನಾಲ್ವರು ಟೆಕ್ಕಿಗಳು ಸ್ಥಳದಲ್ಲೇ ಸಾವು|

ಬೆಂಗಳೂರು: ಬನ್ನೇರುಘಟ್ಟ – ತುಮಕೂರು ನೈಸ್ ರಸ್ತೆಯಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶುಕ್ರವಾರ ರಾತ್ರಿ ಸಂಭವಿಸಿದೆ. ಬನ್ನೇರುಘಟ್ಟದಿಂದ ತುಮಕೂರಿನ ಕಡೆ ಹೊರಟ್ಟಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಬಂದು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಪುರುಷರು, ಇಬ್ಬರು ಮಹಿಳೆಯರ ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯ ವಿಷಯ ತಿಳಿದ ಕುಮಾರಸ್ವಾಮಿ ಲೇಔಟ್ ಪೊಲೀಸರು ಅಪಘಾತದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದಿಂದ

ನೈಸ್ ರಸ್ತೆಯಲ್ಲಿ ಭೀಕರ ಅಪಘಾತ| ಕಾರಿನಲ್ಲಿದ್ದ ನಾಲ್ವರು ಟೆಕ್ಕಿಗಳು ಸ್ಥಳದಲ್ಲೇ ಸಾವು| Read More »

ವಿದ್ಯಾರ್ಥಿನಿಯನ್ನು ಬೆತ್ತಲೆಗೊಳಿಸಿ ಹಲ್ಲೆಗೈದ ಶಿಕ್ಷಕಿಗೆ ಸಸ್ಪೆಂಡ್ ಶಿಕ್ಷೆ

ಮಂಡ್ಯ: ಇಲ್ಲಿನ ಶ್ರೀರಂಗಪಟ್ಟಣ ತಾಲೂಕಿನ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿನಿಯನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ ಮುಖ್ಯ ಶಿಕ್ಷಕಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಅಮಾನತು ಮಾಡಿದ್ದಾರೆ. ಶಾಲೆಗೆ ಮೊಬೈಲ್ ತಂದಿದ್ದ ವಿದ್ಯಾರ್ಥಿನಿಯನ್ನು ವಿವಸ್ತ್ರಗೊಳಿಸಿದ ಮುಖ್ಯಶಿಕ್ಷಕಿ ಹಲ್ಲೆ ಮಾಡಿ ಫ್ಯಾನ್ ಕೆಳಗೆ ಕೂರಿಸಿದ್ದರು. ಶಿಕ್ಷಕಿಯ ಈ ಕೃತ್ಯದ ವಿರುದ್ದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಗ್ರಾಮಸ್ಥರು ಕೂಡ ಮುಖ್ಯಶಿಕ್ಷಕಿ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದರು. ಶಿಕ್ಷಣ ಇಲಾಖೆ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಉನ್ನತ ಅಧಿಕಾರಿಗಳಿಗೆ ವರದಿ ನೀಡಿದ್ದರು.

ವಿದ್ಯಾರ್ಥಿನಿಯನ್ನು ಬೆತ್ತಲೆಗೊಳಿಸಿ ಹಲ್ಲೆಗೈದ ಶಿಕ್ಷಕಿಗೆ ಸಸ್ಪೆಂಡ್ ಶಿಕ್ಷೆ Read More »

ಸುದ್ದಿ ಪ್ರಸಾರ ಮಾಡುವುದಾಗಿ ಚಾನೆಲ್ ವರದಿಗಾರನಿಂದ ಬ್ಲ್ಯಾಕ್ ಮೇಲ್| 25 ಲಕ್ಷ ಹಣಕ್ಕಾಗಿ ಬೇಡಿಕೆಯಿಟ್ಟವ ಹಣ ಪಡೆಯುತ್ತಿರುವಾಗಲೇ ಅರೆಸ್ಟ್

