January 2022

ಮೋದಿ ದೀರ್ಘಾಯುಷ್ಯಕ್ಕಾಗಿ ಧರ್ಮಸ್ಥಳದಲ್ಲಿ ಮಹಾ ಮೃತ್ಯುಂಜಯ ಹೋಮ

ಮಂಗಳೂರು: ಪಂಜಾಬ್‌ನ ಮೇಲ್ಸೇತುವೆ ಮೇಲೆ ಪ್ರಧಾನಿ ನರೇಂದ್ರ ಮೋದಿಯವರ ಕಾರನ್ನು ಇಪ್ಪತ್ತು‌ ನಿಮಿಷ ತಡೆ ಹಿಡಿದ ವಿಚಾರ ರಾಷ್ಟ್ರ ಮಟ್ಟದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಪ್ರಧಾನಿಯವರನ್ನು ಈ ರೀತಿ ಅಡ್ಡಗಟ್ಟಿಸಿರುವುದು ಭದ್ರತಾ ವೈಫಲ್ಯ ಅಂತಾ ಆಡಳಿತ ಪಕ್ಷ ಟೀಕಿಸಿದರೆ, ಕಾಂಗ್ರೆಸ್ ಮಾತ್ರ ಇದು ಚುನಾವಣಾ ಗಿಮಿಕ್, ಮೋದಿ, ಮೆರವಣಿಗೆಯಲ್ಲಿ ಜನ ಸೇರಲಿಲ್ಲ ಎಂಬ ಕಾರಣಕ್ಕಾಗಿ ಮೋದಿ ಈ ಹೈಡ್ರಾಮ ಮಾಡಿದ್ದಾರೆ ಅಂತಾ ಕಾಂಗ್ರೆಸ್ ಟೀಕಿಸಿದೆ. ನರೇಂದ್ರ ಮೋದಿಯವರ ವಾಹನ ಮೇಲ್ಸೇತುವೆ ಮೇಲೆ ಇಪ್ಪತ್ತು‌ ನಿಮಿಷ ಬಾಕಿಯಾಗುತ್ತಿದ್ದಂತೆಯೇ ಪ್ರಧಾನಿ […]

ಮೋದಿ ದೀರ್ಘಾಯುಷ್ಯಕ್ಕಾಗಿ ಧರ್ಮಸ್ಥಳದಲ್ಲಿ ಮಹಾ ಮೃತ್ಯುಂಜಯ ಹೋಮ Read More »

ನಿಶ್ಚಿತಾರ್ಥ ಮಾಡಿಕೊಂಡ ಸಲಿಂಗಿ ವೈದ್ಯರು ಗೋವಾದಲ್ಲಿ ಮದ್ವೆಯಾಗ್ತಿದಾರಂತೆ!

ನಾಗ್ಪುರ: ಈ ಹಿಂದೆ ತೆಲಂಗಾಣದಲ್ಲಿ ಸಲಿಂಗಿ ಜೋಡಿಯೊಂದು ಹಸೆಮಣೆ ಏರಿದ್ದ ಸುದ್ದಿ ನಡೆದಿರುವ ಬೆನ್ನಲ್ಲೇ ಇದೀಗ ಮಹಾರಾಷ್ಟ್ರದ ನಾಗ್ಪುರದಲ್ಲಿ ಇಬ್ಬರು ಮಹಿಳಾ ವೈದ್ಯರು ಸರಳ ಸಮಾರಂಭದಲ್ಲಿ ನಿಶ್ಚಿತಾರ್ಥವಾಗಿದ್ದಾರೆ. ಪರಸ್ಪರ ಪ್ರೇಮಿಸುತ್ತಿದ್ದ ಈ ಇಬ್ಬರು ಸಲಿಂಗಿ ವೈದ್ಯರು, ಒಂದು ಹೆಜ್ಜೆ ಮುಂದೆ ಹೋಗಿ ಜೀವನಪರ್ಯಂತ ಜೊತೆಗಿರಲು ನಿರ್ಧರಿಸಿದ್ದಾರೆ. ಈ ಸಲಿಂಗಿ ಜೋಡಿ ಶೀಘ್ರದಲ್ಲೇ ಗೋವಾದಲ್ಲಿ ಮದುವೆಯಾಗಲು ಯೋಜಿಸಿದ್ದಾರೆ. ಪರೋಮಿತಾ ಮುಖರ್ಜಿ ಮತ್ತು ಸುರಭಿ ಮಿತ್ರ ಡಿಸೆಂಬರ್ 29ರಂದು ನಾಗ್ಪುರದ ಹೊರವಲಯದಲ್ಲಿ ಪರಸ್ಪರ ಉಂಗುರ ಬದಲಾಯಿಸುವ ಮೂಲಕ ನಿಶ್ಚಿತಾರ್ಥವಾಗಿದ್ದಾರೆ. ಇಬ್ಬರು