ಬೆಂಗಳೂರು: ಮರಳು ಮಾಫಿಯಾದ ಸಂಬಂಧಿಸಿದಂತೆ ಸುದ್ದಿ ಪ್ರಸಾರ ತಡೆಗೆ 25 ಲಕ್ಷ ಹಣಕ್ಕೆ ಬೇಡಿಕೆಯಿಟ್ಟು 8 ಲಕ್ಷ ರೂ. ಹಣ ಪಡೆಯುತ್ತಿದ್ದಾಗ ಖಾಸಗಿ ವಾಹಿನಿಯ ಪತ್ರಕರ್ತನನ್ನು ಹೆಣ್ಣೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರ ವಿರುದ್ಧ ದೂರು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಖಾಸಗಿ ಚಾನೆಲ್​ ಸಿಬ್ಬಂದಿ ಬಂಧನಅನಿಲ್‌ಕುಮಾರ್, ಶ್ರೀಕಾಂತ್ ಕುಮಾರ್, ಸುನಿಲ್ ಕುಮಾರ್ ಎಂಬುವವರು ತಮಗೆ ಸುದ್ದಿ ಪ್ರಸಾರ ಮಾಡದಂತೆ ತಡೆಯಲು ಹಣ ಕೇಳುತ್ತಿದ್ದಾರೆ ಎಂದು ಆಡಿಯೋ ಮತ್ತು ವಿಡಿಯೋ ಸಮೇತ ದೂರು ನೀಡಿದ್ದಾರೆ.

ಸುದ್ದಿ ಪ್ರಸಾರ ಮಾಡುವುದಾಗಿ ಚಾನೆಲ್ ವರದಿಗಾರನಿಂದ ಬ್ಲ್ಯಾಕ್ ಮೇಲ್| 25 ಲಕ್ಷ ಹಣಕ್ಕಾಗಿ ಬೇಡಿಕೆಯಿಟ್ಟವ ಹಣ ಪಡೆಯುತ್ತಿರುವಾಗಲೇ ಅರೆಸ್ಟ್ Read More »

ಕಂದಾಯ ಸಚಿವ ಆರ್.ಅಶೋಕ್ ಗೆ ಕೋವಿಡ್ ಪಾಸಿಟಿವ್

ಬೆಂಗಳೂರು: ಮೂರನೆ ಅಲೇ ನಿಧಾನವಾಗಿ ವಿಧಾನಸೌದಕ್ಕೂ ಆವರಿಸಿದ್ದು, ಕಂದಾಯ ಸಚಿವ ಆರ್.ಅಶೋಕ್ ಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ. ಸದ್ಯ ಲಘು ರೋಗ ಲಕ್ಷಣಗಳಿರುವ ಕಾರಣ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರ್ ಅಶೋಕ್ ಇತ್ತೀಚೆಗಷ್ಟೆ ಬಸವರಾಜ್ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ಭಾಗವಹಿಸಿದ್ದರು. ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಕೆಲದಿನಗಳ ನಂತರ ಹೋಮ್ ಐಸೋಲೇಶನ್ ಗೆ ಒಳಗಾಗಲಿದ್ದಾರೆ. ಈ ಕುರಿತು ಆರ್ ಆಶೋಕ್ ಟ್ವೀಟ್ ಮಾಡಿದ್ದು ನನಗೆ ಕೋವಿಡ್ ದೃಢಪಟ್ಟಿದ್ದು ಆರೋಗ್ಯವಾಗಿ ಇದ್ದೇನೆ,

ಕಂದಾಯ ಸಚಿವ ಆರ್.ಅಶೋಕ್ ಗೆ ಕೋವಿಡ್ ಪಾಸಿಟಿವ್ Read More »

ಮುಸ್ಲಿಂ ಮದುಮಗನಿಂದ‌ ಕೊರಗಜ್ಜನ ವೇಷ ಧರಿಸಿ ಅವಮಾನ| ಮುಸ್ಲಿಂ ಸಮುದಾಯದಿಂದಲೇ ಆಕ್ರೋಶ

ಪುತ್ತೂರು: ಮುಸ್ಲಿಂ ಸಮುದಾಯದ ಮದುವೆ ಕಾರ್ಯಕ್ರಮದಲ್ಲಿ ತುಳುನಾಡಿನ ಆರಾಧ್ಯ ದೈವ ಕೊರಗಜ್ಜನ ವೇಷಭೂಷಣ ಧರಿಸಿ ಅವಮಾನ ಮಾಡಿರುವ ಘಟನೆ ನಡೆದಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ಮುಸ್ಲಿಂ ಸಮುದಾಯದವರೇ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ನಡೆದಿದೆ. ಬಂಟ್ವಾಳ ತಾಲೂಕಿನ ಕೊಳ್ನಾಡು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಉಪ್ಪಳದ ಯುವಕನ ಜೊತೆ ನಡೆದಿದ್ದ ಕೊಳ್ನಾಡು ಗ್ರಾಮದ ಯುವತಿಯೊಬ್ಬರ ಜೊತೆ ಮದುವೆ ಕಾರ್ಯಕ್ರಮ ನಡೆದಿದ್ದು, ವಧುವಿನ‌