ನಿಶ್ಚಿತಾರ್ಥ ಮಾಡಿಕೊಂಡ ಸಲಿಂಗಿ ವೈದ್ಯರು ಗೋವಾದಲ್ಲಿ ಮದ್ವೆಯಾಗ್ತಿದಾರಂತೆ! Read More »

ಮಂಗಳೂರು: ಟಿವಿ ನೋಡಲು ಬಂದಿದ್ದ ಬಾಲಕಿಗೆ ಲೈಂಗಿಕ ಕಿರುಕುಳ|ಆರೋಪಿ ಬಂಧನ

ಮಂಗಳೂರು : ಅಶೋಕನಗರ ಬಳಿ ಬಾಲಕಿಗೆ ಕಿರುಕುಳ ನೀಡಿದ ಆರೋಪದಲ್ಲಿ ಯುವಕನೋರ್ವನನ್ನು ಇಲ್ಲಿನ ಠಾಣೆ ಪೊಲೀಸರು ಬಂಧಿಸಿದ್ದಾರೆ. ಈತ ತನ್ನ‌ ಮನೆಗೆ ಟಿವಿ ನೋಡಲೆಂದು ಬಂದಿದ್ದ 10 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾಗಿ ತಿಳಿದುಬಂದಿದೆ. ಬಂಧಿತ ಆರೋಪಿಯನ್ನು ನಿತಿನ್ (19) ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿ ಉರ್ವ ಪೊಲೀಸ್ ಠಾಣೆಯಲ್ಲಿ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಮಂಗಳೂರು: ಟಿವಿ ನೋಡಲು ಬಂದಿದ್ದ ಬಾಲಕಿಗೆ ಲೈಂಗಿಕ ಕಿರುಕುಳ|ಆರೋಪಿ ಬಂಧನ Read More »

ಎಸ್ಎಸ್ಎಲ್ ಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಈ ಬಾರಿ ನಡೆಯಲಿರುವ ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಿಸಿದೆ. ಈ ಬಗ್ಗೆ ಮಾಹಿತಿ ಬಿಡುಗಡೆ ಮಾಡಿರುವ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು, ಮಾರ್ಚ್, ಏಪ್ರಿಲ್ 2022ರ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ದಿನಾಂಕ ಮಾ. 28 ರಿಂದ ಎ 04 ರವರೆಗೆ ನಡೆಸಲು ತೀರ್ಮಾನಿಸಲಾಗಿದೆ. ವೇಳಾಪಟ್ಟಿಗೆ ಅಭ್ಯರ್ಥಿಗಳು, ಪೋಷಕರು ಆಕ್ಷೇಪಣೆಯನ್ನು ದಿನಾಂಕ 06-01-2022ರಿಂದ 14-01-2022ರೊಳಗಾಗಿ ಸಲ್ಲಿಸುವಂತೆ ತಿಳಿಸಿದೆ. ಎಸ್

ಎಸ್ಎಸ್ಎಲ್ ಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ Read More »

ಮಂಗಳೂರು: ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಕರ್ತವ್ಯ ಲೋಪ| ಐವರು ಸಿಬ್ಬಂದಿ ಅಮಾನತು|

ಮಂಗಳೂರು: ಇಲ್ಲಿನ ಪಾಂಡೇಶ್ವರ ಮಹಿಳಾ ಠಾಣೆಯ ಐವರು ಸಿಬ್ಬಂದಿಯು ಕರ್ತವ್ಯದ ಅವಧಿಯಲ್ಲಿ ಠಾಣೆಯಲ್ಲಿ ಮದ್ಯಪಾನ ಮಾಡಿ ಇಲಾಖೆಯ ನಿಯಮಾವಳಿಗೆ ವಿರುದ್ಧವಾಗಿ ವರ್ತಿಸಿದ್ದು ಸಿಸಿಟಿವಿ ದೃಶ್ಯಾವಳಿ ಹಾಗೂ ಡಿಸಿಪಿ ಮತ್ತು ಎಸಿಪಿ ನೀಡಿದ ವರದಿಯನ್ನು ಆಧರಿಸಿ ಇಬ್ಬರು ಎಎಸ್ಸೈ, ಇಬ್ಬರು ಹೆಡ್ ಕಾನ್ಸ್ಟೇಬಲ್, ಒಬ್ಬ ಪೊಲೀಸ್ ಕಾನ್ಸ್ಟೇಬಲ್ ಸಹಿತ ಐವರನ್ನು ಪೊಲೀಸ್ ಆಯುಕ್ತರು ಅಮಾನತು ಮಾಡಿದ್ದಾರೆ. ಇನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದ ಮಂಗಳೂರು ಮಹಿಳಾ ಠಾಣೆಯ ಇನ್ಸ್ಪೆಕ್ಟರ್ ಸಹಿತ ಪೊಲೀಸರು ಕರ್ತವ್ಯದ ಅವಧಿಯಲ್ಲಿ ಠಾಣೆಯಲ್ಲಿ ಮಾಡಿದ್ದಾರೆನ್ನಲಾದ ಬ್ರೇಕ್

ಮಂಗಳೂರು: ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಕರ್ತವ್ಯ ಲೋಪ| ಐವರು ಸಿಬ್ಬಂದಿ ಅಮಾನತು| Read More »

ಸಹಕಾರ ಬ್ಯಾಂಕ್ ನಲ್ಲಿ ಅವ್ಯವಹಾರ| ಸಿನಿಮಾ ನಿರ್ಮಾಪಕ ಆನಂದ ಅಪ್ಪುಗೋಳ್ ಬಂಧನ

ಬೆಂಗಳೂರು: ಸಂಗೊಳ್ಳಿ ರಾಯಣ್ಣ ಸಹಕಾರ ಬ್ಯಾಂಕ್‌ ಅವ್ಯವಹಾರ ಆರೋಪಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್‌ವುಡ್‌ ನಿರ್ಮಾಪಕ ಆನಂದ್‌ ಅಪ್ಪುಗೋಳ್‌ʼ ಇಡಿ ಅಧಿಕಾರಿಗಳ ಬಂಧನಕ್ಕೆ ಒಳಗಾಗಿದ್ದಾರೆ. ಸಂಗೊಳ್ಳಿ ರಾಯಣ್ಣ ಸಹಕಾರ ಬ್ಯಾಂಕ್‌ ಅವ್ಯವಹಾರ ಆರೋಪದಲ್ಲಿ ಅಪ್ಪುಗೋಳ್‌ ವಿರುದ್ಧ 250 ಕೋಟಿ ರೂ ವಂಚನೆ ಆರೋಪವಿದ್ದು, ಪಿಎಂಎಲ್‌ಎ ಕಾಯ್ದೆಯಡಿ ಇಡಿ ದೂರು ದಾಖಲಿಸಿತ್ತು. ಸಧ್ಯ ಈ ಸಂಬಂಧ ಸ್ಯಾಂಡಲ್‌ವುಡ್‌ ನಿರ್ಮಾಪಕನನ್ನ ಇಡಿ ಅಧಿಕಾರಿಗಳು ಬಂಧಿಸಿದ್ದಾರೆ. ಆನಂದ ಅಪ್ಪುಗೋಳ ಮಾಲೀಕತ್ವದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೊಸೈಟಿಯ ಬಹುಕೋಟಿ ಠೇವಣಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ

ಸಹಕಾರ ಬ್ಯಾಂಕ್ ನಲ್ಲಿ ಅವ್ಯವಹಾರ| ಸಿನಿಮಾ ನಿರ್ಮಾಪಕ ಆನಂದ ಅಪ್ಪುಗೋಳ್ ಬಂಧನ Read More »

ಸುಳ್ಯ: ತೆಂಗಿನ ಮರದಿಂದ ಬಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೇ ಸಾವು