ಮುಸ್ಲಿಂ ಮದುಮಗನಿಂದ‌ ಕೊರಗಜ್ಜನ ವೇಷ ಧರಿಸಿ ಅವಮಾನ| ಮುಸ್ಲಿಂ ಸಮುದಾಯದಿಂದಲೇ ಆಕ್ರೋಶ Read More »

ವೀಕೆಂಡ್ ಕರ್ಪ್ಯೂನಿಂದ ನಷ್ಟಕ್ಕೊಳಗಾಗುವ 5 ಸಿನಿಮಾಗಳಿಗೆ ಪರಿಹಾರ ನೀಡುವಂತೆ ಸಿಎಂ ಗೆ ಫಿಲ್ಮ್ ಛೇಂಬರ್ ಮನವಿ

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ದುಪ್ಪಟ್ಟಾಗುತ್ತಿದೆ. ಇದರಿಂದ ಮತ್ತೆ ಕರ್ನಾಟಕದಲ್ಲಿ ಕೊರೊನಾ ಆತಂಕ ಹೆಚ್ಚಾಗುತ್ತಿದೆ. ಹೀಗಾಗಿ ಸರ್ಕಾರ ಕೆಲವು ದಿನಗಳ ಹಿಂದೆ ಹೊಸ ಮಾರ್ಗಸೂಚಿಯನ್ನು ಹೊರಡಿಸಿದೆ. ಇದರಲ್ಲಿ ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಸೇರಿದಂತೆ ಚಿತ್ರಮಂದಿರಗಳಲ್ಲಿ ಶೇ.50ರಷ್ಟು ಸೀಟು ಭರ್ತಿ ಯಂತಹ ಕಠಿಣ ಮಾರ್ಗಸೂಚಿಯನ್ನೂ ಹೊರಡಿಸಿದೆ. ಈ ನಿಯಮಗಳು ಕನ್ನಡ ಚಿತ್ರರಂಗಕ್ಕೆ ಮಾರಕ ಎಂದು ಫಿಲ್ಮ್ ಚೇಂಬರ್ ಆತಂಕ ವ್ಯಕ್ತಪಡಿಸಿದೆ. ಸರ್ಕಾರ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡುತ್ತಿದ್ದಂತೆ ಕರ್ನಾಟಕ ಚಲನ ಚಿತ್ರ ವಾಣಿಜ್ಯ ಮಂಡಳಿ ತುರ್ತು

ವೀಕೆಂಡ್ ಕರ್ಪ್ಯೂನಿಂದ ನಷ್ಟಕ್ಕೊಳಗಾಗುವ 5 ಸಿನಿಮಾಗಳಿಗೆ ಪರಿಹಾರ ನೀಡುವಂತೆ ಸಿಎಂ ಗೆ ಫಿಲ್ಮ್ ಛೇಂಬರ್ ಮನವಿ Read More »

ಒಂಬತ್ತು ವರ್ಷದ ಬಾಲಕಿ‌ ಮೇಲೆ ಇಬ್ಬರು ಬಾಲಕರಿಂದ ಅತ್ಯಾಚಾರ

ಮುಜಾಫರ್‌ನಗರ: ಜಿಲ್ಲೆಯಲ್ಲಿ ಒಂಬತ್ತು ವರ್ಷದ ಬಾಲಕಿಯ ಮೇಲೆ ಇಬ್ಬರು ಹುಡುಗರು ಅತ್ಯಾಚಾರವೆಸಗಿದ ಕುರಿತು ಪ್ರಕರಣವೊಂದು ದಾಖಲಾಗಿದೆ. ಕಳವಳಕಾರಿ ಘಟನೆಯು ಕೆಲವು ದಿನಗಳ ಹಿಂದೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.ಜನವರಿ 5 ರಂದು ದೂರು ದಾಖಲಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಸಂತ್ರಸ್ತೆಯ ಪೋಷಕರು ನೀಡಿದ ಪೊಲೀಸ್ ದೂರಿನ ಪ್ರಕಾರ, ಬಾಲಕಿ ತನ್ನ ಮನೆಯ ಬಳಿ ಆಟವಾಡುತ್ತಿದ್ದಾಗ ಆರೋಪಿಗಳಾದ 10 ಮತ್ತು 14 ವರ್ಷ ವಯಸ್ಸಿನ ಬಾಲಕರು ಆಕೆಯನ್ನು ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಬಾಲಕಿಯನ್ನು

ಒಂಬತ್ತು ವರ್ಷದ ಬಾಲಕಿ‌ ಮೇಲೆ ಇಬ್ಬರು ಬಾಲಕರಿಂದ ಅತ್ಯಾಚಾರ Read More »