ಸುಳ್ಯ: ಇಲ್ಲಿನ ಸಮೀಪದ ಪೆರಾಜೆಯ ವ್ಯಕ್ತಿಯೋರ್ವರು 25ರಂದು ತನ್ನ ಮನೆಯ ದುರಸ್ತಿ ಕಾರ್ಯದ ಸಂದರ್ಭ ತೆಂಗಿನ ಮರದಿಂದ ಬಿದ್ದು ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಪೆರಾಜೆ ಬಂಗಾರಕೋಡಿಯ ಹರೀಶ್ ಎಂಬ ವ್ಯಕ್ತಿ ತಮ್ಮ ಹಳೆ ಮನೆಯನ್ನು ಕೆಡವಿ ಹೊಸ ಮನೆ ಕಟ್ಟಲು ಜಾಗ ಸಮತಟ್ಟು ಮಾಡಲು ಬಂದ ಜೆಸಿಬಿಯ ಚಾಲಕರಿಗೆ ಕುಡಿಯಲೆಂದು ಬೊಂಡ ತೆಗೆಯಲು ತೆಂಗಿನ ಮರ ಏರಿದ್ದರು. ಈ ಸಂದರ್ಭದಲ್ಲಿ ತೆಂಗಿನ ಮರದಿಂದ ಆಯತಪ್ಪಿ ಅವರು ಬಿದ್ದು ಗಂಭೀರ ಗಾಯಗೊಂಡರು.

ಸುಳ್ಯ: ತೆಂಗಿನ ಮರದಿಂದ ಬಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೇ ಸಾವು Read More »

ಕೆಎಸ್ಆರ್ ಟಿಸಿ‌ ಪ್ರಯಾಣಿಕರೇ ಗಮನಿಸಿ| ಹೊಸ ಮಾರ್ಗಸೂಚಿ ಪ್ರಕಟಿಸಿದ ನಿಗಮ|

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ರಾಜ್ಯ ಸರ್ಕಾರ ಕೊರೋನಾ ಹಾಗೂ ಓಮೈಕ್ರಾನ್ ಸೋಂಕು ಹರಡುವುದನ್ನು ತಪ್ಪಿಸಲು ಕಠಿಣ ನಿಯಮ ರೂಪಿಸಿದೆ. ಈ ಹಿನ್ನೆಲೆಯಲ್ಲಿ ಕೆ.ಎಸ್.ಆರ್.ಟಿಸಿ (KSRTC New Rules) ಹೊಸ ಮಾರ್ಗಸೂಚಿ ಪ್ರಕಟಿಸಿದೆ. ಕೊರೋನಾ ಕೇಸ್ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ನೈಟ್ ಕರ್ಪ್ಯೂ ಹಾಗೂ ವೀಕೇಂಡ್ ಕರ್ಪ್ಯೂ ಜಾರಿಗೆ ತಂದಿದ್ದು, ಜನರ ಓಡಾಟವನ್ನು ನಿಯಂತ್ರಿಸಲು ನಿಯಮ ಸಿದ್ಧವಾಗಿದೆ. ಈ ಹಿನ್ನೆಲೆಯಲ್ಲಿ ಕೆಎಸ್ಆರ್ಟಿಸಿ ಹೊಸ ಕೊರೋನಾ ಮಾರ್ಗಸೂಚಿ ಪ್ರಕಟಿಸಿದೆ. ವಾರಾಂತ್ಯ ದಿನದಂದು ಜನದಟ್ಟಣೆ ನೋಡಿಕೊಂಡು ಸಾರಿಗೆ

ಕೆಎಸ್ಆರ್ ಟಿಸಿ‌ ಪ್ರಯಾಣಿಕರೇ ಗಮನಿಸಿ| ಹೊಸ ಮಾರ್ಗಸೂಚಿ ಪ್ರಕಟಿಸಿದ ನಿಗಮ| Read More »

ಮುಸ್ಲಿಂ ಮಹಿಳೆಯರನ್ನು ಹರಾಜಿಗಿಟ್ಟ ಆಪ್ ಕೇಸ್: ಬೆಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿ ಅರೆಸ್ಟ್