ರಾಜ್ಯದಲ್ಲಿ ಕೊರೊನಾ ಹೆಚ್ಚಾಗ್ತಾನೇ ಇರುತ್ತೆ| ಆದ್ರೆ ಲಾಕ್ ಡೌನ್ ಬಗ್ಗೆ ಸ್ಪಷ್ಟತೆಯೇ ಇಲ್ಲ : ಸಚಿವ ಡಾ. ಸುಧಾಕರ್

ಬೆಂಗಳೂರು : ಕೊರೊನಾ ಪ್ರಕರಣಗಳು ಹೆಚ್ಚು ಆಗುತ್ತಿದ್ದರೂ ಮತ್ತೆ ಯಾವುದೇ ಲಾಕ್ ಡೌನ್ ಮಾಡುವ ಮಾತೇ ಇಲ್ಲ ಎಂದು ಡಾ. ಸುಧಾಕರ್ ಸ್ಪಷ್ಟಪಡಿಸಿದ್ದಾರೆ. ಇಂದು ಬೆಂಗಳೂರಿನಲ್ಲಿ ಮಾತಾಡಿದ ಡಾ. ಸುಧಾಕರ್ ಕೊರೊನ ಪ್ರಕರಣಗಳು ಹೆಚ್ಚು ಆಗಿಯೇ ಆಗುತ್ತೆ. ಪಾಸಿಟಿವಿಟಿ ರೇಟ್ ಬಗ್ಗೆ ಆತಂಕ ಬೇಡ, ನಾವು ಲಸಿಕಾಕರಣ ತೀವ್ರತೆಯನ್ನು ಬಹಳ ಅದ್ಬುತವಾಗಿ ಮಾಡಿರುವುದರಿಂದ ಜನರು ಆತಂಕ ಪಡುವ ಅಗತ್ಯ ಇಲ್ಲ, ಇದರಿಂದ ನಿಯಂತ್ರಣಕ್ಕೆ ಬರುತ್ತದೆ. ಆದರೆ ಯಾವುದೇ ಕಾರಣಕ್ಕೂ ಸಂಪೂರ್ಣ ಲಾಕ್ ಡೌನ್ ಮಾಡುವುದಿಲ್ಲ. ಲಾಕ್ ಡೌನ್

ರಾಜ್ಯದಲ್ಲಿ ಕೊರೊನಾ ಹೆಚ್ಚಾಗ್ತಾನೇ ಇರುತ್ತೆ| ಆದ್ರೆ ಲಾಕ್ ಡೌನ್ ಬಗ್ಗೆ ಸ್ಪಷ್ಟತೆಯೇ ಇಲ್ಲ : ಸಚಿವ ಡಾ. ಸುಧಾಕರ್ Read More »

ತುಂಡಾಗಿ ಬಿದ್ದಿದ್ದ ವಿದ್ಯುತ್ ವೈರ್ ಕುತ್ತಿಗೆಗೆ ಸಿಲುಕಿ ಯುವಕ ಸಾವು

ಬೆಳ್ತಂಗಡಿ: ಯುವಕನೋರ್ವ ತನ್ನ ಕೆಲಸದ ವ್ಯಕ್ತಿಯನ್ನು ಮನೆಗೆ ಬಿಟ್ಟು ವಾಪಸ್ ಬರುತ್ತಿದ್ದ ವೇಳೆ ಆಕಸ್ಮಿಕವಾಗಿ ತುಂಡಾಗಿ ಬಿದ್ದಿದ್ದ ವಿದ್ಯುತ್ ವೈಯರ್ ಕುತ್ತಿಗೆಗೆ ಸಿಲುಕಿ ರಸ್ತೆಗೆ ಎಸೆಯಲ್ಪಟ್ಟು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಹೆಡ್ಯಾದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಉಜಿರೆಯಲ್ಲಿ ಶ್ರೀ ಗಣೇಶ್ ಹೊಟೇಲ್ ನಡೆಸುತ್ತಿದ್ದ ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ಮಲೆಬೆಟ್ಟು ನಿವಾಸಿ ರಘು ಎಂದು ಗುರುತಿಸಲಾಗಿದೆ. ಹೇಡ್ಯ ಬಳಿ ಕಳೆದ ರಾತ್ರಿ ಬೈಹುಲ್ಲು ಸಾಗಾಟದ ಪಿಕಪ್ ವಾಹನವೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ

ತುಂಡಾಗಿ ಬಿದ್ದಿದ್ದ ವಿದ್ಯುತ್ ವೈರ್ ಕುತ್ತಿಗೆಗೆ ಸಿಲುಕಿ ಯುವಕ ಸಾವು Read More »