ನವದೆಹಲಿ: ಮುಸ್ಲಿಂ ಮಹಿಳೆಯರನ್ನು ಅವಮಾನಿಸುವ ದೃಷ್ಟಿಯಿಂದ ಬುಲ್ಲಿ ಬಾಯ್ ಆಪ್ ಮೂಲಕ ಹರಾಜಿಗಿಟ್ಟ ಕೇಸ್ ಗೆ ಸಂಬಂಧಿಸಿ ಬೆಂಗಳೂರಿನಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ವಿದ್ಯಾರ್ಥಿ ವಿರುದ್ಧ ಐಪಿಸಿ ಮತ್ತು ಐಟಿ ಕಾಯ್ದೆಯಡಿ ದೂರು ದಾಖಲಿಸಿದ್ದಾರೆ. ಆರೋಪಿಯನ್ನು ಮುಂಬೈನಲ್ಲಿ ವಿಚಾರಿಸುವುದಾಗಿ ತಿಳಿದು ಬಂದಿದೆ. ಆರೋಪಿಯ ಹೆಸರನ್ನು ಈವರೆಗೆ ಬಹಿರಂಗಪಡಿಸಿಲ್ಲ. ಮುಸ್ಲಿಂ ಮಹಿಳೆಯರ ಹರಾಜಿಗಿಟ್ಟ ಆಪ್ ವಿರುದ್ಧ ಹಲವರು ದೂರನ್ನು ದಾಖಲಿಸಿದ್ದರು.

ಮುಸ್ಲಿಂ ಮಹಿಳೆಯರನ್ನು ಹರಾಜಿಗಿಟ್ಟ ಆಪ್ ಕೇಸ್: ಬೆಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿ ಅರೆಸ್ಟ್ Read More »

ಉಡುಪಿ: ಕೇಸರಿ ಶಾಲು v/s ಸ್ಕಾರ್ಫ್ ಕಿತ್ತಾಟ| ಕಾಲೇಜು ವಿದ್ಯಾರ್ಥಿಗಳ ನಡುವೆ ಮುಸುಕಿನ ಗುದ್ದಾಟ| ನಾ ಕೊಡೆ, ನೀ ಬಿಡೆ…!

ಕಿನ್ನಿಗೋಳಿ: ಉಡುಪಿ, ಚಿಕ್ಕಮಗಳೂರಿನ ಕಾಲೇಜುಗಳಲ್ಲಿ ಸ್ಕಾರ್ಫ್-ಕೇಸರಿ ಶಲ್ಯ ವಿವಾದಗಳು ಹಸಿಯಾಗಿರುವಾಗಲೇ, ಇತ್ತ ದಕ್ಷಿಣ ಕನ್ನಡ ಜಿಲ್ಲೆಯ ಐಕಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಕಿನ್ನಿಗೋಳಿ ಸಮೀಪದ ದಾಮಸ್ಕಟ್ಟೆ ಪೊಂಪೈ ಕಾಲೇಜಿನಲ್ಲಿ ಸ್ಕಾರ್ಪ್ ವಿವಾದ ಪ್ರಾರಂಭವಾಗಿದೆ. ಕಾಲೇಜಿನಲ್ಲಿ ಮುಸ್ಲಿಂ ವಿದ್ಯಾರ್ಥಿನಿಗಳು ಸ್ಕಾರ್ಪ್ ಹಾಕಿ ತರಗತಿ ಹಾಜರಾದ ಕಾರಣ, ಹಿಂದೂ ವಿದ್ಯಾರ್ಥಿ -ವಿದ್ಯಾರ್ಥಿನಿಯರು ಕೇಸರಿ ಶಾಲು ಹಾಕಿ ತರಗತಿ ಹಾಜರಾಗಿದ್ದಾರೆ. ವಿದ್ಯಾರ್ಥಿಗಳು ಸ್ಕಾರ್ಪ್ ವಿಚಾರ ಕುರಿತು ಶಾಲಾ ಆಡಳಿತ ಮಂಡಳಿಗೆ ಮಾಹಿತಿ ನೀಡಿದ್ದು, ಆಡಳಿತ ಮಂಡಳಿ ಸಭೆ ನಡೆದಿದೆ ಎನ್ನಲಾಗಿದೆ. ಮುಸ್ಲಿಂ

ಉಡುಪಿ: ಕೇಸರಿ ಶಾಲು v/s ಸ್ಕಾರ್ಫ್ ಕಿತ್ತಾಟ| ಕಾಲೇಜು ವಿದ್ಯಾರ್ಥಿಗಳ ನಡುವೆ ಮುಸುಕಿನ ಗುದ್ದಾಟ| ನಾ ಕೊಡೆ, ನೀ ಬಿಡೆ…! Read More »